Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೋಡ ಬಿತ್ತನೆ ಆಯಾ ಜಿಲ್ಲೆಗಳ ನಿರ್ಧಾರಕ್ಕೆ: ಚಲುವರಾಯಸ್ವಾಮಿ

ಸುದ್ದಿಮೂಲ ವಾರ್ತೆ

ಕೋಲಾರ, ಸೆ.30: ಮೋಡ ಬಿತ್ತನೆ ಆಯಾಯ ಜಿಲ್ಲೆಗಳ ನಿರ್ಧಾರಕ್ಕೆ ಬಿಡಲಾಗಿದೆ. ರಾಜ್ಯಮಟ್ಟದಿಂದ ಅಂತಹ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಸಚಿವರು, ಬರ ಪರಿಸ್ಥಿತಿ ಬಗ್ಗೆ ಕೇಂದ್ರಕ್ಕೆ ವರದಿ ಸಲ್ಲಿಸಲಾಗಿದೆ. ಮುಂದಿನ ವಾರ ಕೇಂದ್ರ ನಿಯೋಗ ಬರುವ ನಿರೀಕ್ಷೆ ಇದೆ ಎಂದು ಸಚಿವರು ಹೇಳಿದರು.

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ತಾಂತ್ರಿಕ ಸಮಿತಿ ನಮಗೆ ಅನ್ಯಾಯ ಮಾಡುತ್ತಿದೆ. ನಾವು ನೀರು ಬಿಡಲು ಆಗಲ್ಲ ಅನ್ನುವ ವಾದ ಮಾಡುತ್ತಾ ಬಂದಿದ್ದೇವೆ. ನಮ್ಮ ಕಾನೂನು ಹಾಗೂ ತಾಂತ್ರಿಕ ತಂಡ ಸತತ ಪ್ರಯತ್ನ ಮಾಡುತ್ತಿದೆ. ನಾವು ಸಹ ಹಲವು ಬಾರಿ ಮನವಿ ಮಾಡಿದ್ದೇವೆ, ಈಗ ನಾವು ಮೇಲ್ಮನವಿ ಹೋಗುತ್ತಿದ್ದೇವೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಒಂದು ವರದಿ ನೀಡಿದರೆ ನಮಗೆ ಬಹಳ‌ ಅನುಕೂಲ ವಾಗಲಿದೆ. ರಾಜ್ಯ ಸರ್ಕಾರ ಇತಿ ಮಿತಿಯಲ್ಲಿ ಏನೆಲ್ಲಾ ಮಾಡಬೇಕು ಅದನ್ನ ಮಾಡುತ್ತಿದೆ ಎಂದು ಕೃಷಿ ಸಚಿವರು ಹೇಳಿದರು.

ಬಳಿಕ ಕೃಷಿ ಸಚಿವರು ಕೋಲಾರ ತಾಲ್ಲೂಕು ಪುರಹಳ್ಳಿ ಗ್ರಾಮದಲ್ಲಿ ಮಳೆಯ ಕೊರತೆಯಿಂದ ಹಾನಿಗೀಡಾಗಿರುವ ರಾಗಿ ಬೆಳೆ ತಾಕಿಗೆ ಭೇಟಿ ನೀಡಿ ಪರಿಶೀಲಿಸಿ ರೈತರ ಅಹವಾಲು ಆಲಿಸಿದರು.

ಪ್ರತಿ ಬಾರಿ ತಪ್ಪದೆ ಬೆಳೆ ವಿಮೆ ಮಾಡಿಸುವಂತೆ ರೈತರಿಗೆ ಸಲಹೆ ನೀಡುವ ಮೂಲಕ ಅದರಿಂದ ಆಗುವ ಅನುಕೂಲಗಳನ್ನು ವಿವರಿಸಿದರು.

ನಂತರ ಸಚಿವರು ಸೀತಿ ಗ್ರಾಮದ ಪ್ರಗತಿ ಪರ ರೈತರು ಬರದ ನಡುವೆಯೂ ಯಶಸ್ವಿಯಾಗಿ ಬಿತ್ತನೆ ಮೂಲಕ ಬೆಳೆದಿರುವ ರಾಗಿ ಬೆಳೆ ಪ್ರದೇಶಕ್ಕೆ ಭೇಟಿ ನೀಡದರು. ಇದೇ ವೇಳೆ ಸಚಿವರು ಬೆಳೆ ಸಮೀಕ್ಷೆ ಪ್ರಾತ್ಯಕ್ಷಿಕೆ ನಡೆಸಿ ಸ್ವತಃ ಸಮೀಕ್ಷೆ ಕಾರ್ಯ ನಡೆಸಿದರು.

ತದ ನಂತರ ಸಚಿವರು ಕೃಷ್ಣಾಪುರ ಗ್ರಾಮದಲಿ ಸಮಗ್ರ ಕೃಷಿ ಪದ್ದತಿ ಅಳವಡಿಸಿ ಕೊಂಡು ಉತ್ತಮ‌ ಲಾಭ ಗಳಿಸುತ್ತಿರುವ ರೈತ ರಾಜಣ್ಣ ಅವರು ಜಮೀನಿಗೆ ಭೇಟಿ ನೀಡಿ ಪರಿಶೀಲಿಸಿ ರೈತರೊಂದಿಗೆ ಸಂವಾದ ನಡೆಸಿದರು.

ಶಾಸಕರಾದ ಕೊತ್ನೂರು ಮಂಜುನಾಥ್, ನಂಜೇಗೌಡ, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ವಿಧಾನ ಪರಿಷತ್ ಮಾಜಿ ಸಭಾಪತಿ ಸುದರ್ಶನ್, ಕೃಷಿ ಹಾಗೂ ಜಲಾನಯನ ಇಲಾಖೆಯ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ