Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಲೆಏರಿಕೆಯ ಗ್ಯಾರಂಟಿ ಕೊಟ್ಟ ಕಾಂಗ್ರೆಸ್: ಸಿ.ಟಿ.ರವಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಜೂ.27: ಕಾಂಗ್ರೆಸ್ ಜನರಿಗೆ ಬೆಲೆಏರಿಕೆಯ ಗ್ಯಾರಂಟಿ ನೀಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಆಕ್ಷೇಪಿಸಿದರು.

ನಗರದ ಕೆ.ಜಿ.ರಸ್ತೆಯ ಹೋಟೆಲ್ ಬೆಂಗಳೂರು ಗೇಟ್‍ನಲ್ಲಿ ಗಾಂಧಿನಗರ ಮಂಡಲದ ವತಿಯಿಂದ ಇಂದು ನಡೆದ ‘ನನ್ನ ಬೂತ್ ಶಕ್ತಿಶಾಲಿ ಬೂತ್' ಕಾರ್ಯಕ್ರಮವನ್ನು ಉದ್ಘಾಟಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿದರು.

ಸದ್ದಿಲ್ಲದೆ ವಿದ್ಯುತ್ ದರ ಏರಿಸಿದ್ದಾರೆ. ಅಬಕಾರಿ ಸುಂಕವನ್ನೂ ಏರಿಸಿದ್ದಾರೆ. ಅದರ ಬೆನ್ನಿಗೇ ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಪಿಕ್ ಪಾಕೆಟರ್‍ಗಿಂತ ನಾಜೂಕಾಗಿ ಜೋಬು ಕತ್ತರಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಮುಂದೆ ಕೊಟ್ಟಂತೆ ತೋರಿಸಿದ್ದಾರೆ. ಇನ್ನೊಂದೆಡೆ ಪಿಕ್ ಪಾಕೆಟ್ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿರುವುದು ನಮ್ಮ ಅನುಭವಕ್ಕೆ ಬಂದಿದೆ ಎಂದು ನುಡಿದರು.

ಕಾಂಗ್ರೆಸ್ ಆಡಳಿತದಲ್ಲಿ ಇದ್ದಲ್ಲೆಲ್ಲ ಹಗರಣಗಳದ್ದೇ ಸದ್ದು. ಅವರೆಲ್ಲರೂ ಖಾಯಂ ಜೈಲಿನಲ್ಲಿ ಇರಬೇಕಾದ ಭಯದಿಂದ ಒಟ್ಟಾಗಲು ಯತ್ನಿಸುತ್ತಿದ್ದಾರೆ. ಭಾರತದ ಅಭಿವೃದ್ಧಿ, ಉದ್ಧರಿಸುವ ಅಜೆಂಡ ಅವರದಲ್ಲ. ಕುಟುಂಬ ಉಳಿಸಿಕೊಳ್ಳುವುದು, ಜೈಲಿಗೆ ಹೋಗುವುದನ್ನು ತಪ್ಪಿಸುವ ಉದ್ದೇಶ ಈ ವಿಪಕ್ಷಗಳದು ಎಂದು ಟೀಕಿಸಿದರು.

ಭೋಪಾಲ್‍ನಲ್ಲಿ ದೇಶದ ಎಲ್ಲ ಲೋಕಸಭಾ ಕ್ಷೇತ್ರದ ವಿಸ್ತಾರಕರ ಜೊತೆ ಹಾಗೂ ದೇಶದ 10 ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರ ಜೊತೆಗೆ ವರ್ಚುವಲ್ ಮಾಧ್ಯಮದಲ್ಲಿ ಪ್ರಧಾನಿ ನರೇಂದ್ರ ಮೋದಿಜಿಯವರು ಮಾತನಾಡಿದ್ದಾರೆ. ಕಾರ್ಯಕರ್ತರ ಪ್ರಶ್ನೆಗಳು, ಅನುಮಾನಗಳಿಗೆ ಉತ್ತರವನ್ನು ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ಬಿಹಾರದ ಪಾಟ್ನಾದಲ್ಲಿ 15ಕ್ಕೂ ಹೆಚ್ಚು ವಿಪಕ್ಷಗಳು ಸೇರಿ ಬಿಜೆಪಿಯನ್ನು ಸೋಲಿಸುವುದು ಹೇಗೆ? ಎಂಬ ಪ್ರಯತ್ನ ನಡೆಸಿದ್ದಾರೆ. ಇದಕ್ಕೂ ಉತ್ತರ ಕೊಟ್ಟಿದ್ದಾರೆ. ಅವರ ಪರಿವಾರ ರಕ್ಷಣೆ ಎಂಬ ದೃಷ್ಟಿಯಿಂದ ಎಂಬುದು ಮಾತಿನಿಂದ ವ್ಯಕ್ತವಾಗಿದೆ. ಕೇಂದ್ರದ ಯೋಜನೆಗಳಿಂದ ಆರಂಭಿಸಿ ಗ್ಯಾರಂಟಿ ಕಾರ್ಡ್ ವರೆಗೆ ಉತ್ತರ ನೀಡಿದ್ದಾರೆ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ಜಿಲ್ಲಾ ಕಾರ್ಯದರ್ಶಿ ಸಪ್ತಗಿರಿ ಗೌಡ ಅವರು ಕಾರ್ಯಕ್ರಮದಲ್ಲಿಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ