Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಧಿಕಾರಕ್ಕೆ ಅಂಟಿ ಕೂರುವುದಿಲ್ಲ : ಸಿಎಂ ಸ್ಪಷ್ಟನೆ

ಸುದ್ದಿಮೂಲ ವಾರ್ತೆ

ಮಂಡ್ಯ ಅ. 31 : ಅಧಿಕಾರಕ್ಕೆ ಅಂಟಿ‌ಕೂರುವುದಲ್ಲ, ರೈತರ ಹಿತ ಸಂರಕ್ಷಣೆಯೇ ಸರ್ಕಾರದ ಮೊದಲ ಆದ್ಯತೆ ಎಂದು ಮುಖ್ಯ ‌ಮಂತ್ರಿ ಸಿದ್ದರಾಮಯ್ಯ ರೈತರಿಗೆ ಸ್ಪಷ್ಟ ಪಡಿಸಿದ್ದಾರೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕೃಷಿ ಸಚಿವರಾದ ಎನ್. ಚಲುವರಾಯ ಸ್ವಾಮಿ ಮಂಗಳವಾರ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪ್ರತಿಭಟನಾಕಾರರ ಮನವಿ ಪತ್ರ ಸ್ವೀಕರಿಸಿ ಅವರ ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದರು.

ನಾವು ಈ ವರ್ಷ ಭೀಕರ ಬರಗಾಲ ಎದುರಿಸುತ್ತಿದ್ದೇವೆ. ಮಳೆ ಪೂರ್ತಿ ಕೈಕೊಟ್ಟಿದೆ. ಇದರಿಂದ ಜಲಾಶಯಗಳು ತುಂಬದೆ ನಾವು ಸಂಕಷ್ಟದ ವರ್ಷದಲ್ಲಿ ಇದ್ದೇವೆ. ನಾವು ತಮಿಳುನಾಡಿಗೆ 177.25 ಟಿಎಂಸಿ ನೀರು ಕೊಡಬೇಕು ಎನ್ನುವ ಆದೇಶ ಹೊರಬಿದ್ದಿದೆ. ಪ್ರತಿ ತಿಂಗಳು ಇಷ್ಟಿಷ್ಟು ನೀರು ಬಿಡಬೇಕು ಎನ್ನುವ ಆದೇಶ ಇದೆ. ನಾವು ಕಾವೇರಿ ಪ್ರಾಧಿಕಾರ ಮತ್ತು ಸಮಿತಿ ಎದುರು ನೀರಿಲ್ಲ, ಆದ್ದರಿಂದ ನೀರು ಬಿಡಲು ಸಾಧ್ಯವಿಲ್ಲ ಎಂದು ನಮ್ಮ ವಾದವನ್ನು ಬಲವಾಗಿ ಮಂಡಿಸಿದ್ದೇವೆ ಎಂದರು.

ಆದರೂ, ಮೊದಲು 5000 ಕ್ಯೂಸೆಕ್ಸ್ ನೀರು ಬಿಡಲು ಹೇಳಿದರು, ಬಳಿಕ 3000 ಕ್ಯೂಸೆಕ್ಸ್ ನೀರು ಬಿಡಲು ಆದೇಶ ಬಂತು. ಅದಕ್ಕೂ ನಾವು ಒಪ್ಪಲಿಲ್ಲ. ಈಗ ನೆನ್ನೆ ದಿನ 2600 ಕ್ಯೂಸೆಕ್ಸ್ ನೀರು ಬಿಡಲು ಆದೇಶವಾಗಿದೆ. ಆದರೆ ನಾವು ಕುಡಿಯುವ ನೀರಿಗೆ ಮತ್ತು ಬೆಳೆ ಉಳಿಸಿಕೊಳ್ಳಲು ಮೊದಲ ಆದ್ಯತೆ ನೀಡುತ್ತೇವೆ. ಮುಂಗಾರು ಬೆಳೆಯನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತೇವೆ. ನಾನೂ ರೈತ ಹೋರಾಟದಲ್ಲಿ ಬಂದಿರುವ ರೈತರ ಮಗ. ನಾವೂ ಅಚ್ಚುಕಟ್ಟೆ ಪ್ರದೇಶದಲ್ಲೇ ಇದ್ದೇವೆ. ಆದ್ದರಿಂದ ರೈತರ ಸಂಕಷ್ಟ ನನಗೆ ಚೆನ್ನಾಗಿ ಗೊತ್ತಿದೆ. ಆದ್ದರಿಂದ ನಿಮ್ಮ ಹಿತ ಕಾಯಲು ಹಿಂದೆ ಬೀಳುವುದಿಲ್ಲ. ಅಧಿಕಾರಕ್ಕಾಗಿ ರೈತರನ್ನು ಬಲಿ ಕೊಡುವುದಿಲ್ಲ. ನಾವು ಕೇವಲ ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವವರಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

ರೈತರ ಹಿತ ಕಾಯಲು ಗಂಭೀರವಾದ, ಪ್ರಾಯೋಗಿಕವಾದ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಕಬ್ಬು ಬೆಳೆಗಾರರ ಹಿತಕ್ಕಾಗಿ ಮೈಶುಗರ್ ಸಕ್ಕರೆ ಕಾರ್ಖಾನೆಗೆ 50 ಕೋಟಿ ರೂ ಬಿಡುಗಡೆ ಮಾಡಿದ್ದೇವೆ. ನಾವು ನಿಮ್ಮ ಪರವಾಗಿ ಇರುವವರು. ಅನುಮಾನ ಬೇಡವೇ ಬೇಡ ಎಂದರು.

ಕಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರೂ ಸಹ ರೈತರ ಹಿತ ಕಾಯುವ ನಿಟ್ಟಿನಲ್ಲಿ ಸರ್ಕಾರದ ಬದ್ದತೆ ಬಗ್ಗೆ ಮನವರಿಕೆ ಮಾಡಿಕೊಟ್ಟರು.

ಶಾಸಕರಾದ ರವಿ ಗಣಿಗ, ದಿನೇಶ್ ಗೂಳಿಗೌಡ, ನರೇಂದ್ರಸ್ವಾಮಿ ಸೇರಿದಂತೆ ಹಲವು ಮಂದಿ ನಾಯಕರು ಪ್ರತಿಭಟನಾಕಾರರ ಬೇಡಿಕೆಗಳನ್ನು ಆಲಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ