Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೇಮಕಾತಿ, ಬಡ್ತಿಿಗೆ ಷರತ್ತುಬದ್ಧ ಅನುಮತಿ

ಸುದ್ದಿಮೂಲ ವಾರ್ತೆ ಬೆಂಗಳೂರು, ನ.27:
ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿ ಒಟ್ಟು ಮೀಸಲು ಪ್ರಮಾಣವನ್ನು ಶೇ.50ರಿಂದ 56ಕ್ಕೆೆ ಹೆಚ್ಚಿಿಸಿದ್ದ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಡಗಗಳ (ಶೈಕ್ಷಣಿಕ ಸಂಸ್ಥೆೆಗಳಲ್ಲಿನ ಸ್ಥಾಾನಗಳಲ್ಲಿ ಮತ್ತು ರಾಜ್ಯಾಾಧೀನ ಸೇವೆಗಳಲ್ಲಿ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಕಾಯಿದೆ-2022ರ ಅನ್ವಯ ಈಗಾಗಲೇ ಆರಂಭಿಸಿರುವ ಸರ್ಕಾರಿ ಹುದ್ದೆಗಳ ನೇಮಕಾತಿ ಮತ್ತು ಬಡ್ತಿಿ ಪ್ರಕ್ರಿಿಯೆ ಮುಂದುವರಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆೆ ಷರತ್ತುಬದ್ಧ ಅನುಮತಿ ನೀಡಿದೆ.
ಇದರಿಂದ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಸಾವಿರಾರು ಹುದ್ದೆಗಳ ಪೈಕಿ 3,644 ಹುದ್ದೆಗಳ ನೇಮಕಾತಿಗೆ ಅನುಮತಿ ದೊರೆತಂತಾಗಿದೆ.
ಎಸ್ಸಿಿ-ಎಸ್ಟಿಿ ಮೀಸಲಾತಿ ಕಾಯಿದೆ ಅನ್ವಯ ಶೇ. 50ಕ್ಕೂ ಹೆಚ್ಚು ಮೀಸಲಾತಿ ನೀಡುವುದಕ್ಕೆೆ ಆಕ್ಷೇಪಿಸಿ ಡಾ.ಅಂಬೇಡ್ಕರ್ ಪರಿಶಿಷ್ಟ ಜಾತಿಗಳ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಮಹೇಂದ್ರ ಕುಮಾರ್ ಮಿತ್ರಾಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಿ ಅರ್ಜಿಯನ್ನು ಮುಖ್ಯ ನ್ಯಾಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಾಯಮೂರ್ತಿ ಸಿ ಎಂ ಪೂಣಚ್ಚ ಅವರ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಮೀಸಲಾತಿ ಹೆಚ್ಚಿಿಸಿರುವುದರ ಅನುಸಾರ ಹೊಸದಾಗಿ ಯಾವುದೇ ನೇಮಕಾತಿ ಅಥವಾ ಬಡ್ತಿಿ ನೀಡುವಂತಿಲ್ಲ. ಕಾಯಿದೆಯ ಅನ್ವಯ ಈಗಾಗಲೇ ಆರಂಭಿಸಿರುವ ನೇಮಕಾತಿ ಪ್ರಕ್ರಿಿಯೆ ಮುಂದುವರಿಸಬಹುದು. ನೇಮಕಾತಿ ಅಥವಾ ಸೀಟುಗಳ ಹಂಚಿಕೆಯು ಹಾಲಿ ಅರ್ಜಿಗಳ ಅಂತಿಮ ನಿರ್ಧಾರಕ್ಕೆೆ ಒಳಪಟ್ಟಿಿರುತ್ತದೆ. ಇದನ್ನು ನೇಮಕಾತಿ ಅಥವಾ ಬಡ್ತಿಿ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಬೇಕು. ಈ ವಿಚಾರದಲ್ಲಿ ಅಭ್ಯರ್ಥಿಗಳಿಗೆ ಯಾವುದೇ ಹಕ್ಕು ದೊರೆಯುವುದಿಲ್ಲ. ಈ ಮಾರ್ಪಾಡು 19-11-2025ರ ಮಧ್ಯಂತರ ಆದೇಶಕ್ಕೆೆ ಮಾತ್ರ ಅನ್ವಯಿಸುತ್ತದೆ ಎಂದು ನ್ಯಾಾಯಾಲಯ ಆದೇಶಿಸಿದೆ.
ಅಲ್ಲದೇ, ರಾಜ್ಯ ಸರ್ಕಾರಕ್ಕೆೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಿದ್ದು, ವಿಚಾರಣೆಯನ್ನು ಜನವರಿ 28ಕ್ಕೆೆ ಮುಂದೂಡಿದೆ.
ಇದಕ್ಕೂ ಮುನ್ನ, ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿಿ ಅವರು ಕಾಯಿದೆ ಅನ್ವಯ ಕರ್ನಾಟಕ ಲೋಕಸೇವಾ ಆಯೋಗವು ನೇಮಕಾತಿ ಆರಂಭಿಸಿದ್ದು, ಅಂತಿಮ ಹಂತದಲ್ಲಿದೆ. ಒಟ್ಟು 3,644 ಹುದ್ದೆಗಳನ್ನು ಭರ್ತಿ ಮಾಡಬೇಕಿದೆ. ಹೊಸದಾಗಿ ಯಾವುದೇ ಅಧಿಸೂಚನೆ ಹೊರಡಿಸುವುದಿಲ್ಲ. ಹೊಸ ಕಾಯಿದೆ ಅಡಿ ಈಗಾಗಲೇ ನೇಮಕಾತಿ ಮಾಡಿರುವುದಕ್ಕೆೆ ಮಧ್ಯಂತರ ಆದೇಶ ಅನ್ವಯಿಸಲ್ಲ ಎಂದು ಆದೇಶಿಸಬೇಕು. ಅರ್ಜಿದಾರರು ಸರ್ಕಾರದ ಅಧಿಸೂಚನೆಗಳನ್ನು ಪ್ರಶ್ನಿಿಸಿಲ್ಲ. ಹೀಗಾಗಿ, ನೇಮಕಾತಿ ಪ್ರಕ್ರಿಿಯೆ ಮುಂದುವರಿಸಲು ಮತ್ತು ಬಡ್ತಿಿ ನೀಡಲು ಸರ್ಕಾರಕ್ಕೆೆ ಅನುಮತಿಸಬೇಕು ಎಂದು ಕೋರಿದರು.
ಅಭ್ಯರ್ಥಿ ಮಧು ಎಂಬವರ ಪರವಾಗಿ ಹಾಜರಾಗಿದ್ದ ಹಿರಿಯ ವಕೀಲ ಪಿ ಎಸ್ ರಾಜಗೋಪಾಲ್ ಅವರು ನೇಮಕಾತಿ ಪ್ರಕ್ರಿಿಯೆ ನಡೆಯಲಿ, ಆದರೆ, ಲಿತಾಂಶವನ್ನು ನ್ಯಾಾಯಾಲಯದ ಅನುಮತಿ ಇಲ್ಲದೇ ಪ್ರಕಟಿಸಬಾರದು. ಬಿಬಿಎಂಪಿ ಹೊರಡಿಸಿರುವ ನೇಮಕಾತಿ ಅಧಿಸೂಚನೆಯನ್ನು ಪ್ರಶ್ನಿಿಸಿದ್ದೇವೆ. ಆಯ್ಕೆೆಯಾದ ಮೇಲೆ ನೇಮಕಾತಿ ಆದೇಶ ನೀಡಲು ಮೂರು ತಿಂಗಳಾಗುತ್ತದೆ. ಜಾತಿ ಪ್ರಮಾಣ ಪತ್ರ ಮತ್ತಿಿತರ ದಾಖಲೆಗಳನ್ನು ಪರಿಶೀಲಿಸಬೇಕಾಗುತ್ತದೆ. ನಿವೃತ್ತ ನ್ಯಾಾ. ಎಚ್ ಎನ್ ನಾಗಮೋಹನ್ ದಾಸ್ ಸಮಿತಿಯ ವರದಿ ಅನುಸಾರ ಮೀಸಲಾತಿ ಹೆಚ್ಚಿಿಸಿರುವುದಾಗಿ ಸರ್ಕಾರ ಹೇಳುತ್ತಿಿದೆ. ಆದರೆ, ನ್ಯಾಾ. ನಾಗಮೋಹನ್ ದಾಸ್ ಸಮಿತಿಯು ಅಗತ್ಯ ಪ್ರಾಾತಿನಿಧ್ಯ ಪರೀಕ್ಷೆ ಅನ್ವಯಿಸುವಲ್ಲಿ ಮೂಲಭೂತವಾಗಿ ಎಡವಿದೆ. ಅದು ಅನುಪಾತದ ಪ್ರಾಾತಿನಿಧ್ಯ ಕಲ್ಪಿಿಸಿದೆ ಎಂದು ಆಕ್ಷೇಪಿಸಿದರು.

ಅರ್ಜಿದಾರರ ಪರ ವಕೀಲರಾದ ನಚಿಕೇತ್ ಮತ್ತು ರಂಗನಾಥ್ ಜೋಯಿಷ್ ಅವರು ನೇಮಕಾತಿ ಪ್ರಕ್ರಿಿಯೆ ಮುಂದುವರಿಸಲು ಅವಕಾಶ ನೀಡಬಾರದು. ಅರ್ಜಿಗಳನ್ನು ಅಂತಿಮವಾಗಿ ಇತ್ಯರ್ಥಪಡಿಸುವ ನಿಟ್ಟಿಿನಲ್ಲಿ ವಾದಿಸಲು ಸಿದ್ಧರಾಗಿದ್ದು, ಅದಕ್ಕೆೆ ಆದ್ಯತೆ ನೀಡಬೇಕು ಎಂದರು.
ಪರಿಶಿಷ್ಟ ಜಾತಿಗೆ ಶೇ 15ರಿಂದ 17 ಮತ್ತು ಪರಿಶಿಷ್ಟ ಪಂಗಡಕ್ಕೆೆ ಶೇ 3 ರಿಂದ ಶೇ7ರ ವರೆಗೂ ಮೀಸಲಾತಿ ಹೆಚ್ಚಳ ಮಾಡಿ ಒಟ್ಟು ಮೀಸಲಾತಿಯನ್ನು 56ಕ್ಕೆೆ ಹೆಚ್ಚಿಿಸಿ ರಾಜ್ಯ ಸರ್ಕಾರ 2023ರ ಜನವರಿ 12ರಂದು ಅಧಿಸೂಚನೆ ಹೊರಡಿಸಿದೆ. ಸರ್ಕಾರ ಅನುಮತಿ ಪಡೆಯದೇ ಮೀಸಲಾತಿ ಹೆಚ್ಚಳ ಮಾಡಿರುವುದು ಸಂವಿಧಾನ ಬಾಹಿರ. ಆದ್ದರಿಂದ, ಕಾಯಿದೆಯನ್ನು ಅಸಾಂವಿಧಾನಿಕ ಎಂದು ಘೋಷಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ