Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅದ್ಧೂರಿ ದಸರಾ ಆಚರಣೆಗೆ ತೀರ್ಮಾನ

ಬೆಂಗಳೂರು, ಜು.31: ನಾಡಹಬ್ಬ ದಸರಾ ಮಹೋತ್ಸವವನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಆಚರಿಸಬೇಕು. ದಸರಾ ಜನರ ಉತ್ಸವವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲಹೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಅವರು ಮಾತನಡಿದರು.

ದಸರಾ ಹಬ್ಬವನ್ನು ಅ.15 ರಂದು ಬೆಳಿಗ್ಗೆ10.15 ರಿಂದ 10.30 ಕ್ಕೆ ಸಲ್ಲುವ ಮಹೂರ್ತದಲ್ಲಿ ಉದ್ಘಾಟನೆ ನೆರವೇರಲಿದ್ದು, ಪಂಜಿನ ಕವಾಯತು ವಿಜಯದಶಮಿ ದಿನದಂದು ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮಗಳು, ಚಲನಚಿತ್ರೋತ್ಸವ, ರೈತರ ದಸರಾ, ಯುವ ದಸರಾ ಎಲ್ಲವನ್ನು ವ್ಯವಸ್ಥಿತವಾಗಿ ಆಚರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.

ವಿಶಿಷ್ಟ ದೀಪಾಲಂಕಾರ:

ಜಂಬೂ ಸವಾರಿ, ದೀಪಾಲಂಕಾರ, ಪಂಜಿನ ಕವಾಯತು ಬಹಳ ಮುಖ್ಯ ವಾಗಿ ಆಚರಿಸಲ್ಪಡುತ್ತದೆ. ಈ ಬಾರಿ ದೀಪಾಲಂಕಾರ ದಸರಾ ಉದ್ಘಾಟನೆಯಾದ ದಿನದಿಂದ ದಸರಾ ಮುಗಿಯುವವರೆಗೂ ಹಾಗೂ ನಂತರ ಒಂದು ವಾರದವವರೆಗೆ ದೀಪಾಲಂಕಾರ ಇರಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

5 ಗ್ಯಾರಂಟಿ ಬಿಂಬಿಸುವ ಸ್ತಬ್ಧಚಿತ್ರ:

ಸ್ತಬ್ಧಚಿತ್ರಗಳ ಆಯ್ಕೆ ಮಾಡುವ ಸಂದರ್ಭದಲ್ಲಿ ರಾಜ್ಯದ ಪರಂಪರೆ, ಜಿಲ್ಲಾ ವೈಶಿಷ್ಟ್ಯತೆ ಗಳ ಜೊತೆಗೆ 5 ಗ್ಯಾರಂಟಿಗಳನ್ನು ಬಿಂಬಿಸಿ ಜನರಿಗೆ ಸಂದೇಶವನ್ನು ನೀಡುವಂತಿರಬೇಕು ಎಂದು ಸೂಚಿಸಿದರು.

ದಸರಾ ಉದ್ಘಾಟನಾ ದಿನದಂದೇ ವಸ್ತು ಪ್ರದರ್ಶನವೂ ಉದ್ಘಾಟನೆಯಾಗಲಿದ್ದು, .ವಸ್ತು ಪ್ರದರ್ಶನದಲ್ಲಿ ಸರ್ಕಾರಿ ಇಲಾಖೆಗಳು ಮಳಿಗೆಗಳನ್ನು ತೆರೆಯಬೇಕು ಹಾಗೂ ಎಲ್ಲ ಮಳಿಗೆಗಳೂ ಕೂಡ ಭರ್ತಿಯಾಗಿರಬೇಕೆಂದು ಸೂಚಿಸಿದರು.

ಎಲ್ಲಾ ಪ್ರಕಾರಗಳಲಿ ರಾಜ್ಯದ ಉತ್ತಮ ಕಲಾವಿದರಿದ್ದಾರೆ. ಅವರಿಗೆ ಹೆಚ್ಚಿನ ಒತ್ತು ನೀಡಬೇಕು ಹಾಗೂ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಯುವ ದಸರಾದಲ್ಲಿ ವೇದಿಕೆ ಕಲ್ಪಿಸಿ, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕೆಂದು ನಿರ್ಧರಿಸಲಾಯಿತು.

ಪ್ರವಾಸೋದ್ಯಮಕ್ಕೆ ಒತ್ತು:

ನಾಡಹಬ್ಬ ದಸರಾ ನೋಡಲು ಆಗಮಿಸುವ ಪ್ರವಾಸಿಗರಿಗೆ ಅಗತ್ಯ ಮೂಲಸೌಕಾರ್ಯಗಳನ್ನು ಒದಗಿಸಬೇಕು. ಯಾವುದೇ ತೊಂದರೆಗಳಾಗದಂತೆ ಕ್ರಮ ವಹಿಸಬೇಕೆಂದು ತಿಳಿಸಿದರು.

ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಆಗಮಿಸುವ ನಿರೀಕ್ಷೆ ಇದ್ದು, ಸೂಕ್ತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಏರ್ ಶೋ :ದಸರಾ ಸಂದರ್ಭದಲ್ಲಿ ಏರ್ ಶೋ ಹಮ್ಮಿಕೊಳ್ಳಲು ಉದ್ದೇಶವಿದ್ದು, ಈ ಕುರಿತು ಕೇಂದ್ರ ರಕ್ಷಣಾ ಸಚಿವರೊಂದಿಗೆ ಚರ್ಚಿಸಲಾಗುವುದು ಎಂದರು.

ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ: ಹೆಚ್.ಸಿ.ಮಹದೇವಪ್ಪ, ಶಿವರಾಜ ತಂಗಡಗಿ, ಹೆಚ್.ಕೆ.ಪಾಟೀಲ್, ಭೈರತಿ ಸುರೇಶ್,ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಜಿ.ಟಿ. ದೇವೇಗೌಡ,ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮೈಸೂರು ಜಿಲ್ಲಾಧಿಕಾರಿ ಡಾ: ರಾಜೇಂದ್ರ ಕೆ.ವಿ ಮೊದಲಾದವರು ಉಪಸ್ಥಿತರಿದ್ದರು.

ಸಭೆಯ ಮುಖ್ಯಾಂಶಗಳು:

ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರಗಳಲ್ಲಿ ದಸರಾ ಉತ್ಸವ ನಡೆಸಲು ತೀರ್ಮಾನಿಸಲಾಯಿತು.

ದಸರಾ ಉದ್ಘಾಟಕರನ್ನು ಆಯ್ಕೆ ಮಾಡುವ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ನೀಡಲಾಯಿತು.

ಕಾರ್ಯಕಾರಿ ಸಮಿತಿ ನಾಡಹಬ್ಬಕ್ಕೆ ಎಷ್ಟು ವೆಚ್ಚವಾಗಲಿದೆ ಎಂದು ತಿಳಿಸಲಿದ್ದು, ಅದರ ಆಧಾರದ ಮೇಲೆ ದಸರಾ ಹಬ್ಬಕ್ಕೆ ಅನುದಾನ ಒದಗಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಯಿತು

ದಸರಾದಲ್ಲಿ ಅನಗತ್ಯ ಖರ್ಚುಗಳನ್ನು ಹಾಗೂ ಅನಗತ್ಯ ಕಾರ್ಯಕ್ರಮಗಳನ್ನು ಕೈ ಬಿಡಬೇಕು ಎಂದು ತೀರ್ಮಾನಿಸಲಾಯಿತು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ