Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈಗಾರಿಕೋದ್ಯಮಿಗಳ ಜೊತೆ ಇಂದು ಸಿಎಂ ಸಭೆ: ದರ್ಶನಾಪುರ

ಸುದ್ದಿಮೂಲ ವಾರ್ತೆ

ಬೆಂಗಳೂರು,ಜೂ.22: ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕೈಗಾರಿಕೋದ್ಯಮಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಭೆ ನಡೆಸಲಿದ್ದಾರೆ ಎಂದು ಸಣ್ಣ ಕೈಗಾರಿಕೆ ಸಚಿವ ಶರಣ ಬಸಪ್ಪ ದರ್ಶನಾಪುರ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಮಾತನಾಡಿದ ಅವರು, ಸಣ್ಣ ಕೈಗಾರಿಕೆಗಳಿಂದ ವಿದ್ಯುತ್ ದರ ಹೆಚ್ಚಳ ವಿರೋಧಿಸಿ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದರು. ರಾಜ್ಯದ ಕೆಲವೆಡೆ ಸಣ್ಣ ಕೈಗಾರಿಕೆಗಳ ಸಂಘ ಪ್ರತಿಭಟನೆ ಮಾಡುತ್ತಿದ್ದಾರೆ. ಕೆಇಆರ್ಸಿ ವಿದ್ಯುತ್ ದರ ಹೆಚ್ಚಿಸಿದೆ. ವಿಧಾನಸಭೆ ಚುನಾವಣೆ ವೇಳೆ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ ಜೊತೆ ನಾಳೆ ಸಭೆ ಕರೆಯಲಾಗಿದೆ ಎಂದರು.

'ಸಭೆಯಲ್ಲಿ ಕೈಗಾರಿಕೆಗಳೋದ್ಯಮಿಗಳು ಭಾಗಿಯಾಗಲಿದ್ದಾರೆ. ಕಾಸಿಯಾ, ಎಫ್ಕೆಸಿಸಿಐ ಪ್ರತಿನಿಧಿಗಳು ಕೂಡಾ ಇರಲಿದ್ದಾರೆ. ಸಮಸ್ಯೆ, ಬೇಡಿಕೆಗಳನ್ನು ಆಲಿಸಲಾಗುವುದು. ಅಂತಿಮವಾಗಿ ಪರಿಹಾರಕ್ಕೆ ಬರಲಾಗುವುದು. ಎಲ್ಲ ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ'' ಎಂದು ಹೇಳಿದರು.

ಸಭೆ ನಡೆಸಿದ ಬಳಿಕ ಕೈಗಾರಿಕೋದ್ಯಮಿಗಳಿಗೆ ಸಮಾಧಾನ ಸಿಗುವ ಭರವಸೆ ಇದೆ. ಅವರ ಬೇಡಿಕೆಗಳನ್ನು ಆಲಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೈಗಾರಿಕೆಗಳ ಉಳಿವಿಗೆ ಏನೆಲ್ಲ ಮಾಡಬೇಕು ಅದನ್ನೆಲ್ಲವನ್ನೂ ಮಾಡಲಾಗುವುದು. ಕೈಗಾರಿಕೆಗಳು ರಾಜ್ಯದಲ್ಲಿ ಉದ್ಯೋಗ ಸೃಷ್ಟಿಸುತ್ತವೆ. ಹಾಗಾಗಿ ಸರ್ಕಾರದ ಮೇಲೆ ಸಾಕಷ್ಟು ಜವಾಬ್ದಾರಿ ಇದೆೆ. ಈ ನಿಟ್ಟಿನಲ್ಲಿ ಸಿಎಂ ನೇತೃತ್ವದ ಸಭೆಯಲ್ಲಿ ಪರಿಹಾರ ಹುಡುಕುತ್ತೇವೆ'' ಎಂದು ಮಾಹಿತಿ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ