Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆ ಬಿಜೆಪಿ ಶಾಸಕರಿಗೆ ಡಿಕೆ ಶಿವಕುಮಾರ್ ಕರೆ ಮಾಡುತ್ತಿದ್ದಾರೆ

ಸುದ್ದಿಮೂಲ ವಾರ್ತೆ
ಶಿವಮೊಗ್ಗ, ಏ.8: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಕುರಿತು ಯಾವುದೇ ಆತಂಕ ಇಲ್ಲ,  ನಿರೀಕ್ಷೆ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಶಿವಮೊಗ್ಗದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಆಕಾಂಕ್ಷಿಗಳಿದ್ದಾಗ ಪೈಪೋಟಿ ಸಹಜವಾಗಿ ಇರಲಿದೆ. 8 ಮತ್ತು 9 ರಂದು ಚುನಾವಣಾ ಆಯ್ಕೆ ಸಮಿತಿ ಸಭೆ ಸೇರಿ, ನಂತರ ಅಭ್ಯರ್ಥಿಗಳ ಪಟ್ಟಿಯನ್ನು  ಬಿಡುಗಡೆ ಮಾಡುವುದಾಗಿ ತಿಳಿಸಿದರು.

ಬಿಜೆಪಿ ಪಟ್ಟಿಯು ವ್ಯವಸ್ಥಿತವಾಗಿ ಪ್ರಜಾಪ್ರಭುತ್ವದ ರೀತಿಯಲ್ಲಿ  ಸಿದ್ಧವಾಗುತ್ತಿದೆ.  ಬಿಜೆಪಿಯ ಎಲ್ಲಾ ಹಂತದ ಕಾರ್ಯಕರ್ತರ ಭಾವನೆ, ತಾಲೂಕು ಹಾಗೂ  ಜಿಲ್ಲಾ ಮಟ್ಟದ ಸಮಿತಿಗಳು ಚರ್ಚಿಸಿ ಜೊತೆ ಜನರ ಭಾವನೆಯನ್ನು ಗಮನದಲ್ಲಿಟ್ಟುಕೊಂಡು ಪಟ್ಟಿ ತಯಾರಿಸಲಾಗಿದೆ. ಕ್ಷೇತ್ರಗಳಿಗೂ ಮೂವರು ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿ ಕಳಿಸಲಾಗಿದೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ 60 ಕ್ಷೇತ್ರಗಳಲ್ಲಿ ಸರಿಯಾದ ಅಭ್ಯರ್ಥಿಗಳೇ ಇಲ್ಲಅಲ್ಲಿಂದ, ಇಲ್ಲಿಂದ ಅಭ್ಯರ್ಥಿಗಳ ಕರೆತಂದು ಟಿಕೆಟ್ ಕೊಡುವ ಪ್ರಯತ್ನ ನಡೆಸಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎರಡನೇ ಪಟ್ಟಿ ಬಿಡುಗಡೆಗೂ  ಮುನ್ನ ಬಿಜೆಪಿಯ ಬಹುತೇಕ ಶಾಸಕರುಗಳಿಗೆ ನಿಮಗಾಗಿ ಟಿಕೆಟ್ ಕಾದಿರಿಸಿದ್ದೇವೆ ಬರುತ್ತೀರಾ ಎಂದು ಕೇಳಿದ್ದರು. ಕಾಂಗ್ರೆಸ್ಸಿಗರು ಹೊರಗಡೆ ಶೂರತದ ಮಾತನಾಡುತ್ತಾರೆ ಒಳಗಡೆ ಹಕೀಕತ್ ಬೇರೆಯೇ  ಇದೆ ಎಂದರು.

ಒಳಮೀಸಲಾತಿ ಮುಟ್ಟಲು ಸಾಧ್ಯವಿಲ್ಲ
ಒಳಮಿಸಲಾತಿ ಸೇರಿದಂತೆ ಎಲ್ಲವನ್ನು ರದ್ದು ಮಾಡುವುಡಾಗಿ ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅದನ್ನು ಮುಟ್ಟಲು ಸಾಧ್ಯವಿಲ್ಲ. ಒಳ ಮೀಸಲಾತಿ ರದ್ದು ಮಾಡಲಿ ನೋಡೋಣ ಎಂದು ಸವಾಲು ಹಾಕಿದರು.  ಕಾಂಗ್ರೆಸ್ಸಿನ ಬಣರಾಜಕೀಯಕ್ಕೆ ಮಹತ್ವವಿಲ್ಲ. ಅವರು ದಿನವೂ ಜಗಳ  ಮಾಡುತ್ತಾರೆ ಎಂದರು.

ಮಹೇಶ್ ಕುಮಟಳ್ಳಿ ಸೋಲನ್ನು ನನ್ನ ತಲೆಗೆ ಕಟ್ಟಲು ನೋಡುತ್ತಿದ್ದಾರೆ ಎಂಬ ಲಕ್ಷ್ಮಣ ಸವದಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ,  ಲಕ್ಷ್ಮಣ್ ಸವದಿ ಅವರ ಬಳಿ ಮಾತನಾಡಿದ್ದು  ಆ ರೀತಿ ಏನೂ  ಇಲ್ಲ.  ಸವದಿ ಅವರು ಬಿಜೆಪಿ ಪಕ್ಷದ ಹಿರಿಯ ನಾಯಕರು,  ಡಿಸಿಎಂ ಆಗಿದ್ದವರು. ಅವರ ಜವಾಬ್ದಾರಿಯ ಬಗ್ಗೆ  ಅವರಿಗೆ ಅರಿವಿದೆ ಎಂದು ತಿಳಿದಿದ್ದೇನೆ. ಅವರ ಬಳಿ ಮಾತನಾಡಿದ್ದು ಎಲ್ಲವೂ ಸರಿ ಹೋಗುತ್ತದೆ ಎಂದರು.

ಮುಖ್ಯಮಂತ್ರಿಗಳಿಗೆ  ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ  ನಟ ಸುದೀಪ್ ಅವರನ್ನು  ಟೀಕೆ ಮಾಡುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬೇರೆ ಪಕ್ಷದವರು ಪ್ರಚಾರಕ್ಕೆ ಕರೆದರೆ ಹೋಗುವುದು ಅವರಿಗೆ ಬಿಟ್ಟ ವಿಚಾರ. ಕಷ್ಟಕಾಲದಲ್ಲಿ ನೆರವಾಗಿದ್ದ ಕಾರಣ   ಬಂದಿದ್ದೇನೆ,  ಉಳಿದವರು ಯಾರು ಬಂದಿಲ್ಲ ಎಂದು ಹೇಳಿದ್ದಾರೆ ಎಂದು ತಿಳಿಸಿದರು.

 

 

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ