Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಕ್ಷೇಪ ಪಂಚಗ್ಯಾಾರಂಟಿ ಟೀಕಿಸಲು ದೇವೇಗೌಡರನ್ನು ಕಣಕ್ಕಿಿಳಿಸಿದ ಬಿಜೆಪಿ

ಸುದ್ದಿಮೂಲ ವಾರ್ತೆ ಬೆಂಗಳೂರು, ಅ.04:
ರಾಜ್ಯದಲ್ಲಿ ಕಾಂಗ್ರೆೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾಾರಂಟಿ ಯೋಜನೆಗಳನ್ನು ವಿರೋಧಿಸಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನೇ ಬಿಜೆಪಿ ಕಣಕ್ಕಿಿಳಿಸಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪಿಸಿದ್ದಾರೆ.
ಗ್ಯಾಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು ‘ಸಾಮಾಜಿಕ ನ್ಯಾಾಯ’ವನ್ನು ಎತ್ತಿಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆಯನ್ನು ತಂದಿವೆ. ಗ್ಯಾಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿಿತಿ ಹದಗೆಟ್ಟಿಿದೆ ಎಂದು ಎಚ್.ಡಿ. ದೇವೇಗೌಡರ ಹೇಳಿಕೆ ನೀಡುತ್ತಾಾರೆ. ಬಿಜೆಪಿ-ಜೆಡಿಎಸ್ ಮೈತ್ರಿಿಯ ದ್ವೇಷಕ್ಕೆೆ ಮಿತಿಯೇ ಇಲ್ಲ. ಜನರ ಬದುಕಿಗೆ ಬೆಳಕಾಗಿರುವ ಈ ಯೋಜನೆಗಳನ್ನು ವಿರೋಧಿಸಲು ದೇವೇಗೌಡರನ್ನೇ ಬಿಜೆಪಿ ಮುಂದೆ ಬಿಟ್ಟಿಿದೆ. ಇಂತಹ ‘ಕುರುಡು ದೃಷ್ಟಿಿಯುಳ್ಳ ಪಕ್ಷಗಳು’ ನಾಚಿಕೆಪಡಬೇಕು ಎಂದು ಖಂಡಿಸಿದ್ದಾರೆ.
ಮಹಿಳೆಯರು ಈಗಾಗಲೇ 526 ಕೋಟಿಗೂ ಹೆಚ್ಚು ಬಾರಿ ಉಚಿತ ಬಸ್ ಪ್ರಯಾಣ ಮಾಡಿದ್ದಾರೆ. ಇದಕ್ಕಾಾಗಿ ಸರ್ಕಾರ ಅ.1ರವರೆಗೆ 14,274.32 ಕೋಟಿ ರೂ. ವ್ಯಯಿಸಿದೆ. ಬಹುಮುಖ್ಯವಾಗಿ ಶಕ್ತಿಿ ಯೋಜನೆ ಪ್ರತಿಷ್ಠಿಿತ ಗೋಲ್ಡನ್ ಬುಕ್ ಆ್ ರೆಕಾಡ್ಸರ್ ನಲ್ಲಿ ದಾಖಲಾಗಿರುವುದು ಮಹಿಳೆಯರ ಓಡಾಟ, ಸ್ವಾಾತಂತ್ರ್ಯ ಮತ್ತು ದುಡಿಯುವ ಸಾಮರ್ಥ್ಯವನ್ನು ಹೆಚ್ಚಿಿಸಿ ‘ಹೊಸ ವಿಶ್ವ ದಾಖಲೆ’ ಸೃಷ್ಟಿಿಸಿದೆ.
ರಾಜ್ಯದ 1.23 ಕೋಟಿ ಮಹಿಳೆಯರ ಖಾತೆಗೆ ಪ್ರತಿ ತಿಂಗಳು 2,000 ವರ್ಗಾವಣೆಯಾಗುತ್ತಿಿದ್ದು, ಶೇ. 94ರಷ್ಟು ಕುಟುಂಬಗಳ ಆರ್ಥಿಕ ಮಟ್ಟ ಸುಧಾರಿಸಿದೆ. ಗೃಹಲಕ್ಷ್ಮಿಿ ಯೋಜನೆಗೆ ರಾಜ್ಯ ಸರ್ಕಾರ ಇದುವರೆಗೆ 50,005 ಕೋಟಿ ರೂ. ಹಣ ವ್ಯಯಿಸಿದೆ.
1.64 ಕೋಟಿ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಿದ್ದರಿಂದ ಶೇ. 90ರಷ್ಟು ಕುಟುಂಬಗಳು ಹಣ ಉಳಿಸಿ, ಅದನ್ನು ’ಮನೆಯ ಇತರ ಅಗತ್ಯಗಳಿಗೆ’ ಬಳಸುತ್ತಿಿವೆ. ಈ ಯೋಜನೆಗಾಗಿ 18,139 ಕೋಟಿ ರೂ. ಹಣವನ್ನು ಕಾಂಗ್ರೆೆಸ್ ಸರ್ಕಾರ ವ್ಯಯಿಸಿದೆ.
ಗೃಹ ಲಕ್ಷ್ಮಿಿ, ಗೃಹ ಜ್ಯೋೋತಿ ಮತ್ತು ಅನ್ನ ಭಾಗ್ಯ (4.49 ಕೋಟಿ ಕನ್ನಡಿಗರಿಗೆ 10 ಕೆಜಿ ಅಕ್ಕಿಿ) ಯೋಜನೆಗಳು ಕುಟುಂಬದ ಉಳಿತಾಯವನ್ನು ಹೆಚ್ಚಿಿಸಿ ಆರ್ಥಿಕ ಸಮೃದ್ಧಿಿಗೆ ಬಲ ನೀಡಿವೆ.15000 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ. ನಿರುದ್ಯೋೋಗಿ ಯುವಕರಿಗೆ ಮಾಸಿಕ 1,500-3,000 ರೂ. ಭತ್ಯೆೆ ನೀಡಿ ಸಬಲೀಕರಣ ಮಾಡಿದೆ. 2.55 ಲಕ್ಷ ಲಾನುಭವಿಗಳಿಗೆ 623 ಕೋಟಿ ರೂ. ಹಣವನ್ನು ಸರ್ಕಾರ ನೀಡಿದೆ.
ಪಂಚಗ್ಯಾಾರಂಟಿ ಯೋಜನೆಗಳಿಗಾಗಿಯೇ ರಾಜ್ಯ ಸರ್ಕಾರ 97 ಸಾವಿರ ಕೋಟಿ ರೂ.ಗೂ ಅಧಿಕ ಹಣವನ್ನು ವ್ಯಯಿಸುತ್ತಿಿರುವಾಗ ಆರ್ಥಿಕ ಪರಿಸ್ಥಿಿತಿ ಹೇಗೆ ಹದಗೆಟ್ಟಿಿದೆ?
ಕಾಂಗ್ರೆೆಸ್‌ನ ಸಾಮಾಜಿಕ ನ್ಯಾಾಯದ ಉದ್ದೇಶವನ್ನು ಹತ್ತಿಿಕ್ಕುವ ಮೂಲಕ ಗ್ಯಾಾರಂಟಿಗಳನ್ನು ಸ್ಥಗಿತಗೊಳಿಸಲು ಬಿಜೆಪಿ-ಜೆಡಿಎಸ್ ಬಯಸುತ್ತಿಿವೆ ಎಂಬುದು ಪ್ರತಿ ಕನ್ನಡಿಗನಿಗೂ ತಿಳಿದಿದೆ. ಆದರೆ ನಮ್ಮ ಸರ್ಕಾರ ಕರ್ನಾಟಕದ ಪ್ರತಿಯೊಬ್ಬ ನಾಗರಿಕರ ಪರವಾಗಿದ್ದು, ಇಂತಹ ದುಷ್ಟ ಯತ್ನವನ್ನು ತಡೆಯುತ್ತೇವೆ ಎಂದು ಸುರ್ಜೇವಾಲಾ ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ