Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗುರುಕುಲದಲ್ಲಿ ಸಂವಾದ ವಿದ್ಯಾರ್ಥಿಗಳು ದೇಶದ ಆಸ್ತಿ : ಆದಿಚುಂಚನಗಿರಿ ಶ್ರೀ

ಸುದ್ದಿಮೂಲ ವಾರ್ತೆ ಬಸವಕಲ್ಯಾಾಣ, ನ.29:
ವಿದ್ಯಾರ್ಥಿಗಳು ಕೇವಲ ಒಂದು ಮನೆ, ಪರಿವಾರಕ್ಕೆ ಸೀಮಿತ ಆಗಿರದೇ ಉತ್ತಮ ಶಿಕ್ಷಣ ಪಡೆದು ದೇಶಕ್ಕೆ ಆಸ್ತಿಯಾಗಬೇಕು ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.
ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಅನುಭವ ಮಂಟಪದಲ್ಲಿ ಶನಿವಾರ ಆಯೋಜಿಸಿದ್ದ ಪಿಯು ವಿದ್ಯಾರ್ಥಿಗಳ ಸಂವಾದ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮಲ್ಲಿನ ಖಿನ್ನತೆ, ಕೀಳರಿಮೆ ಬಿಟ್ಟು ಆತ್ಮವಿಶ್ವಾಸ ಬಿಟ್ಟು ಜೀವನದಲ್ಲಿ ಸಾಧಿಸುವ ಛಲ ಬೆಳೆಸಿಕೊಳ್ಳಬೇಕು. ಇಂದಿನ ಎಐ ತಂತ್ರಜ್ಞಾನ ಎಲ್ಲರ ನಿದ್ರೆಗೆಡಿಸಿದೆ. ಈ ಆಧುನಿಕ ತಂತ್ರಜ್ಞಾನ ಬಳಕೆಯಿಂದ ಲಕ್ಷಾಂತರ ನೌಕರರು ನಿರುದ್ಯೋಗಿಗಳಾಗುತ್ತಿದ್ದಾರೆ. ಆದರೂ ಯಾರು ಆತಂಕ ಪಡುವ ಅಗತ್ಯವಿಲ್ಲ.
ಪಿಯುಸಿಯಲ್ಲಿ ವಿದ್ಯಾರ್ಥಿಗಳು ಯಾವುದೇ ವಿಭಾಗ ಆಯ್ಕೆ ಮಾಡಿಕೊಂಡರೂ ಕೂಡ ಶ್ರದ್ಧೆ, ಭಕ್ತಿಯ ಅಧ್ಯಯನದ ಜತೆಗೆ ಹೊಸ ತಂತ್ರಜ್ಞಾನ, ಕೌಶಲ್ಯ ಮೈಗೂಡಿಸಿಕೊಂಡರೇ ಮುಂದೆ ಆಗಬಹುದಾದ ಆಂತಕವನ್ನು ದೂರ ಮಾಡಬಹುದಾಗಿದೆ ಎಂದು ತಿಳಿಸಿದರು.
ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ ಮಾತನಾಡಿದರು. ಅಭಿನವ ಸಿದ್ಧರೂಢ ಸ್ವಾಮೀಜಿ ನೇತೃತ್ವ ವಹಿಸಿದ್ದರು. ಈ ಸಂದರ್ಭದಲ್ಲಿ ಕೆಎಎಸ್ ಅಧಿಕಾರಿ ಪ್ರಭಾಕರ, ಕರ್ನಾಟಕ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಉಪಕುಲಪತಿ ವೀರಣ್ಣ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಬನ್ನಾಳೆ, ಎಂಜನಿಯರ್ ಗುಂಡಪ್ಪ ಬೆಲ್ಲೆ, ಪ್ರಾಚಾರ್ಯ ಬಸವರಾಜ ಮೊಳಕೀರೆ, ಉಪಪ್ರಾಚಾರ್ಯ ಸಿದ್ರಾಮ ಗೊಗ್ಗಾ ಸೇರಿದಂತೆ ಹಲವರು ಇದ್ದರು.

ಕೋಟ್
ಗಡಿಯಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಸ್ಥಾಪಿಸಿದ ವಿದ್ಯಾ ದೇಗುಲ ಹೆಮ್ಮರವಾಗಿ ಬೆಳೆಯುತ್ತಿರುವುದು ಸಂತಸ ತರಿಸಿದೆ. ಗುಣಮಟ್ಟದ ಶಿಕ್ಷಣ ಮತ್ತು ಸಂಸ್ಕಾರದ ಪರಿಣಾಮ ಪ್ರತಿವರ್ಷ ನೀಟ್-ಐಐಟಿಯಲ್ಲಿ ಈ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ರ‍್ಯಾಂಕ್ ಪಡೆದು ರಾಜ್ಯ, ರಾಷ್ಟç ಮಟ್ಟಕ್ಕೆ ಮಾದರಿಯಾಗುತ್ತಿದ್ದಾರೆ.
ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಆದಿಚುಂಚನಗಿರಿ ಮಠ ಬೆಂಗಳೂರು
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ