Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಯನಗರ ವಾಣಿಜ್ಯ ಸಂಕೀರ್ಣದ ಪಾದಚಾರಿ ಮಾರ್ಗದ ಒತ್ತುವರಿ ತೆರವು  

ಸುದ್ದಿಮೂಲ ವಾರ್ತೆ

ಬೆಂಗಳೂರು, ನ. 07 : ನಗರದ ದಕ್ಷಿಣ ವಲಯದ ವ್ಯಾಪ್ತಿಗೆ ಬರುವ ಜಯನಗರ ವಿಭಾಗದ ಜಯನಗರ ವಾಣಿಜ್ಯ ಸಂಕೀರ್ಣದ 9ನೇ ಮುಖ್ಯರಸ್ತೆ, 10ನೇ ಮುಖ್ಯಸ್ತೆ ಹಾಗೂ 27ನೇ ಅಡ್ಡರಸ್ತೆ, 27ನೇ ಎ ಅಡ್ಡರಸ್ತೆ, 30ನೇ ಅಡ್ಡರಸ್ತೆ ಸುತ್ತಮುತ್ತಲಿನ ರಸ್ತೆಗಳ ಪಾದಚಾರಿ ಮಾರ್ಗದಲ್ಲಿನ ಒತ್ತುವರಿ ತೆರವು ಕಾರ್ಯಚರಣೆಯನ್ನು ನಡೆಸಲಾಯಿತು.

ಉಚ್ಛ ನ್ಯಾಯಾಲಯ ಹೊರಡಿಸಿರುವ ಆದೇಶದನುಸಾರ ಮತ್ತು ಮುಖ್ಯ ಆಯುಕ್ತರು ಬಿಬಿಎಂಪಿ ರವರ ಆದೇಶದಂತೆ ಪಾದಚಾರಿ ಮಾರ್ಗದಲ್ಲಿ ಇಟ್ಟಿರುವ ಅನಧಿಕೃತ ಪೆಟ್ಟಿ ಅಂಗಡಿ, ಅಂಗಡಿ ಮುಂಗಟ್ಟುಗಳು, ಅನುಪಯುಕ್ತ ತಳ್ಳುವ ಗಾಡಿಗಳು, ಹಣ್ಣಿನ ಬಾಕ್ಸ್‌ಗಳನ್ನು ತೆರವುಗೊಳಿಸಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅನುವುಮಾಡಲಾಯಿತು.

ಕಾರ್ಯಾಚರಣೆ ನಡೆಯುವ ಮುನ್ನ ವ್ಯಾಪಾರಿಗಳ ಗಮನಕ್ಕೆ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡದಂತೆ ಧ್ವನಿವರ್ಧಕ ಮುಖಾಂತರ ತಿಳಿಸಲಾಗಿದ್ದರೂ ಕೂಡ ರಸ್ತೆಗಳಲ್ಲಿ ಸುಮಾರು 1ಕೀ. ಮೀಟರ್ ರಷ್ಟು ಉದ್ದದ ಪಾದಚಾರಿ ಹಾಗೂ ರಸ್ತೆಯಲ್ಲಿ ಅನಧಿಕೃತವಾಗಿ ವ್ಯಾಪಾರ ನಡೆಸುತ್ತಿದ್ದ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಈ ವೇಳೆ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಆರೋಗ್ಯಾಧಿಕಾರಿಗಳು, ಮಾರುಕಟ್ಟೆ ವಿಭಾಗದ ಅಧಿಕಾರಿಗಳು, ಪೋಲಿಸ್ ಅಧಿಕಾರಿಗಳು, ಸಂಚಾರಿ ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಮಾರ್ಷಲ್‌ಗಳು, ಗ್ಯಾಂಗ್‌ಮನ್‌ಗಳು ತೆರವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ