Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌ನವರು ಹತಾಶರಾಗಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ: ಸಿಎಂ ಬೊಮ್ಮಾಯಿ

ನವದೆಹಲಿ: ಕಾಂಗ್ರೆಸ್ ನವರು ಹತಾಶರಾಗಿ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಾನು ಮಹಿಳೆಯರಿಗೆ ವಿಶೇಷ ಯೋಜನೆ ಜಾರಿಗೆ ತರುತ್ತೇನೆ ಎಂದು ಘೋಷಣೆ ಮಾಡಿದ್ದೆ, ಅದೇ ರೀತಿ ಅವರು ಹತಾಶ ಭಾವನೆಯಿಂದ ಯೋಜನೆ ಘೋಷಣೆ ಮಾಡಿದ್ದಾರೆ. ರಾಜ್ಯದ ಜನರು ಅದನ್ನು ಒಪ್ಪುವುದಿಲ್ಲ ಎಂದು ಹೇಳಿದರು.

ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,

ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು.

ಬಜೆಟ್ ಅಧಿವೇಶನದ ನಂತರ ರಾಜ್ಯದ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌

ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇನೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರು ಅವರು ಪರಿಣಾಮ ಬಿರಿಲ್ಲ. ರಾಜ್ಯದಲ್ಲಿ ಬಿಜೆಪಿ ನಡೆಸಿದವಜನ ಸಂಕಲ್ಪ ಯಾತ್ರೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಮಾಡಲಾಗಿದೆ.

ಹೇಗೆ ಮಾಡಬೇಕು ಎಂದು ನಿರ್ಧಾರ ಆಗಿಲ್ಲ. ಆದರೆ ನಾಲ್ಕು ದಿಕ್ಕಿನಿಂದ ರಥಯಾತ್ರೆ ಮಾಡಬೇಕು ಎಂದು ನಿರ್ಧರಿಸಿದೆ ಎಂದು ಹೇಳಿದರು.

ಇದೇ ವೇಳೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆಗಳ ಕುರಿತು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಈ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇವೆ . ಕಾರ್ಯಕಾರಿಣಿ ಮುಗಿದ ಬಳಿಕ ಈ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ