Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಎಂ ಸಿದ್ದರಾಮಯ್ಯರಿಂದ ಕಲ್ಬುರ್ಗಿ, ಬೀದರ್, ಯಾದಗಿರಿ ಜಿಲ್ಲೆೆಯಲ್ಲಿ ವೈಮಾನಿಕ ಸಮೀಕ್ಷೆ ಅತಿವೃಷ್ಟಿಿ, ಪ್ರವಾಹದಿಂದ ಉಂಟಾದ ಹಾನಿಯ ಕುರಿತು ಸಿಎಂ ಅವಲೋಕನ

ಸುದ್ದಿಮೂಲ ವಾರ್ತೆ ಕಲಬುರಗಿ, ಸೆ.30:
ನಿರಂತರ ಮಳೆ ಹಾಗೂ ಭೀಮಾ ನದಿ ಪ್ರವಾಹದಿಂದ ಉತ್ತರ ಕರ್ನಾಟಕ ಹಾಗೂ ಕಲ್ಯಾಾಣ ಕರ್ನಾಟಕ ಪ್ರದೇಶದಲ್ಲಿ ಉಂಟಾದ ಹಾನಿ ಕುರಿತು ಸಿಎಂ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆ ನಡೆಸುವ ಮೂಲಕ ಪ್ರವಾಹದ ಪರಿಸ್ಥಿಿತಿ ಅವಲೋಕಿಸಿದರು.
ಮಹಾರಾಷ್ಟ್ರದ ಉಜನಿ, ವೀರ ಜಲಾಶಯದಿಂದ ಹೆಚ್ಚಿಿನ ಪ್ರಮಾಣದಲ್ಲಿ ನೀರು ಹರಿಸಿದ ಪರಿಣಾಮ ಕಲಬುರಗಿ, ಬೀದರ್, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಉಂಟಾದ ಪ್ರವಾಹ ಹಾಗೂ ಅತಿವೃಷ್ಟಿಿಯಿಂದ ಹಾಳಾದ ಬೆಳೆ ಹಾನಿ ಸಿಎಂ ಸಿದ್ದರಾಮಯ್ಯ ಅವರು ಹೆಲಿಕ್ಯಾಾಪ್ಟರ್ ಮೂಲಕ ಎರಡು ಹಂತಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಆಗಿರುವ ಹಾನಿಯನ್ನು ಅರಿತುಕೊಂಡರು.
ಬೆಂಗಳೂರಿನಿಂದ ಮಂಗಳವಾರ ಬೆಳಗ್ಗೆೆ ವಿಶೇಷ ವಿಮಾನದ ಮೂಲಕ ಕಲಬುರಗಿ ವಿಮಾನ ನಿಲ್ದಾಾಣಕ್ಕೆೆ ಆಗಮಿಸಿದ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು, ಪ್ರವಾಹದಿಂದಾಗಿ ಭೀಮಾ ತೀರದ ಪ್ರದೇಶಗಳಲ್ಲಿ ಉಂಟಾಗಿರುವ ಹಾನಿ ಬಗ್ಗೆೆ ವಿಮಾನ ನಿಲ್ದಾಾಣದಲ್ಲೇ ಪ್ರಾಾಥಮಿಕ ಸಭೆ ನಡೆಸಿ ಕಲಬುರಗಿ, ಬೀದರ್, ಯಾದಗಿರಿ ಹಾಗು ವಿಜಯಪುರ ಜಿಲ್ಲಾ ಅಧಿಕಾರಿಗಳು ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಂದ ಮಾಹಿತಿ ಪಡೆದರು.
ಬಳಿಕ ಮೊದಲ ಹಂತದಲ್ಲಿ ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಾನಿಗೀಡಾಗಿರುವ ಪ್ರದೇಶಗಳ ವೀಕ್ಷಣೆ ಮಾಡಿದರೆ, ಎರಡನೇ ಹಂತದಲ್ಲಿ ಬೀದರ್ ಜಿಲ್ಲೆಯಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಪ್ರವಾಹದಿಂದ ಉಂಟಾದ ಮಾಹಿತಿ ಅರಿತರು.
ಮೊದಲ ಹಂತದ ಸಮೀಕ್ಷೆ ವೇಳೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರಿಗೆ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಿಯಾಂಕ್ ಖರ್ಗೆ ಜಿಲ್ಲೆಯ ಪ್ರದೇಶದಲ್ಲಿ ಮಳೆ ಹಾಗೂ ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ವಿವರಿಸಿದರು. ಕಂದಾಯ ಸಚಿವ ಕೃಷ್ಣ ಭೈರೇಗೌಡ, ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಅವರು ಸಾಥ್ ನೀಡಿದರು. ಎರಡನೇ ಹಂತದ ಬೀದರ್ ಜಿಲ್ಲೆಯ ಸಮೀಕ್ಷೆ ವೇಳೆ ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರಿಗೆ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆೆ ಹಾಗೂ ಸಚಿವ ರಹೀಂ ಖಾನ್ ಸಾಥ್ ನೀಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ