Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

‘ನವೆಂಬರ್ ಕ್ರಾಾಂತ್ರಿಿ’ಯ ಸದ್ದಿನ ಮಧ್ಯೆೆಯೇ ತಮ್ಮ ನಾಯಕತ್ವ ಅಭಾದಿತ ಎಂಬ ಸಂದೇಶ ರವಾನೆ ಸಂಪುಟ ಪುನಾರಚನೆಯ ಸುಳಿವು ನೀಡಿದ ಸಿಎಂ ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.07:
ನವೆಂಬರ್‌ನಲ್ಲಿ ಅಧಿಕಾರ ಹಂಚಿಕೆಯ ರಾಜಕೀಯ ಕ್ರಾಾಂತಿ ನಡೆಯುತ್ತದೆ ಎಂಬ ಮಾತುಗಳು ಕೇಳಿಬರುತ್ತಿಿರುವ ಸಂದರ್ಭದಲ್ಲಿಯೇ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ಸಂಪುಟ ಪುನಾರಚನೆಯ ಮೂಲಕ ತಮ್ಮ ನಾಯಕತ್ವ ಅಭಾದಿತ ಎಂಬ ಸಂದೇಶ ರವಾನಿಸಿದ್ದಾರೆ.
ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿಿ ಎಂದು ಇತ್ತೀಚೆಗಷ್ಟೇ ಮೈಸೂರು ದಸರಾ ಸಂದರ್ಭದಲ್ಲಿ ಘೋಷಿಸಿದ್ದ ಸಿಎಂ ಸಿದ್ದರಾಮಯ್ಯ, ಇಂದು ವಾಲ್ಮೀಕಿ ಜಯಂತಿ ಅಂಗವಾಗಿ ವಾಲ್ಮೀಕಿ ಪುತ್ಥಳಿಗೆ ಪುಷ್ಪಾಾರ್ಚನೆ ಮಾಡಿದ ಬಳಿಕ ಮಾತನಾಡಿ, ಮುಂದಿನ ದಿನಗಳಲ್ಲಿ ಸಂಪುಟ ಪುನರ್ ರಚಿಸುವ ಸ್ಪಷ್ಟ ಸೂಚನೆ ನೀಡಿದರು.
ಪರಿಶಿಷ್ಟ ಸಮುದಾಯದ ವಾಲ್ಮೀಕಿ ಶಾಸಕರೊಬ್ಬರಿಗೆ ಸಚಿವ ಸಂಪುಟದಲ್ಲಿ ಸ್ಥಾಾನ ನೀಡಬೇಕು ಎಂಬ ಬೇಡಿಕೆ ಇರುವ ಬಗ್ಗೆೆ ಕೇಳಲಾದ ಪ್ರಶ್ನೆೆಗೆ ಮುಖ್ಯಮಂತ್ರಿಿ ಸಿದ್ದರಾಮಯ್ಯನವರು, ಮುಂದೆ ಸಂಪುಟ ಪುನರ್‌ರಚನೆಯಾಗುತ್ತದೆ. ಆ ಸಂದರ್ಭದಲ್ಲಿ ವಾಲ್ಮೀಕಿ ಸಮುದಾಯದವರಿಗೆ ಸಚಿವ ಸ್ಥಾಾನ ನೀಡುವ ಬಗ್ಗೆೆ ತೀರ್ಮಾನ ಮಾಡುತ್ತೇವೆ ಎಂದರು.
ರಾಜ್ಯದಲ್ಲಿ ನವೆಂಬರ್‌ನಲ್ಲಿ ಕ್ರಾಾಂತಿಯಾಗುತ್ತದೆ, ಅಧಿಕಾರ ಹಂಚಿಕೆ ಒಪ್ಪಂದ ಜಾರಿಯಾಗುತ್ತದೆ ಎಂಬ ಚರ್ಚೆಗಳು ನಡೆದಿರುವಾಗಲೇ ಮುಖ್ಯಮಂತ್ರಿಿ ಸಿದ್ದರಾಮಯ್ಯ ಸಚಿವ ಸಂಪುಟ ಪುನರ್ ರಚನೆಯ ಬಗ್ಗೆೆ ಮಾತನಾಡಿರುವುದು ಮಹತ್ವ ಪಡೆದುಕೊಂಡಿದೆ.
ಈ ಹಿಂದೆ ಹಲವು ಬಾರಿ ಮುಂದಿನ ಐದು ವರ್ಷ ನಾನೇ ಮುಖ್ಯಮಂತ್ರಿಿ ಎಂದು ಹೇಳಿದ್ದ ಸಿದ್ದರಾಮಯ್ಯನವರು, ಮೊನ್ನೆೆ ದಸರಾ ಸಂದರ್ಭದಲ್ಲೂ ಮುಂದಿನ ಎರಡೂವರೆ ವರ್ಷ ನಾನೇ ಮುಖ್ಯಮಂತ್ರಿಿ. ಬರುವ ವರ್ಷವೂ ನಾಡದೇವತೆ ಚಾಮುಂಡೇಶ್ವರಿಗೆ ನಾನೇ ಪುಷ್ಪಾಾರ್ಚನೆ ಮಾಡುತ್ತೇನೆ ಎಂದು ಹೇಳಿದ್ದರು.
ಮುಖ್ಯಮಂತ್ರಿಿಗಳ ಈ ಹೇಳಿಕೆ ನಾನಾ ವ್ಯಾಾಖ್ಯಾಾನಗಳಿಗೆ ಕಾರಣವಾಗಿ ಕಾಂಗ್ರೆೆಸ್‌ನಲ್ಲೂ ಭಾರೀ ಚರ್ಚೆಗೆ ಗ್ರಾಾಸವಾಗಿತ್ತು. ಮುಖ್ಯಮಂತ್ರಿಿ ಪರ ಇರುವ ಸಚಿವರು, ಶಾಸಕರು ಸಿದ್ದರಾಮಯ್ಯನವರೇ ಐದು ವರ್ಷ ಮುಖ್ಯಮಂತ್ರಿಿಯಾಗಿ ಮುಂದುವರೆಯುತ್ತಾಾರೆ ಎಂಬ ಹೇಳಿಕೆ ನೀಡಿದ್ದರು. ಹಾಗೆಯೇ ಡಿ.ಕೆ. ಶಿವಕುಮಾರ್ ಮುಂದೆ ಮುಖ್ಯಮಂತ್ರಿಿಯಾಗಬೇಕು ಎಂದು ಡಿ.ಕೆ. ಶಿವಕುಮಾರ್ ಪರ ಶಾಸಕರು ಮಾತನಾಡಿದ್ದರು.
ಈ ಎಲ್ಲದಕ್ಕೂ ತೆರೆ ಎಳೆಯುವಂತೆ ರಾಜ್ಯ ಕಾಂಗ್ರೆೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ನಾಯಕತ್ವ ಬದಲಾವಣೆ ಬಗ್ಗೆೆ ಯಾವುದೇ ಚರ್ಚೆ ಇಲ್ಲ ಎಂದು ಹೇಳಿದ್ದರು. ಹಾಗೆಯೇ ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಸಹ ಅಧಿಕಾರ ಹಂಚಿಕೆ ಬಗ್ಗೆೆ ಮಾತನಾಡುವುದು ಪಕ್ಷ ವಿರೋಧಿ ಕೆಲಸ. ಯಾರೂ ಈ ಬಗ್ಗೆೆ ಮಾತನಾಡಬಾರದು, ಮಾತನಾಡಿರುವ ಶಾಸಕರಿಗೆ ನೋಟಿಸ್ ಜಾರಿ ಮಾಡಲಾಗುವುದು ಎಂದು ಹೇಳಿ, ತಮ್ಮ ಪರ ಮಾತನಾಡಿದ್ದ ಕುಣಿಗಲ್ ಶಾಸಕ ಡಾ. ರಂಗನಾಥ್ ರವರಿಗೂ ನೋಟಿಸ್ ಜಾರಿ ಮಾಡಿದ್ದರು.
ಈ ಎಲ್ಲ ಬೆಳವಣಿಗೆ ನಡುವೆಯೇ ಇಂದು ಮುಖ್ಯಮಂತ್ರಿಿ ಸಿದ್ದರಾಮಯ್ಯನವರು ಸಚಿವ ಸಂಪುಟ ಪುನರ್ ರಚನೆಯ ಸುಳಿವು ನೀಡುವ ಮೂಲಕ ತಮ್ಮ ನಾಯಕತ್ವಕ್ಕೆೆ ಯಾವುದೇ ತೊಂದರೆಯಿಲ್ಲ. ಮುಂದೆ ಸಂಪುಟ ಪುನರ್ ರಚಿಸುತ್ತೇನೆ ಎಂಬ ಸಂದೇಶ ರವಾನಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ