Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಮಪತ್ರ ಪ್ರಕ್ರಿಯೆ ನಂತರ ಪ್ರಚಾರಕ್ಕೆ ಪ್ರಧಾನಿ ಆಗಮನ: ಸಿಎಂ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಏ. 20: ನಾಮಪತ್ರ ಪ್ರಕ್ರಿಯೆ ಮುಗಿದ ನಂತರ ಪ್ರಧಾನಿ ನರೇಂದ್ರ ಮೋದಿಯವರು ಪ್ರಚಾರಕ್ಕೆ ಬರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಲಿಂಗಾಯತ ಸಿಎಂ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ ಯಡಿಯೂರಪ್ಪ ನೇತೃತ್ವದಲ್ಲಿ ಲಿಂಗಾಯತ ನಾಯಕರ ಸಭೆ ನಡೆದ ಕುರಿತು ಮಾತನಾಡಿ ಸದ್ಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಚರ್ಚೆ ಆಗಿದೆ.

ಕಾಂಗ್ರೆಸ್ ನವರ ಅಪಪ್ರಚಾರಕ್ಕೆ ಹೇಗೆ ಪ್ರತ್ತುತ್ತರ ನೀಡಬೇಕು, ಲಿಂಗಾಯತ ಮುಖ್ಯಮಂತ್ರಿ ಬಗ್ಗೆಯೂ ಕೆಲವರು ಸಲಹೆ ಕೊಟ್ಟಿದ್ದಾರೆ. ಸಭೆಯಲ್ಲಿ ಧರ್ಮೇಂದ್ರ ಪ್ರಧಾನ್ ಅವರೂ ಇದ್ದರು. ಸಭೆಯಲ್ಲಿ ವ್ಯಕ್ತವಾಗಿರುವ ಭಾವನೆಗಳನ್ನು ವರಿಷ್ಠರಿಗೆ ತಿಳಿಸುವುದಾಗಿ ಹೇಳಿದ್ದಾರೆ. ಲಿಂಗಾಯತ ಸಿಎಂ ಘೋಷಣೆ ಬಗ್ಗೆ ಯಾವುದೇ ನಿರ್ಣಯ ಆಗಿಲ್ಲ ಎಂದು ಸ್ಪಷ್ಟ ಪಡಿಸಿದರು.

ಮಿಲಿಟರಿ ಹೊಟೇಲಿಂದಲೇ ಪ್ರಚಾರ ಆರಂಭ ಅಶೋಕ್ ಅವರಿಗೆ ಕನಕಪುರದಲ್ಲಿ ಮಿಲಿಟರಿ ಹೊಟೇಲ್ ಗೆ ಬಂದು ಹೋಗಿ ಎಂಬ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬಗ್ಗೆ ಉತ್ತರಿಸಿ ನಮ್ಮ ಪ್ರಚಾರ ಮಿಲಿಟರಿ ಹೊಟೇಲಿಂದಲೇ ಆರಂಭವಾಗಲಿದೆ. ಅಲ್ಲಿ ಸ್ಥಳೀಯ ಸಾಮಾನ್ಯ ಜನರಿರುತ್ತಾರೆ. ಅಂಥ ಸಾಮಾನ್ಯ ಜನರನ್ನು ಡಿಕೆಶಿ ಭೇಟಿ ಮಾಡುವುದಿಲ್ಲ.

ಸಾಮಾನ್ಯ ಜನರನ್ನು ಭೇಟಿ ಮಾಡಲು ಅಶೋಕ್ ತೆರಲಿದ್ದಾರೆ ಇದರಲ್ಲಿ ತಪ್ಪೇನಿದೆ. ಮಿಲಿಟರಿ ಹೊಟೇಲ್ ಗೆ ಯಾಕೆ ಹೋಗಬಾರದು ಎಂದು ಪ್ರಶ್ನಿಸಿದರು. ವಲಸೆ ಹೋದವರನ್ನು ವಾಪಸ್ಸು ಕರೆತರುವ ಕೆಲಸ ಮಾದುತ್ತಿದ್ದು, ಜಿಲ್ಲಾ, ಹೋಬಳಿ ಮಟ್ಟದಲ್ಲಿ ಆ ಕೆಲಸ ಮಾಡಲಾಗುತ್ತಿದೆ ಎಂದರು.

ಕಾಂಗ್ರೆಸ್ ವಿರುದ್ಧ ಸಿಎಂ ಕಿಡಿ ಕಾಂಗ್ರೆಸ್ ನದ್ದು ಲಿಂಗಾಯತ ವಿರೋಧಿ ನಡೆ 1967 ರಿಂದ ಈ ವರೆಗೆ 50 ವರ್ಷದಲ್ಲಿ ಒಬ್ಬ ಲಿಂಗಾಯತರನ್ನು ಕಾಂಗ್ರೆಸ್ ಸಿಎಂ ಮಾಡಿಲ್ಲ. ಮಧ್ಯೆ ವಿರೇಂದ್ರ ಪಾಟೀಲರು ಒಂಭತ್ತು ತಿಂಗಳು ಮುಖ್ಯಮಂತ್ರಿಗಳಾಗಿದ್ದರೂ ವಿರೇಂದ್ರ ಪಾಟೀಲರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಳ್ಳಲಿಲ್ಲ.

ವಿಮಾನನಿಲ್ದಾಣದಲ್ಲಿಯೇ ಅವರನ್ನು ಅವರನ್ನು ತೆಗೆದು ಹಾಕಲಾಗಿದೆ. ರಾಜಶೇಖರ ಮೂರ್ತಿಯವರನ್ನು ನಡೆಸಿಕೊಂಡ ರೀತಿಯೂ ಸರಿಯಲ್ಲ ಲಿಂಗಾಯತ ಧರ್ಮವನ್ನು ಒಡೆಯಲು ಕಾಂಗ್ರೆಸ್ ಪ್ರಯತ್ನಿಸಿತ್ತು. ಮತಬ್ಯಾಂಕ್ ಗಾಗಿ ಧರ್ಮ ಒಡೆಯಲು ಹೋಗಿದ್ದನ್ನು

ಜನ‌ ಮರೆಯೋಲ್ಲ.

ಕಾಂಗ್ರೆಸ್‌ನವರು ದಲಿತರು, ಹಿಂದುಳಿದವರು, ಲಿಂಗಾಯತರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ