Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಕೆಶಿ, ಸಿದ್ದರಾಮಯ್ಯ ಪರ ಸಮುದಾಯಗಳ ಒತ್ತಡ ತಂತ್ರ

ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 15: ಕಾಂಗ್ರೆಸ್‌ನಿಂದ ಮುಖ್ಯಮಂತ್ರಿ ಯಾರಾಗಬೇಕು ಎಂದು ಪಕ್ಷದೊಳಗೆ ತೀವ್ರ ಚರ್ಚೆ ನಡೆಸಿದ್ದರೆ, ಇತ್ತ ತಮ್ಮ ಸಮುದಾಯದವರೇ ಸಿಎಂ ಆಗಬೇಕು ಎಂದು ಒಕ್ಕಲಿಗ ಮತ್ತು ಲಿಂಗಾಯತ ಸ್ವಾಮೀಜಿಗಳು, ಕುರುಬ ಸಮಾಜದ ಮುಖಂಡರು, ದಲಿತ ಮುಖಂಡರು ಹೊರಗಡೆಯಿಂದ ಒತ್ತಡ ತರುತ್ತಿದ್ದಾರೆ.

ರಾಜ್ಯ ಒಕ್ಕಲಿಗರ ಅಭಿಮಾನಿ ಬಳಗ ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ಭಾನುವಾರ ಸಭೆ ನಡೆಸುವ ಮೂಲಕ ಡಿ.ಕೆ. ಶಿವಕುಮಾರ್ ಅವರ ಸಾರಥ್ಯದಲ್ಲಿ ವಿಧಾನಸಭೆ ಚುನಾವಣೆ ನಡೆದು ಕಾಂಗ್ರೆಸ್ ಪಕ್ಷ ಬಹುಮತ ಪಡೆದಿದೆ. ಆದ್ದರಿಂದ ಡಿ.ಕೆ. ಶಿವಕುಮಾರ್ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ವರಿಷ್ಠರ ಮೇಲೆ ಒತ್ತಡ ತರುವ ಪ್ರಯತ್ನ ಮಾಡಿದರು.

ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ ಮಾತನಾಡಿ, ಊಹೆಗೂ ಮೀರಿದ ರೀತಿಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸಹಜವಾಗಿ‌ ಕಾಂಗ್ರೆಸ್ ವರಿಷ್ಠರು ಮುಖ್ಯಮಂತ್ರಿಯನ್ನಾಗಿ ಮಾಡಬೇಕು ಎಂದು ಹೇಳಿದರು.

ಶಿವಕುಮಾರ್ ಅವರ ಹುಟ್ಟುಹಬ್ಬ ನಾಳೆ ಇದ್ದು, ಈ ಸಂದರ್ಭದಲ್ಲಿ ಸಹಜವಾಗಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ. ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅವರು ಆ ಪಕ್ಷದ ಸಂಪ್ರದಾಯದಂತೆ ಕೆಪಿಸಿಸಿ ಅಧ್ಯಕ್ಷರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು  ಎಂದು ಸ್ವಾಮೀಜಿ ಅವರು ಹೇಳಿದರು.

ಸ್ಪಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ ಮಾತನಾಡಿ, ಡಿ.ಕೆ. ಶಿವಕುಮಾರ್ ಒಬ್ಬ ದೈತ್ಯ ಕೆಲಸ ಗಾರ. ಎಲ್ಲರ ಮಾರ್ಗದರ್ಶನದಲ್ಲಿ ಪಕ್ಷವನ್ನು ಅಧಿಕಾರ ಕ್ಕೆ ತಂದಿದ್ದಾರೆ.‌ ಶಿವಕುಮಾರ್ ಗೆ  ಕೊಟ್ಟಷ್ಟು ನೋವು ಯಾರಿಗಾದರೂ ಕೊಟ್ಟಿದ್ದರೆ ಅವರು ಭೂಮಿ ಮೇಲೆ ಇರುತ್ತಿರಲಿಲ್ಲ ಅನ್ನಿಸುತ್ತದೆ ಎಂದು ಹೇಳಿದರು.
ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಕೇಳಲು ಅರ್ಹರಿದ್ದಾರೆ. ನಮ್ಮ ಸಮುದಾಯದ ನಿರ್ಣಯವನ್ನು ಕಾಂಗ್ರೆಸ್ ಶಾಸಕಾಂಗ ಸಭೆಗೆ ಮುಟ್ಟಿಸಬೇಕು.‌ ಅದಕ್ಕಾಗಿಯೇ ನೂತನ ಶಾಸಕ ಬಾಲಕೃಷ್ಣರನ್ನು ಈ ಸಭೆಗೆ ಕರೆಸಲಾಗಿದೆ. ನಮ್ಮ ನಿರ್ಧಾರವನ್ನು ಅವರು ಶಾಸಕಾಂಗ ಸಭೆಯಲ್ಲಿ ತಿಳಿಸುತ್ತಾರೆ ಎಂಬ  ವಿಶ್ವಾಸವಿದೆ ಎಂದರು.

ಕುರುಬರ ಸಂಘದ ಸಭೆ:
ಈ ಮಧ್ಯ ಬೆಂಗಳೂರಿನಲ್ಲಿ ಕುರುಬರ ಸಂಘದ ಸಭೆ ಕರೆಯಲಾಗಿತ್ತು. ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಘೋಷಿಸಬೇಕು ಎಂದು ಒತ್ತಾಯಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ