Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸರಿಂದ ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ: ಸಿಎಂ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.21:
ರಾಜ್ಯದ ಘನತೆ, ಅಭಿವೃದ್ಧಿಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಶ್ಲಾಾಘಿಸಿದರು.
ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಸಂತಾಪ ಸಲ್ಲಿಸಿ ಮಾತನಾಡಿದರು.
ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿಿ ಸಾಧ್ಯವಾಗುತ್ತದೆ. ಹೀಗಾಗಿ ಅನೈತಿಕ ಪೊಲೀಸ್‌ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಸಾಧನೆಯ ಶ್ರೇೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದರು.
ರಾಜ್ಯದಲ್ಲಿ ಪರಿಶಿಷ್ಠ ಜಾತಿ ,ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಆಗಬೇಕಿದೆ ಎಂದರು.
ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಾಣ ತ್ಯಾಾಗ ಮಾಡುವ ಹುತಾತ್ಮರಾಗಿದ್ದಾರೆ. ಇವರ ತ್ಯಾಾಗ, ಬಲಿದಾನಕ್ಕೆೆ ಬೆಲೆ ಕಟ್ಟಲಾಗದು. ಇವರನ್ನು ಇಡೀ ದೇಶ ಸ್ಮರಿಸಿ, ವಂದಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದರು.
ದೇಶದ ಶಾಂತಿ ಸುವ್ಯವಸ್ಥೆೆ ಕಾಪಾಡುವುದರಲ್ಲಿ ಪೊಲೀಸ್ ಸಿಬ್ಬಂದಿ ಅಗ್ರ ಸ್ಥಾಾನದಲ್ಲಿದ್ದಾರೆ. ಕೋಮು ಶಕ್ತಿಿಗಳು, ದುಷ್ಟ ಶಕ್ತಿಿಗಳ ನಿಗ್ರಹದಲ್ಲಿ ನಿಮ್ಮ ಪಾತ್ರ ದೊಡ್ಡದಿದೆ ಎಂದರು.
ಸಂವಿಧಾನದಲ್ಲಿ ಜನರಿಗೆ ಕೊಟ್ಟಿಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿಿದೆ ಎಂದರು.
ಬಾಕ್ಸ್
ವೈದ್ಯಕೀಯ ಮರುಪಾವತಿ ವೆಚ್ಚ ಏರಿಕೆ
ಸರ್ಕಾರ 116 ಮಂದಿಗೆ ಅನುಕಂಪದ ಕೆಲಸ ನೀಡಿ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂಗಳಿಂದ 1.50 ಲಕ್ಷಕ್ಕೆೆ ಹೆಚ್ಚಿಿಸಲಾಗಿದೆ. ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1000 ರೂಗಳಿಂದ 1500 ರೂಗೆ ಹೆಚ್ಚಿಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ