Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನೂತನ ಸರಕಾರದ ಸಂಭ್ರಮಾಚರಣೆ, ಸಿ ಹಂಚಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು

ಸುದ್ದಿಮೂಲ ವಾರ್ತೆ

ಮಸ್ಕಿ,ಮೇ 20: ಕಾಂಗ್ರೆಸ್ ನೂತನ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ ಅವರು ಸೇರಿದಂತೆ 8 ಜನ ಸಚಿವರು ಪ್ರಮಾಣವಚನ ಸ್ವೀಕಾರದ ನಿಮಿತ್ಯವಾಗಿ ಪಟ್ಟಣದ ಕನಕ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಹೊಡೆದು ಸಿ ಹಂಚಿ ಸಂಭ್ರಮಿಸಿದರು.



ಈ ವೇಳೆ ಹಾಲುಮತ ಸಮಾಜದ ಅಧ್ಯಕ್ಷ ಮಲ್ಲನಗೌಡ ಸುಂಕನೂರ ಮಾತನಾಡಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಕುರಿತು ಘೋಷಣೆ ಕೂಗುತ್ತಾ ಎಲ್ಲಾ ಯೋಜನೆಗಳನ್ನು ಖಂಡಿತವಾಗಿಯೂ ಈಡೇರಿಸುತ್ತೇವೆ, ಸರ್ವ ಜನಾಂಗದ ಏಳಿಗೆಯನ್ನು ಬಯಸುವ ಯಾವುದಾದರೂ ಸರಕಾರವಿದ್ದರೆ ಅದು ಕಾಂಗ್ರೆಸ್ ಮಾತ್ರ, ಸ್ವಾತಂತ್ರ್ಯದಿಂದ ಇಲ್ಲಿಯವರೆಗೆ ಕಾಂಗ್ರೆಸ್ ಸರ್ಕಾರ ಬಡವರ, ದೀನ ದಲಿತರ, ಮಹಿಳೆಯರ, ರೈತರ, ಹಾಗೂ ಕಾರ್ಮಿಕರ ಕುರಿತು ಹಲವಾರು, ಯೋಜನೆಗಳನ್ನು ಈ ನಾಡಿಗೆ ಕೊಟ್ಟಿದೆ, ಆದ್ದರಿಂದಲೇ ಇಂದಿನ ಬಿಜೆಪಿ 40% ಸರಕಾರವನ್ನು ಕಿತ್ತೊ ಗೆದು, ಈ ಬಾರಿ ಕಾಂಗ್ರೆಸ್ ಅನ್ನು ಅತ್ಯಂತ ಬಹುಮತದಿಂದ ಅಧಿಕಾರದ ಚುಕ್ಕಾಣೆ ಹಿಡಿಯುವಂತೆ ಮಾಡಿದ ಮತದಾರರಿಗೆ ಹಾರ್ದಿಕ ಅಭಿನಂದನೆಗಳು ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಲುಮತ ಸಮಾಜದ ಅಧ್ಯಕ್ಷ ಮಲ್ಲನಗೌಡ ಸುಂಕನೂರು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಡಿ.ಚಿಗರಿ, ತಾ.ಪಂ.ಮಾಜಿ ಸದಸ್ಯ ಕರಿಯಪ್ಪ ಹಾಲಾಪೂರ, ಶಿವಣ್ಣ ಉದ್ಬಾಳ, ರಮೇಶ್ ಕರಕುರಿ, ನಾಗಭೂಷಣ, ‌ಮಲ್ಲಯ್ಯ ಮುರಾರಿ, ರವಿ ಮಡಿವಾಳ, ಆನಂದ ವಿರಾಪೂರ, ಸುರೇಶ್ ಕೈಲವಾಡಗಿ, ವಿಜಯಕುಮಾರ್ ಹೂವಿನಭಾವಿ, ರಾಜಾ ನಧಾಪ್, ನಾಗರಾಜ ಕೌತಳ್, ನೂರು‌ಮಹ್ಮದ್, ಕಾಸಿಂ, ಹಾಗೂ ಇನ್ನಿತರ ಉಪಸ್ಥಿತಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ