Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿರೂರು ಭೂಕುಸಿತ : ಪರಿಹಾರ ಕಾರ್ಯಾಚರಣೆ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ

ನಾಪತ್ತೆೆಯಾದವರ ಶೋಧಕ್ಕೆೆ ತ್ವರಿತ ಕಾರ್ಯಾಚರಣೆಗೆ ಸೂಚನೆ

ಸುದ್ದಿಮೂಲ ವಾರ್ತೆ ಅಂಕೋಲಾ, ಜು.21:
ಶಿರೂರು ಭೂಕುಸಿತದಿಂದ ಮೃತಪಟ್ಟ 10 ಜನರ ಪೈಕಿ ಏಳು ಜನರ ಶವ ಪತ್ತೆೆಯಾಗಿದ್ದು, ಉಳಿದ ಶವಗಳ ಪತ್ತೆೆಗೆ ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ ಎಸ್‌ಡಿಆರ್‌ಎ್ನಿಂದ 46 ಜನ ಎನ್‌ಡಿಆರ್‌ಎ್ನಿಂದ 24 ಜನ, 44 ಜನ ಮಿಲಿಟರಿಯವರು ಹಾಗೂ ನೌಕಾಪಡೆ ಸೇರಿ ಯೋಧರೂ ಕೈ ಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿಿ ಸಿದ್ದರಾಮಯ್ಯ ತಿಳಿಸಿದರು.
ಅಂಕೋಲಾ ತಾಲ್ಲೂಕಿನ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆೆ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋವಾ ಮತ್ತು ಅಂಕೋಲಾ ನಡುವೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಭೂ ಕುಸಿತವಾಗಿದೆ. ಭೂ ಕುಸಿತದಿಂದ 10 ಜನ ಕಾಣೆಯಾಗಿದ್ದಾರೆ. ಅದರಲ್ಲಿ ಏಳು ಜನರ ಹೆಣಗಳು ಪತ್ತೆೆಯಾಗಿದ್ದು ಇನ್ನೂ ಮೂವರು ಕಾಣೆಯಾಗಿದ್ದು ಅವರ ಪತ್ತೆೆಗಾಗಿ ಪರಿಹಾರ ಕಾರ್ಯಾಚರಣೆ ಜಾರಿಯಲ್ಲಿದೆ ಎಂದು ವಿವರಿಸಿದರು.
ಘಟನೆಯಲ್ಲಿ ಖಾಲಿ ಗ್ಯಾಾಸ್ ಟ್ಯಾಾಂಕರ್ ಹಾಗೂ ಭರ್ತಿಯಾಗಿರುವ ಗ್ಯಾಾಸ್ ಟ್ಯಾಾಂಕರ್ ಕೂಡ ಸಿಕ್ಕಿಿಹಾಕಿಕೊಂಡಿದ್ದು, ಅಲ್ಲಿಯೇ ವಾಸವಾಗಿರುವ ಒಂದೇ ಕುಟುಂಬದವರು ಚಹ ಅಂಗಡಿಯನ್ನು ಇಟ್ಟುಕೊಂಡಿದ್ದರು. ಅವರಲ್ಲಿ ಐವರು ಭೂ ಕುಸಿತದಲ್ಲಿ ಸಾವನ್ನಪ್ಪಿಿದ್ದಾರೆ. ರಿಸ್ಕ್ ಆಪರೇಶನ್ ತ್ವರಿತವಾಗಿ ಮಾಡಬೇಕೆಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸ್ಪಷ್ಟವಾಗಿ ಸೂಚಿಸಿದ್ದೇನೆ ಎಂದರು.
ಮೃತರ ಕುಟುಂಬಕ್ಕೆೆ ಐದು ಲಕ್ಷ ಪರಿಹಾರ:
ವಿಧಾನಸಭಾ ಅಧಿವೇಶನ ನಡೆಯುತ್ತಿಿದ್ದುದರಿಂದ ಇಂದು ಭೇಟಿ ನೀಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಎಲ್ಲಾ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದ್ದೆ. ಸಾವನ್ನಪ್ಪಿಿದವರ ಕುಟುಂಬಕ್ಕೆೆ 5 ಲಕ್ಷ ಪರಿಹಾರ ವಿತರಿಸಲಾಗಿದೆ. ಒಂದು ವೇಳೆ ಭೂ ಕುಸಿತದಲ್ಲಿ ಇನ್ಯಾಾರಾದರೂ ಸಾವನ್ನಪ್ಪಿಿದ್ದರೆ ಅವರಿಗೂ ಸಹ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದು ಎಂದು ಸ್ಪಷ್ಟಪಡಿಸಿದರು.
ನೌಕಾದಳ ಹಾಗೂ ರಕ್ಷಣಾ ತಂಡದವರಿಗೆ ಎಲ್ಲೆಡೆ ಹುಡುಕುವಂತೆ ಸೂಚನೆ ನೀಡಲಾಗಿದೆ. 10 ಜನರು ಕಾಣೆಯಾಗಿದ್ದಾರೆ. ಘಟನೆ ನಡೆದ ದಿನವೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರನ್ನೂ ಹಾಗೂ ಶಾಸಕರನ್ನು ಸ್ಥಳಕ್ಕೆೆ ಕಳುಹಿಸಲಾಗಿದೆ ಎಂದರು.
ತಪ್ಪಿಿತಸ್ಥರ ವಿರುದ್ಧ ಕ್ರಮ:
ಭೂ ಕುಸಿತವು ಪ್ರಕೃತಿ ವಿಕೋಪವಲ್ಲ ಐ.ಆರ್.ಬಿ ಸಂಸ್ಥೆೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಆಗಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪರಿಹಾರ ಕಾಮಗಾರಿ ಮುಗಿದ ಬಳಿಕ ರಾಷ್ಟ್ರೀಯ ಹೆದ್ದಾರಿ ಪ್ರಾಾಧಿಕಾರದ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು. ಟೋಲ್ ಸಂಗ್ರಹ ಸಂಬಂಧವೂ ಕೇಂದ್ರ ರಸ್ತೆೆ ಸಾರಿಗೆ ಸಚಿವರೊಂದಿಗೆ ನಾನು ಮಾತನಾಡುತ್ತೇನೆ ಎಂದು ಹೇಳಿದರು.
ರಾಜ್ಯ ಸರ್ಕಾರ ವಿಳಂಬ ಮಾಡಿಲ್ಲ:
ಗುಡ್ಡ ಕುಸಿತದ ತೆರವು ಪರಿಹಾರ ಕಾಮಗಾರಿಯಲ್ಲಿ ರಾಜ್ಯ ಸರ್ಕಾರ ಯಾವುದನ್ನೂ ವಿಳಂಬ ಮಾಡಿಲ್ಲ. ಎಲ್ಲವನ್ನೂ ತ್ವರಿತವಾಗಿ ಮಾಡುತ್ತಿಿದ್ದೇವೆ. ಕೇರಳದ ಅರ್ಜುನ್ ಎಂಬುವರು ಕಾಣೆಯಾಗಿದ್ದು, ತಮ್ಮ ರಾಜ್ಯದವರೆಂದು ಅವರೆಲ್ಲಾ ಬಂದಿರಬಹುದು. ಆದರೆ ನಾವು ವಿಳಂಬ ಮಾಡದೇ, ನಿರ್ಲಕ್ಷ್ಯ ತೋರದೆ ಕೆಲಸ ಮಾಡುತ್ತಿಿದ್ದೇವೆ ಎಂದರು.
ಭೂ ಕುಸಿತ ತಡೆಗಟ್ಟಲು ಪ್ರಯತ್ನ:
34 ಸ್ಥಳಗಳಲ್ಲಿ ಭೂ ಕುಸಿತವಾಗುತ್ತದೆ ಎಂದು ಒಂದು ವರ್ಷದ ಹಿಂದೆಯೇ ವರದಿಯಾಗಿದೆ, ಸತ್ತ ಮೇಲೆಯೇ ಕ್ರಮವೇಕೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆೆಗೆ ಪ್ರತಿಕ್ರಿಿಯೆ ನೀಡಿ ನಮ್ಮ ಸರ್ಕಾರ ಅಧಿಕಾರಕ್ಕೆೆ ಬಂದು ಒಂದು ವರ್ಷವಾಯಿತು. ಕಳೆದ ಬಾರಿ ಬರವಿದ್ದು, ಈ ಬಾರಿ ಮಳೆಯಾಗುತ್ತಿಿದೆ. ಬಹಳ ವರ್ಷಗಳಿಂದ ಇಲ್ಲಿ ಭೂ ಕುಸಿತವಾಗಿರಲಿಲ್ಲ. ಎಲ್ಲೆಲ್ಲಿ ಭೂ ಕುಸಿತವಾಗುತ್ತದೆಯೋ ಅದನ್ನು ತಡೆಗಟ್ಟಲು ಪ್ರಯತ್ನ ಮಾಡಲಾಗುವುದು ಎಂದರು.
ರಾತ್ರಿಿ ವೇಳೆ ಕಾರ್ಯಾಚರಣೆ ನಡೆಯುವುದಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿಿಗಳು ಪ್ರಕೃತಿ ವಿಕೋಪದ ಸಂದರ್ಭದಲ್ಲಿ ರಾಜಕಾರಣ ಮಾಡುವುದಿಲ್ಲ. ಕೇಂದ್ರ ಸರ್ಕಾರದ ತಂಡ ಎನ್.ಡಿ.ಆರ್. ಎ್ ಕೂಡ ಇಲ್ಲಿ ಕಾರ್ಯಾಚರಣೆ ಮಾಡುತ್ತಿಿದೆ. ನೌಕಾ ತಂಡವೂ ಇದೆ. ಇಲ್ಲಿ ಇನ್ಯಾಾರ ಮೇಲೆಯೂ ದೋಷ ಹೊರೆಸಲು ನಾನು ಹೋಗುವುದಿಲ್ಲ ಎಂದರು.
ಪ್ರಗತಿ ಪರಿಶೀಲನಾ ಸಭೆ:
ಬಳಿಕ ಕಾರವಾರದ ಜಿ.ಪಂ. ಸಭಾಂಗಣದಲ್ಲಿ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯುತ್ತಿಿರುವ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕಂದಾಯ ಸಚಿವ ಕೃಷ್ಣ ಬೈರೇಗೌಡ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ,ಶಾಸಕರಾದ ಸತೀಶ್ ಸೈಲ್, ಶಿವರಾಮ ಹೆಬ್ಬಾಾರ್, ಭೀಮಣ್ಣ ನಾಯ್ಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿಿ ಆಯುಕ್ತರಾದ ಶಾಲಿನಿ ರಜನೀಶ್, ಮುಖ್ಯಮಂತ್ರಿಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅತೀಕ್ , ವಿಪತ್ತು ನಿರ್ವಹಣಾ ಪ್ರಾಾಧಿಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ , ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಿಯ, ಜಿ.ಪಂ. ಸಿಇಒ ಈಶ್ವರ ಕುಮಾರ್ ಕಾಂದು, ಎಸ್‌ಪಿ ನಾರಾಯಣ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ