Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಎರಡು ಹಂತದಲ್ಲಿ ಪಟ್ಟಿ ಶೀಘ್ರ ಬಿಡುಗಡೆ: ಸಿಎಂ ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ನವದೆಹಲಿ, ಏ,11:  ಬಿಜೆಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಎರಡು ಹಂತದಲ್ಲಿ  ಅತಿ ಶೀಘ್ರದಲ್ಲಿ ಬಿಡುಗಡೆ ಆಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ದೆಹಲಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳಸುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೆ.ಎಸ್. ಈಶ್ವರಪ್ಪ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದು,  ಚುನಾವಣಾ ರಾಜಕಾರಣದಿಂದ ಹಿಂದೆ ಸರಿದಿರುವುದಾಗಿ ಹೇಳಿದ್ದಾರೆ. ಅವರು ಹಲವಾರು ದಿನಗಳಿಂದ ಈ ಮಾತು ಹೇಳುತ್ತಿದ್ದರು‌.  ನಾವು ಅವರಿಗೆ ನಿಮ್ಮ ಅನುಭವದ ಅಗತ್ಯ ವಿದೆ ಎಂದು ತಿಳಿಸಿದ್ದೆವು.  ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿರುವುದರಿಂದ ಅದನ್ನು ಅಧ್ಯಕ್ಷರೇ  ತೀರ್ಮಾನ ಮಾಡುತ್ತಾರೆ.  ಈಶ್ವರಪ್ಪ ಅವರು ರಾಜಕಾರಣದಲ್ಲಿ ಮುಂದುವರೆಯಬೇಕು.  ಚುನಾವಣೆಯಲ್ಲಿ ಸ್ಪರ್ಧಿಸುವುದು ಅವರಿಗೆ ಬಿಟ್ಟಿದ್ದು ಎಂದು ತಿಳಿಸಿದರು.


ನಮ್ಮ ಪಕ್ಷದಲ್ಲಿ ಒಂದು ಸಂಪ್ರದಾಯ ಬೆಳೆಯುತ್ತಿದೆ.ಇನ್ನೊಂದೆಡೆ ಕಾಂಗ್ರೆಸ್ ನಲ್ಲಿ  92 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ಕೊಟ್ಟಿದ್ದಾರೆ. ಇದು ಅವರಿಗೂ ನಮಗೂ ಇರುವ ವ್ಯತ್ಯಾಸ. ಜಗದೀಶ್ ಶೆಟ್ಟರ್ ಅವರ ಜೊತೆ ಮಾತನಾಡಿದ್ದು, ಅವರು ಕ್ಷೇತ್ರದಲ್ಲಿ ಇನ್ನಷ್ಟು ಕೆಲಸ ಮಾಡಬೇಕಿದೆ. ಅದಕ್ಕೆ ಇನ್ನೊಂದು ಅವಕಾಶ ಬೇಕು ಅಂತ ಹೇಳಿದಾರೆ. ಅದನ್ನು ವರಿಷ್ಠರ  ಗಮನಕ್ಕೆ ತಂದಿದ್ದೇನೆ. ಬೇರೆ ಯಾವುದೇ ನಾಯಕರ  ವಿಷಯಗಳು ನಮ್ಮ ಮುಂದೆ ಇಲ್ಲ. ಲಕ್ಷ್ಮಣ ಸವದಿಯವರೊಂದಿಗೆ ಸಂಪರ್ಕದಲ್ಲಿ ಇದ್ದು, ಮಹೇಶ ಕುಮಠಳ್ಳಿ ಅವರು ನಾವು ಸರ್ಕಾರ ರಚನೆಗೆ ಕಾರಣರಾದವರು.  ಹೀಗಾಗಿ  ಅವರಿಗೆ ಯಾವುದೇ ದುಡುಕಿನ ನಿರ್ಧಾರ ತೆಗೆದುಕೊಳ್ಳದಂತೆ ಸೂಚಿಸಿದ್ದೇನೆ ಎಂದರು.


ದೇಶದಲ್ಲಿ ಬಿಜೆಪಿ ಸಾಕಷ್ಟು ಬದಲಾವಣೆ ತರುತ್ತಿದೆ. ಇದುವರೆಗೂ ಆಡಳಿತ ವಿರೋಧಿ ಅಲೆ ಇತ್ತು. ಈಗ ಆಡಳಿತ ಪರ ಅಲೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ