Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

KSRTC ಸೊಸೈಟಿಗೂ, KSRTCಗೂ ಯಾವುದೇ ಸಂಬಂಧವಿಲ್ಲ: ಸ್ಪಷ್ಟೀಕರಣ

ಸುದ್ದಿಮೂಲ ವಾರ್ತೆ
ಬೆಂಗಳೂರು,ಮೇ19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತದ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಕೆಲವೊಂದು ಮಾಧ್ಯಮಗಳಲ್ಲಿ‌ ಪ್ರಕಟವಾಗಿರುವ ಸುದ್ದಿಗೆ ಸಂಬಂಧಪಟ್ಟಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.

KSRTC ಸೊಸೈಟಿಯಲ್ಲಿ 39 ಹುದ್ದೆಗಳ‌ ನೇಮಕಾತಿಯಲ್ಲಿ ಗೋಲ್ಮಾಲ್ ಎಂದು ಕೆಲವು ಮಾಧ್ಯಮಗಳಲ್ಲಿ ಸುದ್ಧಿ ಪ್ರಕಟವಾಗಿರುತ್ತದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತಕ್ಕೂ (ಸೊಸೈಟಿಗೂ) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್ಆರ್‌ಟಿಸಿಗೂ) ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತವನ್ನು ಸಹಕಾರ ಸಂಘದ ನಿಯಮಾವಳಿ ಅಡಿಯಲ್ಲಿ ನೌಕರರು ನಡೆಸುತ್ತಿದ್ದು, ಈ ಸಂಘದ ವ್ಯವಹಾರಗಳಲ್ಲಿ ಕೆಎಸ್ಆರ್ ಟಿ ಸಿ ಆಡಳಿತ ಮಂಡಳಿಯು ಯಾವುದೇ ರೀತಿಯಲ್ಲೂ ಹಸ್ತಕ್ಷೇಪ ಮಾಡಲು ಅವಕಾಶವಿರುವುದಿಲ್ಲ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನೌಕರರ ಕ್ರೆಡಿಟ್ ಸಹಕಾರ ಸಂಘ ನಿಯಮಿತದಲ್ಲಿ ನೀಡಲಾಗಿರುವ ನೇಮಕಾತಿ ಜಾಹೀರಾತು ಇತರೆ ವ್ಯವಹಾರದ ಕುರಿತು ನಿಗಮಕ್ಕೆ ಯಾವುದೇ ಮಾಹಿತಿ ಇರುವುದಿಲ್ಲ ಆದ್ದರಿಂದ ಆ ಅವ್ಯವಹಾರದ ಕುರಿತು ನಿಗಮಕ್ಕೆ ಯಾವುದೇ ಸಂಬಂಧವಿರುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ