Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಲ್ ಜೀವನ್ ಮಿಷನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಸುದ್ದಿಮೂಲ ವಾರ್ತೆ

ಮಂಡ್ಯ, ಜು.15: ಜl ಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಸಂಸದೆ ಸುಮಲತಾ ಅಂಬರೀಶ್ ಅವರು ತಿಳಿಸಿದರು.

ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜl ಜೀವನ್ ಮಿಷನ್ ಯೋಜನೆಯಡಿ 3 ಹಂತದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಕೆಲವು ಕಾಮಗಾರಿಗಳನ್ನು ಗುತ್ತಿಗೆದಾರರು ಪೂರ್ಣಗೊಳಿಸದೇ ಅರ್ಧಕ್ಕೆ ಬಿಟ್ಟಿರುವವರನ್ನು ಕಪ್ಪು ಪಟ್ಟಿಗೆ ಸೇರಿಸಬೇಕು ಎಂದರು.

ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ಜಲ್ ಜೀಚನ್ ಯೋಜನೆಗೆ ಸಂಬಂಧಿಸಿದಂತೆ ಎರಡು ಪೈಪ್ ಲೈನ್ ಇರುವ ಬಗ್ಗೆ ಚರ್ಚಿಸಿದಾಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಾತನಾಡಿ ಜಲ್ ಜೀವನ್ ಮಿಷನ್ ಮುಂದಿನ 30 ವರ್ಷಗಳ ಅವಧಿಗೆ ಆಯೋಜಿಸಲಾಗುತ್ತದೆ. ಕೆಲವು ಹಿಂದೆ ನಿರ್ಮಿಸಿರುವ ಪೈಪ್ ಲೈನ್ ಹಳೆಯದಾಗಿದ್ದು, ಯೋಜನೆಗೆ ಅನುಗುಣವಾಗಿ ನೀರು ಸರಬರಾಜು ಮಾಡುವುದು ಕಷ್ಟಕರವಾಗಿರುತ್ತದೆ ಎಂದು ಮಾಹಿತಿ ನೀಡಿದರು.

ಸಂಸದರು ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಹೆಚ್ಚು ಅಪಘಾತವಾಗುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಮೀಡಿಯನ್ ಗುಣಮಟ್ಟ ಹೆಚ್ಚಿಸುವುದು, ರಸ್ತೆ ದೀಪಗಳು, ಸೂಚನಾ ಪಲಕಗಳು ಹೆಚ್ಚಿಸುವ ಕುರಿತು ಈಗಾಗಲೇ ಸೂಚನೆ ನೀಡಲಾಗಿದ್ದು, ಅವುಗಳನ್ನು ಅನುಷ್ಠಾನವಾಗಬೇಕು. ಬೆಂಗಳೂರು ಮೈಸೂರು ಹೆದ್ದಾರಿ ಕುರಿತಂತೆ ಜನರಿಂದ ಟೋಲ್ ಸಂಗ್ರಹಣೆ ಮಾಡಲಾಗುತ್ತಿತ್ತು, ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಒಪ್ಪಿಕೊಂಡಿರುವ ಎಲ್ಲಾ ಕಾಮಗಾರಿಗಳು ಹಾಗೂ ಸೌಲಭ್ಯಗಳನ್ನು ಒದಗಿಸಬೇಕು. ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಕುರಿತಂತೆ ಚರ್ಚಿಸಲಾಗಿರುವ ವಿಷಯಗಳ ಬಗ್ಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡುವಂತೆ ಎನ್‌ಹಚ್‌ಎ.ಐ ಪಿ.ಡಿ ಅವರಿಗೆ ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, ಈಗಾಗಲೇ ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯನ್ನು ಪರಿಶೀಲಿಸಿದ ಸಂದರ್ಭದಲ್ಲಿ ಮುಖ್ಯವಾಗಿ ಲೇನ್ ವೇಗ, ಸೂಚನಾ ಪಲಕ ಅಳವಡಿಸುವಂತೆ ತಿಳಿಸಲಾಗಿದೆ. 1525 ಬೀದಿ ದೀಪ‌ದ ಅವಶ್ಯಕತೆ ಇದ್ದು ಕೇವಲ 850 ಮಾತ್ರ ಅಳವಡಿಸಲಾಗಿದೆ. ಹೈ ವೇ ಪ್ಯಾಟ್ರೋಲಿಂಗ್, ಅಂಬೂಲೆನ್ಸ್ ಹಾಗೂ ಕ್ರೇನ್ ಗಳ ಸಂಖ್ಯೆ ಹೆಚ್ಚಳ ಮಾಡುವಂತೆ ತಿಳಿಸಲಾಗಿದೆ ಎಂದರು.

ಮಳೆಯ ಕೊರತೆ ಉಂಟಾದರೆ ಹಾಲಿ ಬೆಳೆಗೆ ನೀರು ಒದಗಿಸುವ ಬಗ್ಗೆ ಹಾಗೂ ಕುಡಿಯುವ ನೀರಿನ ಬಗ್ಗೆ ಸಂಸದರು ಮಾಹಿತಿ ಕೇಳಿದಾಗ ಕಾವೇರಿ ನೀರಾವರಿ ನಿಗಮ ನಿಯಮಿತದ ಅಧೀಕ್ಷಕ ಇಂಜಿನಿಯರ್ ರಘುರಾಮ್ ಅವರು ಮಾತನಾಡಿ ಸದರಿ ಪರಿಸ್ಥಿತಿಯಲ್ಲಿ ಮಳೆಯ ಅಭಾವ ಉಂಟಾದರೆ ಜುಲೈ‌ ಅಂತ್ಯದವರೆಗೆ ಮಾತ್ರ ಬೆಳೆಗಳಿಗೆ ನೀರು ಒದಗಿಸಲು ಸಾಧ್ಯ. ನೀರಾವರಿ ಸಲಹಾ ಸಮಿತಿಗೆ ಮಾಹಿತಿ ನೀಡಲು ಕೃಷಿ, ನೀರಾವರಿ ಹಾಗೂ ಕಂದಾಯ ಇಲಾಖೆ ಒಟ್ಟಿಗೆ ಸಮೀಕ್ಷೆ ನಡೆಸಿ ವರದಿ ನೀಡಲಿದೆ ಎಂದರು.

ಸಭೆಯಲ್ಲಿ ಮಂಡ್ಯ ಶಾಸಕ ರವಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಯತೀಶ್, ಅರಣ್ಯ ಅಧಿಕಾರಿ ರುದ್ರನ್ ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ