ನಾಳೆಯಿಂದ ಮೂರು ದಿನ ಸಿಎಂ ಮೈಸೂರು ಜಿಲ್ಲಾ ಪ್ರವಾಸ
ಸುದ್ದಿಮೂಲವಾರ್ತೆ
ಮೈಸೂರು, ಆ.27: ಮುಖ್ಯಮಂತ್ರಿದ ಸಿದ್ದರಾಮಯ್ಯ ಅವರು ಆಗಸ್ಟ್ 28 ರಿಂದ 30 ರವರಗೆ ಜಿಲ್ಲೆಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಆಗಸ್ಟ್ 28 ರ ಬೆಳಿಗ್ಗೆ 11 ಗಂಟೆಗೆ ಜಿ.ಪಂ. ಸಭಾಂಗಣದ ಲ್ಲಿ ಆಯೋಜಿಸಿರುವ ಕೆ .ಡಿ.ಪಿ. ಸಭೆಯಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಸಿದ್ದಾರ್ಥ ನಗರದ ಕಣ್ಣಿನ ಆಸ್ಪತ್ರೆ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ರಾತ್ರಿ 7 ಗಂಟೆಗೆ ಹೋಟೆಲ್ ಜೆ.ಪಿ.ಪ್ಯಾಲೇಸ್ ನಲ್ಲಿ ಗಂಗೋತ್ರಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಆಗಸ್ಟ್ 29 ರಂದು ಬೆಳಿಗ್ಗೆ 10,30 ಕ್ಕೆ ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 1 ಗಂಟೆಗೆ ಕಡಕೋಳ ಕೈಗಾರಿಕಾ ಪ್ರದೇಶದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಧ್ಯಾಹ್ನ 1,45ಕ್ಕೆ ಕೆ.ಆರ್.ಆಸ್ಪತ್ರೆಯ ಸುಟ್ಟ ಗಾಯಗಳ ನವೀಕರಣ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ಗಂಟೆಗೆ ಮೈಸೂರು ಚಾಮರಾಜನಗರ ಶಾಸಕರುಗಳನ್ನು ಭೇಟಿ ಮಾಡಿ, ಸಂಜೆ 6 ಗಂಟೆಗೆ ವಕೀಲರುಗಳ ಸಂಘದ ಕಛೇರಿಗೆ ಭೇಟಿ ನೀಡುವರು.
ಆಗಸ್ಟ್ 30 ಬುಧವಾರ ಬೆಳಿಗ್ಗೆ 11 ಗಂಟೆಗೆ ಮಹಾರಾಜಅ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಗೃಹ ಲಕ್ಷ್ಮಿ ಯೋಜನೆಯ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು ಮಧ್ಯಾಹ್ನ 3,50 ಕ್ಕೆ ಸಿದ್ದಲಿಂಗಪುರದ ಕನಕ ಭವನ ಉಧ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.