Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಯಚೂರು ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಪೈಪೋಟಿ

ಸುದ್ದಿಮೂಲ ವಾರ್ತೆ
ಬೆಂಗಳೂರು, ಏ.3: ರಾಯಚೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಆಭ್ಯಥಿ ಆಯ್ಕೆಗೆ ಸಂಬಂಧಪಟ್ಟಂತೆ ಪೈಪೋಟಿ ಮುಂದುವರಿದಿದೆ. ಹಾಲಿ ಶಾಸಕ ಡಾ. ಶಿವರಾಜ್‌ ಪಾಟೀಲ್‌ ಅವರಿಗೆ ಬಹುತೇಕ ಟಿಕೆಟ್‌ ಖಚಿತ ಎನ್ನುವ ಮಧ್ಯೆಯೇ ಇತ್ತೀಚಿನ ಅವರ ಮೋದಿ ಕುರಿತು ಹೇಳಿಕೆ ವಿವಾದಕ್ಕೆ ಕಾರಣವಾದ ಹಿನ್ನೆಲೆಯಲ್ಲಿ ಡಾ. ಶಿವರಾಜ್‌ ಪಾಟೀಲ್‌ ಅವರ ಹೆಸರು ಅಂತಿಮಗೊಳಿಸುವುದು ವಿಳಂಬವಾಗುತ್ತಿದೆ.

ಕಳೆದ ಎರಡು ದಿನಗಳ ಹಿಂದೆ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ರಾಯಚೂರು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಭ್ಯಾವ್ಯ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದಾರೆ ಎನ್ನಲಾಗಿದೆ. ಆದರೆ, ರಾಯಚೂರು ಮತ್ತು ಲಿಂಗಸಗೂರು ಕ್ಷೇತ್ರಗಳಿಗೆ ಹೆಸರು ಅಂತಿಮಗೊಳಿಸಿಲ್ಲವಾದ್ದರಿಂದ ಈ ಮಧ್ಯೆ ರಾಯಚೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ಗಾಗಿ ಡಾ. ಬಸನಗೌಡ, ಗುಡಿಸಿ ನರಸರೆಡ್ಡಿ  ತೀವ್ರ ಪೈಪೋಟಿ ವೊಡ್ಡಿದ್ದಾರೆ.

ಭಾನುವಾರ ಗಂಗಾವತಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ  ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್‌ ಅವರನ್ನು ರಾಯಚೂರಿನ ಮಾಜಿ ಶಾಸಕ ಎ. ಪಾಪಾರೆಡ್ಡಿ ನೇತೃತ್ವದಲ್ಲಿ ಭೇಟಿ ಮಾಡಿ, ಗುಡಸಿ ನರಸರೆಡ್ಡಿ ಅವರಿಗೆ ಟಿಕೆಟ್‌ ನೀಡುವಂತೆ ಒತ್ತಡ ತಂದಿದ್ದು, ಇಂದು ಸಹ ಬೆಂಗಳೂರಿಗೆ ಆಗಮಿಸಿದ ಅದೇ ತಂಡ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ಮನವಿ ಮಾಡಿದೆ.

ಈ ಮಧ್ಯೆ ಡಾ. ಬಸನಗೌಡ ಸಹ ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿಯೇ ಬೀಡುಬಿಟ್ಟಿದ್ದು ಟಿಕೆಟ್‌ಗಾಗಿ ತಮ್ಮದೇ ಆದ ರೀತಿಯಲ್ಲಿ ಪ್ರಯತ್ನ ಮುಂದುವರಿಸಿದ್ದಾರೆ. ಅಚ್ಚರಿ ಬೆಳವಣಿಗೆಯೊಂದರಲ್ಲಿ  ಮಾಜಿ ಶಾಸಕ ಬಸನಗೌಡ ಬ್ಯಾಗ್‌ವಾಟ್ ಸಹ ರಾಯಚೂರು ಟಿಕೆಟ್‌ಗಾಗಿ ಪ್ರಯತ್ನ ನಡೆಸಿದ್ದು, ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಈ ಎಲ್ಲಾ ಬೆಳವಣಿಗೆ ಮಧ್ಯೆ ನಾಳೆ ಬೆಂಗಳೂರಿನಲ್ಲಿ ನಡೆಯುವ ಬಿಜೆಪಿ ಚುನಾವಣಾ ಸಮಿತಿ ಸಭೆಯಲ್ಲಿ ರಾಯಚೂರು ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಕುರಿತು ತೀರ್ಮಾನವಾಗುವ ಸಾಧ್ಯತೆಯಿದೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ