Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೃಪತುಂಗ ವಿವಿಯಲ್ಲಿ ನೂತನ ಶೈಕ್ಷಣಿಕ ಕಟ್ಟಡ ಉದ್ಘಾಾಟನೆ ಪ್ರತಿಭೆ, ವಿದ್ಯೆೆ ಯಾರ ಅಪ್ಪನ ಮನೆ ಆಸ್ತಿಿಯಲ್ಲ: ಸಿಎಂ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.14:
ವಿದ್ಯೆೆ ಮತ್ತು ಪ್ರತಿಭೆ ಯಾರ ಅಪ್ಪನ ಮನೆ ಸ್ವತ್ತಲ್ಲ. ಅವಕಾಶ ಸಿಗಬೇಕು ಅಷ್ಟೇ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ನುಡಿದರು.
ನೃಪತುಂಗ ವಿಶ್ವ ವಿದ್ಯಾಾಲಯದಲ್ಲಿ ರೂಸಾ ಯೋಜನೆಯಡಿ ನಿರ್ಮಿಸಿರುವ ನೂತನ ಶೈಕ್ಷಣಿಕ ಕಟ್ಟಡ ಉದ್ಘಾಾಟಿಸಿ ಮಾತನಾಡಿದರು.
ರಾಮಾಯಣ ಬರೆದ ವಾಲ್ಮೀಕಿ ಬೇಡರ ಜಾತಿಯವರಾದರೆ, ಮಹಾಭಾರತ ಬರೆದ ವ್ಯಾಾಸರು ಬೆಸ್ತ ಸಮುದಾಯದವರು. ಹೀಗಾಗಿ ವಿದ್ಯೆೆ, ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶಗಳು ಬೇಕು ಅಷ್ಟೇ . ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಂಡರೆ ನಿಮ್ಮ ಹಾಗೂ ಸಮಾಜದ ಪ್ರಗತಿ ಸಾಧ್ಯ. ಈ ದಿಕ್ಕಿಿನಲ್ಲಿ ವಿಜ್ಞಾನದ ವಿದ್ಯಾಾರ್ಥಿಗಳು ಸಮಾಜವನ್ನು ಮುನ್ನಡೆಸಬೇಕು ಎಂದು ಕರೆ ನೀಡಿದರು.
ವಿಜ್ಞಾನದ ಓದು ಮತ್ತು ಅಧ್ಯಯನ ಮಾಡುವವರ ಸಂಖ್ಯೆೆ ಕಡಿಮೆ ಆಗುತ್ತಿಿರುವುದು ಅಪಾಯದ ಸಂಗತಿ. ವೈಜ್ಞಾನಿಕ ಮನೋಭಾವ ಮತ್ತು ವಿಜ್ಞಾನದ ಶಿಕ್ಷಣ ಸಮಾಜದ ಮತ್ತು ದೇಶದ ಪ್ರಗತಿಗೆ ಅತ್ಯಗತ್ಯ ಎಂದರು.
ವಿಜ್ಞಾನ ಓದಿದವರೂ ಮೂಢನಂಬಿಕೆ ಮತ್ತು ಕಂದಾಚಾರಕ್ಕೆೆ ಗಂಟು ಬೀಳುವುದು ಶಿಕ್ಷಣ ಕಲಿಕೆಯಲ್ಲಿನ ಕೊರತೆಯಾಗಿದೆ ಎಂದರು.
ಬಹಳ ಹಿಂದೆಯೇ ಬಸವಾದಿ ಶರಣರು ಮೌಢ್ಯ , ಕಂದಾಚಾರಗಳ ವಿರುದ್ಧ ಕರೆ ನೀಡಿದರು. ಆದರೆ, ಇವತ್ತಿಿಗೂ ಮೌಢ್ಯ ಹೋಗಿಲ್ಲ. ಏಕೆಂದರೆ ನಮ್ಮದು ಜಾತಿ ತಾರತಮ್ಯದ ಸಮಾಜ ಆಗಿರುವುದರಿಂದ ಇದಕ್ಕೆೆ ಚಲನೆ ಇಲ್ಲ. ಪಟ್ಟಭದ್ರರು ತಾರತಮ್ಯವನ್ನು ಗಟ್ಟಿಿಗೊಳಿಸುವ ಸಲುವಾಗಿಯೇ ಮೌಢ್ಯವನ್ನು ಬಿತ್ತುತ್ತಾಾರೆ ಎಂದರು.
ನಾನು ಮೊದಲ ಬಾರಿ ಮುಖ್ಯಮಂತ್ರಿಿ ಆದಾಗ ಮೌಢ್ಯ ನಿಷೇಧ ಕಾಯ್ದೆೆ ಜಾರಿಗೆ ತರಲು ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ. ಅಷ್ಟರಮಟ್ಟಿಿಗೆ ಮೌಢ್ಯ ಮತ್ತು ಮೌಢ್ಯ ಹಂಚುವ ಪಟ್ಟಭದ್ರರು ಆಳವಾಗಿ ಬೇರು ಬಿಟ್ಟಿಿದ್ದಾರೆ ಎಂದರು.
ವಿಜ್ಞಾನ ಓದಿದವರಿಗೆಲ್ಲಾ ವೈಜ್ಞಾನಿಕ ಮನೋಭಾವ ಇಲ್ಲದಿರುವುದು ದುರಂತ. ವಿಜ್ಞಾನ ಓದಿಯೂ ಹಣೆಬರಹ ಮತ್ತು ಕರ್ಮ ಸಿದ್ದಾಂತ, ಗ್ರಹಚಾರಗಳನ್ನೆೆಲ್ಲಾ ನಂಬುತ್ತಾಾರೆ ಎಂದರೆ ಇವರು ವಿಜ್ಞಾನ ಓದಿದ್ದೇ ದಂಡ ತಾನೇ ಎಂದು ಪ್ರಶ್ನಿಿಸಿದರು.
ದೇಶದ ಪ್ರಧಾನಿ ಆಗಿದ್ದ ಜವಾಹರಲಾಲ್ ನೆಹರೂ ಅವರು ದೇಶದ ಯುವ ಜನತೆ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳಲಿ ಎನ್ನುವ ದೂರದೃಷ್ಟಿಿ ಹೊಂದಿದ್ದರು. ಇದಕ್ಕೆೆ ಅಗತ್ಯವಾದ ಶೈಕ್ಷಣಿಕ ಸಾಧನೆಗಳಿಗೆ ಕಾರಣರಾಗಿದ್ದರು ಎಂದು ವಿವರಿಸಿದರು.
52 ಕೋಟಿ ಅಂದಾಜಿನಲ್ಲಿ 7 ಅಂತಸ್ತಿಿನ ನೂತನ ಕಟ್ಟಡ ಉದ್ಘಾಾಟಿಸಲಾಗಿದೆ. ಎಂಟನೇ ಅಂತಸ್ತನ್ನು ನಿರ್ಮಿಸಲು 8 ಕೋಟಿ ರೂಪಾಯಿಗೆ ಬೇಡಿಕೆ ಸಲ್ಲಿಸಿದ್ದಾರೆ. ಸರ್ಕಾರ ಈ ಹಣ ಕೊಡಲು ಸಿದ್ದವಿದೆ ಎಂದು ಘೋಷಿಸಿದರು.
ಉನ್ನತ ಶಿಕ್ಷಣ ಸಚಿವರಾದ ಎಂ.ಸಿ.ಸುಧಾಕರ್ ಸೇರಿ ಹಲವು ಗಣ್ಯರು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ