Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಣ್ಣ ನೇಕಾರರಿಗೆ 10 ಹೆಚ್.ಪಿವರೆಗೆ ಉಚಿತ ವಿದ್ಯುತ್‌ಗೆ ಚಿಂತನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ಆ.25: ಸಣ್ಣ ನೇಕಾರರಿಗೆ 10 ಹೆಚ್.ಪಿ ವರೆಗೆ ಸಂಪೂರ್ಣ ಉಚಿತ ವಿದ್ಯುತ್ ನೀಡುವ ಕುರಿತಂತೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ 10 ಹೆಚ್‌ಪಿ ವರೆಗಿನ ವಿದ್ಯುತ್ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗ ಪೂರ್ವ ಘಟಕಗಳಿಗೆ ವಿದ್ಯುತ್ ಒದಗಿಸುವ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಬಗ್ಗೆ ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ನಿರ್ಧಾರ ಕೈಗೊಂಡರು.

10 ಹೆಚ್.ಪಿ ವರೆಗೂ ಉಚಿತ ವಿದ್ಯುತ್ ನೀಡಬೇಕು ಎನ್ನುವ ಬೇಡಿಕೆ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. 10 ಹೆಚ್ ಪಿ ಗಿಂತ ಹೆಚ್ಚಿನ ವಿದ್ಯುತ್ ಬಳಸುವ ಮಗ್ಗಗಳ ಬಗ್ಗೆಯೂ ಚರ್ಚಿಸಲಾಯಿತು. ಎರಡೂ ವಿಚಾರಗಳ ಬಗ್ಗೆ ಪರಿಶೀಲಿಸಿ ಸದ್ಯದಲ್ಲೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಹಿಂದೆ ನೇಕಾರರಿಗೆ ಉಚಿತ ವಿದ್ಯುತ್ ನೀಡುವ ಬಗ್ಗೆ ಭರವಸೆ ನೀಡಿದ್ದೆ. ಇದರಿಂದ ಸಣ್ಣ ನೇಕಾರರಿಗೆ ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಗೌರವ್ ಗುಪ್ತಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಜಯರಾಂ, ಜವಳಿ ಇಲಾಖೆ ಕಾರ್ಯದರ್ಶಿ ಪಿ.ಎಸ್.ಎನ್.ಕುಮಾರ್ ಉಪಸ್ಥಿತರಿದ್ದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ