Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.24: ಯಶಸ್ವಿ ಚಂದ್ರಯಾನ-3 ಕೈಗೊಂಡಿರುವ ವಿಜ್ಞಾನಿಗಳನ್ನು ಅಭಿನಂದಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಇಸ್ರೋ ಸಂಸ್ಥೆಗೆ ಭೇಟಿ ನೀಡಿದ್ದರು.

ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್ ಹಾಗೂ ಇಸ್ರೋ ವಿಜ್ಞಾನಿಗಳನ್ನು ಮೈಸೂರು ಪೇಟ ತೊಡಿಸಿ, ಹಾರ ಹಾಕಿ, ಸಿಹಿ ತಿನ್ನಿಸಿ ಅಭಿನಂದಿಸಿದರು. ಅದರಂತೆ ಚಂದ್ರಯಾನ ಯಶಸ್ವಿಗೆ ಕಾರ್ಯನಿರ್ವಹಿಸಿದಂತಹ ಹಲವು ಪ್ರಮುಖ ವಿಜ್ಞಾನಿಗಳನ್ನೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಆತ್ಮೀಯವಾಗಿ ಅಭಿನಂದಿಸಿದರು.

ಈ ವೇಳೆ ಮಾತನಾಡಿದ ಅವರು, ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸುರಕ್ಷಿತವಾಗಿ ಇಳಿದಿರುವುದು ಐತಿಹಾಸಿಕ ಸಾಧನೆ ಎಂದು ಬಣ್ಣಿಸಿದರು.

ಇಸ್ರೋ ಸಾಧನೆಯಿಂದ ಇಡೀ ಜಗತ್ತು ಭಾರತದ ಕಡೆಗೆ ನೋಡುವಂಥ ಕೆಲಸವಾಗಿದೆ . ಜಗತ್ತಿನಲ್ಲಿಯೇ ರಷ್ಯಾ, ಅಮೆರಿಕ, ಚೈನಾ ದೇಶಗಳನ್ನು ಬಿಟ್ಟರೆ ಚಂದ್ರನ ದಕ್ಷಿಣ ಭಾಗದಲ್ಲಿ ಕಾಲಿರಿಸಿರುವ ನಾಲ್ಕನೇ ದೇಶ ಭಾರತ. ನಾವೆಲ್ಲರೂ ಇಸ್ರೋ ಸಾಧನೆಯನ್ನು ಮೆಚ್ಚಿ ಅಭಿನಂದಿಸಬೇಕು ಎಂದರು.

ಸರ್ಕಾರದ ವತಿಯಿಂದ ಸನ್ಮಾನ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಿ ಇಸ್ರೋ ವಿಜ್ಞಾನಿಗಳನ್ನು ಸರ್ಕಾರ ಗೌರವಿಸಲಿದೆ. ಇಸ್ರೋ ಅಧ್ಯಕ್ಷ ಸೋಮನಾಥ್ ಸೇರಿದಂತೆ ಕರ್ನಾಟಕದ 500 ವಿಜ್ಞಾನಿಗಳು ಇದರಲ್ಲಿ ಪಾಲ್ಗೊಂಡಿದ್ದು, ಅವರೆಲ್ಲರಿಗೂ ಸನ್ಮಾನಿಸಲಾಗುವುದು. 3. 84 ಲಕ್ಷ ಕಿಮೀ ಪ್ರಯಾಣ ಮಾಡಿರುವ ವಿಕ್ರಂ ಸಾಧನೆ ಕಡಿಮೆಯಲ್ಲ. ಸರ್ಕಾರದ ಸಹಕಾರ ಬೆಂಬಲ ಇರಲಿದೆ. ಇದು ದೇಶದ ಹೆಮ್ಮೆ ಎಂದರು.

ದಿನಾಂಕ ನಿಗದಿ

ವಿಜ್ಞಾನಿಗಳು ಹಗಲು ಇರುಳು ಎನ್ನದೆ ಇದಕ್ಕಾಗಿ ಶ್ರಮಿಸಿದ್ದಾರೆ. ದೇಶದ ಒಟ್ಟು ಒಂದು ಸಾವಿರ ವಿಜ್ಞಾನಿಗಳು ಇದರಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಿಂದಲೇ 500 ಜನ ಪಾಲ್ಗೊಂಡಿದ್ದಾರೆ. ಸೆಪ್ಟೆಂಬರ್ 02 ರ ನಂತರ ಸನ್ಮಾನ ಕಾರ್ಯಕ್ರಮದ ದಿನಾಂಕ ನಿಗದಿಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಬೋಸರಾಜು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ