Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತ ಸಮಾಲೋಚನಾ ಸಭೆ

ಸುದ್ದಿಮೂಲ ವಾರ್ತೆ

ತುಮಕೂರು, ಆ.1: ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪಿಯು ಕಾಲೇಜು, ಪ್ರಥಮ ದರ್ಜೆ ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಪೊಕ್ಸೊ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮಾಡಿಸುವ

ಕಾರ್ಯಕ್ರಮವನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಅವರು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ವಿವಿಧ ಇಲಾಖಾ ಅಧಿಕಾರಿಗಳೊಂದಿಗೆ ಮಕ್ಕಳ ರಕ್ಷಣಾ ವ್ಯವಸ್ಥೆ ಕುರಿತು ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೆಚ್‌ಐವಿ ಸೋಂಕಿತ ಮಕ್ಕಳಿಗೆ ವಿಶೇಷ ಪಾಲನಾ ಯೋಜನೆಯಡಿ ಮಾಸಿಕ ಒಂದು ಸಾವಿರದಂತೆ ಏಪ್ರಿಲ್ 2022ರಿಂದ ಮಾರ್ಚ್ 2023ರವರೆಗೆ 37.20ಲಕ್ಷ ಹಣವನ್ನು ಡಿ.ಬಿ.ಟಿ ಮೂಲಕ ಮಕ್ಕಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ ಎಂದು ತಿಳಿಸಿದರು.

ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿ ನಂತರ ಕುಟುಂಬಕ್ಕೆ ಸೇರ್ಪಡೆಯಾದ ಮಕ್ಕಳು, ಮಕ್ಕಳ ಪೋಷಕರು ಜೈಲಿನಲ್ಲಿದ್ದರೆ, ಅನಾಥ ಮಕ್ಕಳು, ಏಕಪೋಷಕ ಮಕ್ಕಳಿಗೆ ಮಿಷನ್ ವಾತ್ಸಲ್ಯ ಯೋಜನೆಯಡಿ 2022-23ನೇ ಸಾಲಿನಿಂದ ಆದ್ಯತೆ ಮೇರೆಗೆ ಮಾಸಿಕ ನಾಲ್ಕು ಸಾವಿರದಂತೆ ಡಿ.ಬಿ.ಟಿ ಮುಖಾಂತರ ಮಕ್ಕಳ ಬ್ಯಾಂಕ್ ಖಾತೆಗೆ ಪ್ರೋತ್ಸಾಹ ಧನ ಜಮೆ ಮಾಡಲಾಗುತ್ತದೆ ಎಂದರು.

ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ವಿಶೇಷ ಪಾಲನಾ ಯೋಜನೆಯಡಿ ಹೊಸದಾಗಿ 45 ಹಾಗೂ ಪ್ರಾಯೋಜಕತ್ವ ಕಾರ್ಯಕ್ರಮದಡಿ 266 ಮಕ್ಕಳನ್ನು ಗುರುತಿಸಲಾಗಿದೆ. ಎಲ್ಲಾ ನೋಂದಾಯಿತ ಮಕ್ಕಳ ಪಾಲನಾ ಸಂಸ್ಥೆಗಳಿಂದ ಬಿಡುಗಡೆಯಾದ 18ವರ್ಷ ಮೇಲ್ಪಟ್ಟ ಅರ್ಹ ಮಕ್ಕಳಿಗೆ ಆರ್ಥಿಕವಾಗಿ ಸ್ವಾವಲಂಬಿಗಳಾಗುವವರೆಗೆ ಅಥವಾ ಗರಿಷ್ಠ 3 ವರ್ಷಗಳ ಅವಧಿಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಪುನರ್ವಸತಿಗಾಗಿ ತಿಂಗಳಿಗೆ ಐದು ಸಾವಿರ ರೂ.ಗಳನ್ನ ಎಂದರು.

ಬಾಲನ್ಯಾಯ ಮಂಡಳಿಯಲ್ಲಿ ಜ. 2023 ರಿಂದ ಜೂ. 2023ರವರೆಗೆ 17

ಪೊಕ್ಸೊ ಪ್ರಕರಣಗಳು ದಾಖಲಾಗಿವೆ. ಜಿಲ್ಲೆಯಲ್ಲಿ 2023-24ನೇ ಸಾಲಿನಲ್ಲಿ ಬಾಲ್ಯವಿವಾಹ ನಿಷೇಧ ಕಾಯ್ದೆಯಡಿಯಲ್ಲಿ 23 ಪ್ರಕರಣಗಳು ದಾಖಲಾಗಿವೆ ಎಂದರು. ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ನಿಷೇಧ ಮಾಡುವುದರ ಕುರಿತು ಸುತ್ತೋಲೆ ಹೊರಡಿಸುಂತೆ ಡಿಡಿಪಿಐ ಅವರಿಗೆ ಸೂಚಿಸಿದರಲ್ಲದೆ, ಶಾಲಾ ಆವರಣ ಹಾಗೂ ವಸತಿ

ನಿಲಯಗಳ ಹತ್ತಿರ ಜಾಮರ್ ಅಳವಡಿಸುವಂತೆ ತಿಳಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ಕೆ.ಟಿ ತಿಪ್ಪೇಸ್ವಾಮಿ ಅವರು ಮಾತನಾಡಿ,

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಗಳಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098ನ್ನು ಪ್ರದರ್ಶಿಸಬೇಕು. ಸಾರಿಗೆ ಇಲಾಖೆಯ ನೌಕರರು ವಿದ್ಯಾರ್ಥಿ ಸ್ನೇಹಿಯಾಗಿ ಕೆಲಸ ಮಾಡಬೇಕೆಂದು ತಿಳಿಸಿದರು.

ಆರೋಗ್ಯ ಇಲಾಖೆಯು ನೀಡುವ ತಾಯಿ ಕಾರ್ಡ್ ಹಾಗೂ ಹೊರರ ಗಿಗಳ ಚೀಟಿಗಳಲ್ಲಿ ಕಡ್ಡಾಯವಾಗಿ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ ಎಂಬ ವಾಕ್ಯವನ್ನು ಮುದ್ರಿಸುವಂತೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್‌ಕುಮಾರ್

ಶಹಪೂರವಾಡ್, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ನೂರುನ್ನೀಸಾ,

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಶ್ರೀಧರ್,ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಅನುಷಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಪವಿತ್ರ, ಡಿಡಿಪಿಐ ನಂಜಯ್ಯ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ