Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ, ಪಿಎಫ್ಐ ಕಪಿಮುಷ್ಟಿಯಲ್ಲಿದೆ :  ಬೊಮ್ಮಾಯಿ

ಹುಬ್ಬಳ್ಳಿ, ಮೇ 04: ಕಾಂಗ್ರೆಸ್ ಪಕ್ಷ ಎಸ್.ಡಿ.ಪಿ.ಐ ಹಾಗೂ ಪಿಎಫ್ಐ ಕಪಿಮುಷ್ಟಿಯಲ್ಲಿದ್ದು, ಅದರಿಂದ ಹೊರಬರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮತ್ತೊಬ್ಬರ ಭಾವನೆಗಳಿಗೆ ಧಕ್ಕೆ ಬರುವ ರೀತಿಯಲ್ಲಿ ಕಾಂಗ್ರೆಸ್ ವರ್ತಿಸುತ್ತಿದೆ . ಅವರ ಒತ್ತಡಕ್ಕೆ ಮಣಿಯುತ್ತಿದ್ದಾರೆ. ನಾವು ಎಸ್.ಡಿ.ಪಿ.ಐ, ಪಿಎಫ್ಐ ವಿರುದ್ಧ ಮಾತನಾಡಿದರೆ ಕಾಂಗ್ರೆಸ್ ನಾಯಕರಿಗೆ ತಳಮಳ ಶುರುವಾಗುತ್ತದೆ. ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಪಿಎಫ್ಐ ಬ್ಯಾನ್ ಆಗಿದ್ದರೂ ತಮ್ಮ ಪರವಾಗಿ ಮಾತನಾಡುತ್ತಿಲ್ಲ ಎಂಬ ಅಸಮಾಧಾನ ಪಿಎಪಿಐಗಿದೆ. ನಮಗೆ ರಕ್ಷಣೆ ಕೊಡುತ್ತಿಲ್ಲ. ನಾವು ಯಾಕೆ ನಿಮಗೆ ರಕ್ಷಣೆ ಕೊಡಬೇಕು ಅಂತ ಪಿ.ಎಫ್.ಐ ನಾಯಕರು ಪ್ರಶ್ನಿಸುತ್ತಿದ್ದಾರೆ ಎಂದರು.

ಬಾಲವೇ ದೇಹವನ್ನು ಅಲುಗಾಡಿಸುವ ಸ್ಥಿತಿ
ಪಿ.ಎಫ್.ಐ. ನ ಇನ್ನೊಂದು ರೂಪ ಎಸ್.ಡಿ.ಪಿ.ಐ.ಎಸ್.ಡಿ.ಪಿ.ಐ ಬೆಂಬಲವನ್ನು ಕಾಂಗ್ರೆಸ್ ಬಹಿರಂಗವಾಗಿ ಕೇಳಿತ್ತು.ಆದರೆ ಅವರು ಕೊಡುವುದಿಲ್ಲ ಎಂದಿದ್ದಾರೆ.ಕಾಂಗ್ರೆಸ್ ನ ಕಾಲದಲ್ಲಿ ಎಸ್.ಡಿ‌.ಪಿ.ಐ., ಪಿ.ಎಫ್.ಐ ಪ್ರಬಲವಾಗಿ ಬೆಳೆದಿದ್ದವು.
ಬಾಲವೇ ದೇಹವನ್ನು ಅಲುಗಾಡಿಸುವ ಸ್ಥಿತಿ ಇದೆ.ಎಸ್.ಡಿ.ಪಿ.ಐ‌ ಬಿಜೆಪಿಯ ಬಿ. ಟೀಂ ಅಲ್ಲ. ಬಿ ಟೀಂ ಆಗಿದ್ದರೆ ನಾವು ಪಿ.ಎಫ್.ಐ ಬ್ಯಾನ್ ಮಾಡ್ತಿದ್ದೆವಾ..?
ತಾವು ಮಾಡಿದ ತಪ್ಪನ್ನು ಮುಚ್ಚಲು ಈ ರೀತಿಯ ಆರೋಪ‌ ಮಾಡುತ್ತಿದ್ದಾರೆ ಎಂದರು.

ರಾಮನಿಗೂ ಹನುಮನಿಗೂ ಇರುವ ಸಂಬಂಧ
ಭಜರಂಗ ದಳಕ್ಕೆ ಆಂಜನೇಯನಿಗೆ ಏನು ಸಂಬಂಧ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿ, ರಾಮನಿಗೂ ಹನುಮನಿಗೂ ಏನು ಸಂಬಂಧ ಇದೆಯೋ ಅದೇ ಸಂಬಂಧ. ಆಂಜನೇಯನಿಗೂ ಭಜರಂಗ ದಳಕ್ಕಿದೆ. ಇದನ್ನು ಕಾಂಗ್ರೆಸ್ ನವರು ಅರ್ಥ ಮಾಡಿಕೊಳ್ಳಬೇಕು. ಜನರ ಭಾವನೆಗಳ ಧಕ್ಕೆ ಬರೋ ರೀತಿಯಲ್ಲಿ ಮಾತನಾಡೋದು ಸರಿಯಲ್ಲ ಎಂದರು.

ತುಷ್ಟೀಕರಣ ರಾಜಕಾರಣ
ನಾವು ನಮ್ಮ ಕಾರ್ಯಕ್ರಮಗಳ ಆಧಾರದಲ್ಲಿ ಚುನಾವಣೆ ಎದುರಿಸಿತ್ತಿದ್ದೇವೆ. ಕಾಂಗ್ರೆಸ್ ಅವರು ಭರವಸೆಗಳ ಮೇಲೆ ಚುನಾವಣೆ ಎದುರಿಸುತ್ತಿದ್ದಾರೆ. ಅನವಶ್ಯಕವಾಗಿ ಕೆದಕಿ ಕೆದಕಿ ಚುನಾವಣೆಯ ವಾತಾವರಣವನ್ನು ಜಾತಿ, ಧರ್ಮ, ಕೋಮು ಭಾವನೆಗಳ ಮೂಲಕ ಕೆರಳಿಸೋದು ಸರಿಯಲ್ಲ ಇದು ಕಾಂಗ್ರೆಸ್ ನ ತುಷ್ಟೀಕರಣ ರಾಜಕಾರಣ ತೋರ್ಪಡಿಸುತ್ತೆ ಎಂದರು.

 

ಸೋನಿಯಾಗಾಂಧಿ ಹುಬ್ಬಳ್ಳಿ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ ಸೋನಿಯಾಗಾಂಧಿ ಬರಲಿ
ನಾವು ಕಾಂಗ್ರೆಸ್ ನಾಯಕರ ರೀತಿ ಅಳೋಲ್ಲ. ಮೋದಿ, ಅಮಿತ್ ಶಾ ಯಾಕೆ ಬಂದರು ಎಂದು ಕಾಂಗ್ರೆಸ್ ನವರು ಕೇಳಿದಂತೆ ನಾವು ಕೇಳುವುದಿಲ್ಲ ಎಂದು ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ