Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್‌ನದ್ದು ಮಹಿಳೆಯರು, ಯುವಕರನ್ನು ಯಾಮಾರಿಸುವ ಗ್ಯಾರಂಟಿ: ಬೊಮ್ಮಾಯಿ

ಸುದ್ದಿಮೂಲ ವಾರ್ತೆ

ಬಾಗಲಕೋಟೆ, ಮಾ. 21:  ಕಾಂಗ್ರೆಸ್‌ನದ್ದು ಮಹಿಳೆಯರು, ಯುವಕರನ್ನು ಯಾಮಾರಿಸುವ ಗ್ಯಾರಂಟಿಗಳು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೇವಡಿ ಮಾಡಿದರು.

ಅವರು ಇಂದು ಮುಧೋಳದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಬಿಜೆಪಿ  ಬೊಗಸ್ ಗ್ಯಾರಂಟಿಗಳನ್ನು ಕೊಡುವುದಿಲ್ಲ. ನಮ್ಮ ಕೆಲಸ ನಮ್ಮ ಗ್ಯಾರಂಟಿ.  ಜನರಿಗೆ ಮುಟ್ಟಿರುವ ಗ್ಯಾರಂಟಿ ಇದು.  ನಮ್ಮ ಕೆಲಸಗಳನ್ನು ಲೋಕಾರ್ಪಣೆ ಮಾಡುವ ಮೂಲಕ ಗ್ಯಾರಂಟಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

ನಿರುದ್ಯೋಗ ಭತ್ಯೆ ರಾಹುಲ್ ಗಾಂಧಿಯಿಂದ ಪ್ರಾರಂಭಿಸಬೇಕು. ನಿರುದ್ಯೋಗಿಗಳಿಗೆ ಮೂರು ಸಾವಿರ ನೀಡುವುದಾಗಿ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅವರಿಂದಲೇ ಪ್ರಾರಂಭವಾಗಬೇಕು ಎಂದರು.

ನಿರುದ್ಯೋಗಿಗಳಿಗೆ ಭತ್ಯೆ  ಬಗ್ಗೆ ರಾಜಸ್ತಾನ, ಛತ್ತೀಸ್‌ಗಢದಲ್ಲಿಯೂ ಹೇಳಿದ್ದರು. ಆದರೆ, ಅನುಷ್ಠಾನವಾಗಿಲ್ಲ.  ಅವರು ಹತಾಶರಾಗಿದ್ದಾರೆ. ಅವರಿಗೆ ಆಂತರಿಕ  ಸಮೀಕ್ಷೆಯಲ್ಲಿ ಗೆಲ್ಲುವುದಿಲ್ಲ ಎಂದು ತಿಳಿದಿದೆ. ಶೇ 3-4 ರಷ್ಟು  ಮತ ಗೆಲ್ಲಲು ಈ ರೀತಿಯ ಆಗಲಾರದ ಯೋಜನೆಗಳನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕ ರಾಜಸ್ತಾನ ಅಥವಾ ಛತ್ತೀಸ್‌ಗಢ ಅಲ್ಲ. ಕರ್ನಾಟಕದ ಜನ ಬಹಳ ಪ್ರಬುದ್ಧರಿದ್ದಾರೆ. ಯಾರು ಯಾಕೆ ಮಾತನಾಡುತ್ತಿದ್ದಾರೆ ಎಂದು ಅರ್ಥ ಮಾಡಿಕೊಳ್ಳಬೇಕು ಎಂದರು.

ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ಹೇಳಿದರು.

2ಎ:  ಸಂಪುಟ ಸಭೆಯ ನಂತರ ಮಾಹಿತಿ:

ಮಾ. 24 ರಂದು ಸಚಿವ ಸಂಪುಟ ಸಭೆ  ನಡೆಯಲಿದ್ದು, ಆ ಬಳಿಕ ಪಂಚಮಸಾಲಿಗಳಿಗೆ 2 ಎ ಮೀಸಲಾತಿ ನೀಡುವ ಬಗ್ಗೆ ಮಾಹಿತಿ ಸಿಗಲಿದೆ ಎಂದು ಮುಖ್ಯಮಂತ್ರಿ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಕಳೆದ  ಮೂರು ವರ್ಷಗಳಲ್ಲಿ ನೀರಾವರಿ, ಕುಡಿಯುವ ನೀರು, ರೈತರಿಗೆ ಅನುಕೂಲವಾಗುವ ಯೋಜನೆ, ಕೈಗಾರಿಕಾ ಅಭಿವೃದ್ಧಿ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಭೂತ ಸೌಲಭ್ಯಗಳಿಗೆ ಒಟ್ಟು ನೀಡಲಾಗಿದೆ.   ಹುನಗುಂದ ಮತ್ತು ಮುಧೋಳದಲ್ಲಿ ವಿವಿಧ ಕಟ್ಟಡಗಳ ಉದ್ಘಾಟನೆ ಮಾಡಲಾಗಿದೆ.  ಮುದ್ದೇಬಿಹಾಳ ಕ್ಷೇತ್ರದಲ್ಲಿ 1600 ಕೋಟಿ ರೂ.ಗಳ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರಲ್ಲದೇ ಕಳೆದ ಮೂರು ವರ್ಷಗಳ ಸರ್ಕಾರದ ನಿರ್ಣಯ, ಬಿಡುಗಡೆ ಮಾಡಿರುವ ಅನುದಾನ ಮತ್ತು ಅನುಷ್ಠಾನದ ಫಲವಾಗಿ ಇದಾಗುತ್ತಿದೆ. ನಮ್ಮ ಕೆಲಸಗಳು ಮಾತನಾಡಬೇಕು ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ