Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಹಕಾರ ಸಂಘಗಳು ರೈತ ಕುಟುಂಬಕ್ಕೆ ಆರ್ಥಿಕ ಬಲ 

ಸುದ್ದಿಮೂಲ ವಾರ್ತೆ

ಹೊಸಕೋಟೆ,ಸೆ.26: ಸಹಕಾರ ಸಂಘಗಳು ರೈತರನ್ನು ಆರ್ಥಿಕವಾಗಿ ಸದೃಢಗೊಳಿಸಲು ಕಾರ್ಯಕ್ರಮಗಳನ್ನು ರೂಪಿಸುತ್ತದೆ. ಸದಸ್ಯರು ಪ್ರಯೋಜನ ಪಡೆದು ಸಂಘದ ಬೆಳವಣಿಗೆಗೆ ಶ್ರಮಿಸಬೇಕು ಎಂದು ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಅಧ್ಯಕ್ಷ ಕೆ.ಎಸ್. ಸುರೇಶ್ ಹೇಳಿದರು.

ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಆವರಣದಲ್ಲಿ ಸೋಮವಾರ ನಡೆದ 2022-23ನೇ ಸಾಲಿನ ಸರ್ವ ಸದಸ್ಯರ 48ನೇ ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರಿಗೆ ಸರಕಾರ ನೇರವಾಗಿ ಸವಲತ್ತುಗಳು ನೀಡಲು ಸಾಧ್ಯವಿಲ್ಲವೆಂಬುದನ್ನು ಅರಿತು ಸಹಕಾರ ಸಂಘಗಳ ಮುಖೇನ ರೈತರ ಬೇಡಿಕೆಗಳಿಗೆ ತಕ್ಕಂತೆ, ಯೋಜನೆ ರೂಪಿಸಿ, ರೈತ ಕುಟುಂಬಗಳನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಪ್ರಯತ್ನ ಮಾಡುತ್ತಿವೆ. ಸತತ ರೈತರ ಸೇವೆಯಲ್ಲಿ ತೊಡಗಿರುವ ನಮ್ಮ ಬ್ಯಾಂಕ್ ಲಾಭ ಗಳಿಸುವುದರಲ್ಲಿ ಮುಂದಿದೆ. ಆಡಳಿತ ಮಂಡಳಿ ಹಾಗೂ ಷೇರುದಾರರು ಸಂಘದ ಏಳಿಗೆಗಾಗಿ ಶ್ರಮಿಸಬೇಕು ಎಂದು ತಿಳಿಸಿದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ.ಆರ್. ರಾಜಣ್ಣ ಮಾತನಾಡಿ, ಸಂಘದ ವ್ಯಾಪ್ತಿಗೆ 59 ಹಳ್ಳಿಗಳು ಒಳಪಟ್ಟಿದ್ದು, 5624 ಷೇರು ಸದಸ್ಯರನ್ನು ಹೊಂದಿದೆ. 2022-23ನೇ ಸಾಲಿನಲ್ಲಿ ಸಂಘದ ವಹಿವಾಟು 6.72 ಕೋಟಿ ರೂ.ಗಳ ವಹಿವಾಟು ನಡೆದಿದೆ. ವ್ಯಾಪಾರ ಲಾಭ 25.80 ಲಕ್ಷ ರೂ. ಪಡೆದು, ನಿವ್ವಳ ಲಾಭ 27.58 ಲಕ್ಷ ರೂ. ಗಳಿಸಿದೆ ಎಂದರು.

ಈ ಸಂದರ್ಭದಲ್ಲಿ ಎಸ್‌ಎಫ್‌ಸಿಎಸ್‌ನ ಉಪಾಧ್ಯಕ್ಷ ರಾಮಚಂದ್ರಪ್ಪ, ನಿರ್ದೇಶಕರಾದ ಎಂ. ಭತ್ಯಪ್ಪ, ಎಂ.ಮುನಿಅಣ್ಣಯ್ಯ, ಜೆ.ಎಂ.ನಟರಾಜ್, ಎಸ್.ರಮೇಶ್, ಕರಿಯಪ್ಪ, ಸರ್ದಾರ್ ಬೇಗ್, ಚಿಕ್ಕ ನಾರಾಯಣಸ್ವಾಮಿ, ವಿ.ನಾರಾಯಣಪ್ಪ, ಶಿಲ್ಪ, ಜಯಲಕ್ಷ್ಮಿ ಹಾಗೂ ಷೇರುದಾರರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ