Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ನೂರು ವರ್ಷದ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ :ಸಿಎಂ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಹುಬ್ಬಳ್ಳಿ,ಏ.28: ಕಾಂಗ್ರೆಸ್ ತಮ್ಮ ನೂರು ವರ್ಷಗಳ ಸಂಸ್ಕೃತಿಯನ್ನು ಗಾಳಿಗೆ ತೂರಿದ್ದಾರೆ.

ಇನ್ನೂ ಅಧಿಕಾರದ ಮದದಲ್ಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

ಅವರು ಇಂದು ಹುಬ್ಬಳ್ಳಿಯ ತಮ್ಮ ಆದರ್ಶ ನಗರದ ನಿವಾಸ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಜನರನ್ನು ಗುಲಾಮರೆಂದು ತಿಳಿದುಕೊಂಡಿದರುವ ಕಾಂಗ್ರೆಸ್,

ಮತ ಬ್ಯಾಂಕ್ ಎಂದು ತಿಳಿದುಕೊಂಡು ಏನು ಬೇಕಾದರೂ ಮಾತಾಡಿದರೆ ನಡೆಯುತ್ತದೆ ಎಂಬ ಅಮಲಿನಲ್ಲಿ ಇದ್ದಾರೆ. ಜನ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಾತಾಡಿರೋದು ಎಲ್ಲಕಿಂತ ಹೆಚ್ಚು ನೋವಾಗಿದೆ. ಸಿದ್ದರಾಮಯ್ಯ ಹಾಗೂ ಖರ್ಗೆ ಅವರು 50 ವರ್ಷ ಸಾರ್ವಜನಿಕ ಜೀವನ ಕಳೆದಿದ್ದಾರೆ. ಕೊನೆಯ ಹಂತದಲ್ಲಿ ಗೌರವ ಯುತವಾಗಿ ನಡೆದುಕೊಂಡರಿಗೆ ಶೋಭೆ ತರುತ್ತದೆ ಎಂದರು. ಇಲ್ಲದಿದ್ದರೆ ಜನ ಇಷ್ಟು ವರ್ಷ ಇವರು ಏನು ಮಾಡಿದರು ಎಂದು ಕೇಳುತ್ತಾರೆ ಎಂದರು.

ಮೋದಿ ಅವರನ್ನು ಯಾವಾಗ ಯಾವಾಗ ಬೈದ್ರು ಅವಾಗ ಮೋದಿ ಮತ ಜಾಸ್ತಿ ಆಗಿವೆ. ಮುಖ್ಯಮಂತ್ರಿ ಆದಾಗ ಬೈದರು,ಮೋದಿ ಮೂರು ಬಾರಿ ಮುಖ್ಯಮಂತ್ರಿ ಆದರು. ಪ್ರಧಾನಮಂತ್ರಿಯಾದರು. ಇದೀಗ ವಿಷ ಸರ್ಪ ಎಂಬ ಹೇಳಿಕೆ ಮೂಲಕ ಜನರ ಭಾವನೆ ಕೆರಳುಸತ್ತಿದ್ದಾರೆ.ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಸಿದ್ದರಾಮಯ್ಯ ಅವರು ನನ್ನನ್ನು ಗುರಿಯಾಗಿಸುವುದು ಸಹಜ ಎಂದರು.

ಕಾಂಗ್ರೆಸ್ ನವರ ಮತ ಬ್ಯಾಂಕ್ ಆಗಿದೆ. ಅವರ ಮತ ಬ್ಯಾಂಕ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು. ಅವರ ಕಾಲ ಕೆಳಗೆ ಇದ್ದ ಮತಗಳು ಸರಿದು ಹೋಗಿದೆ ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದರು.

ಎಸ್ಸಿ, ಎಸ್ಟಿ, ಒಬಿಸಿ ಮತಗಳು ಅವರ ಕೈ ತಪ್ಪಿ ಅವರ ಅಣೆಕಟ್ಟು ಒಡೆದಿದೆ ಎಂದ ಸಿಎಂ, ಸಿದ್ದರಾಮಯ್ಯ ಇದೀಗ ಡಿಕೆ ಶಿವಕುಮಾರ್ ಗೆ ಪೈಪೋಟಿ ಕೊಡುತ್ತಿದ್ದಾರೆ. ಆ ಮಟ್ಟಕ್ಕೆ ಸಿದ್ದರಾಮಯ್ಯ ಇಳಿದಿದ್ದಾರೆ.

ಆಂತರಿಕವಾಗಿ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಜೊತೆ ಪೈಪೋಟಿಗೆ ಇಳಿದಿದ್ದಾರೆ. ಸಿದ್ದರಾಮಯ್ಯ ಅವರ ಮೇಲೆ 8 ಸಾವಿರ ಕೋಟಿ ರೂ.ಗಳ ಭ್ರಷ್ಟಾಚಾರದ ಆರೋಪ ಇದೆ.

ಅದಕ್ಕೆ ಉತ್ತರ ಕೊಡಬೇಕಾಗತ್ತೆ ಎಂದು ಹೀಗೆ ಮಾತನಾಡುತ್ತಿದ್ದಾರೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ