Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಸಿಎಂ-ಡಿಸಿಎಂ ದೆಹಲಿ ಭೇಟಿ ಸಾಧ್ಯತೆ ಇಲ್ಲ: ಪೊನ್ನಣ್ಣ

ಸುದ್ದಿಮೂಲ ವಾರ್ತೆ ಬೆಂಗಳೂರು, ನ.29:
ಸದ್ಯಕ್ಕೆೆ ಮುಖ್ಯಮಂತ್ರಿಿ ಹಾಗೂ ಉಪಮುಖ್ಯಮಂತ್ರಿಿ ದೆಹಲಿಗೆ ಭೇಟಿ ನೀಡುವ ಸಾಧ್ಯತೆಗಳಿಲ್ಲ. ಬೆಳಗಾವಿ ಅಧಿವೇಶನಕ್ಕೆೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿಿ ಅವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವೆ ಉಪಾಹಾರ ಕೂಟದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯಲ್ಲಿ ಕೆಪಿಸಿಸಿ ಸಂಸದೀಯ ಸಭೆಗಳು ಅಥವಾ ಇನ್ಯಾಾವುದೇ ರೀತಿಯ ಚಟುವಟಿಕೆಗಳಿದ್ದರೆ ಅದರಲ್ಲಿ ಭಾಗವಹಿಸಲು ಹೋಗಬಹುದು. ಆದರೆ ರಾಜ್ಯ ರಾಜಕಾರಣದ ಚರ್ಚೆ ಕುರಿತಂತೆ ದೆಹಲಿಗೆ ಹೋಗುವುದಿಲ್ಲ ಎಂದು ತಿಳಿಸಿದರು.
ಇಬ್ಬರೂ ನಾಯಕರು ಉಪಾಹಾರ ಸೇವಿಸುವಾಗ ಸೌಜನ್ಯಕ್ಕಾಾಗಿ ನಾನು ಜೊತೆಯಲ್ಲಿದ್ದೆ. ಅವರಿಬ್ಬರ ನಡುವೆ ಚರ್ಚೆಗಳಾಗುವಾಗ ನಾನು ಇರಲಿಲ್ಲ. ಯಾವ ರೀತಿಯ ಮಾತುಕತೆಗಳಾದವು ಎಂದು ನನಗೆ ಗೊತ್ತಿಿಲ್ಲ. ಇಬ್ಬರ ನಡುವಿನ ಚರ್ಚೆಯ ಬಗ್ಗೆೆ ಹೈಕಮಾಂಡ್ ನಾಯಕರಿಗೆ ದೂರವಾಣಿಯಲ್ಲಿ ಮಾಹಿತಿ ನೀಡಲಾಗಿದೆ. ಬಳಿಕ ಮುಖ್ಯಮಂತ್ರಿಿ ಅವರು ಆರೋಗ್ಯ ತಪಾಸಣೆಗಾಗಿ ವೈದ್ಯರ ಬಳಿ ಹೋದರು ಎಂದು ಪೊನ್ನಣ್ಣ ಸ್ಪಷ್ಟ ಪಡಿಸಿದರು.
ತಾವು ಸದಾಕಾಲ ಮುಖ್ಯಮಂತ್ರಿಿ ಅವರ ಜೊತೆ ಇರುವುದರಿಂದಾಗಿ ಎಐಸಿಸಿಯ ಪ್ರಧಾನಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ತಮ ಮೊಬೈಲ್‌ಗೆ ಕರೆ ಮಾಡಿ, ಮುಖ್ಯಮಂತ್ರಿಿಯವರಿಗೆ ದೂರವಾಣಿ ನೀಡುವಂತೆ ಹೇಳಿದ್ದು, ಅದರ ಹೊರತಾಗಿ ಇಬ್ಬರೂ ನಾಯಕರ ಉಪಾಹಾರ ಕೂಟದಲ್ಲಿ ತಮ್ಮ ಪಾತ್ರ ಇಲ್ಲ ಎಂದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ