Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲಿಗೆ ಸಹಕಾರ





ಸುದ್ದಿಮೂಲ ವಾರ್ತೆ ,


ಕಲಬುರಗಿ, ಏ.5: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಗೊಬ್ಬರು(ಬಿ) ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷಾ ನಡೆಯುತ್ತಿದ್ದಾಗ ಸಾಮೂಹಿಕ ನಕಲಿಗೆ ಸಹಕರಿಸಿದ ಸಂಬಂಧ ಒಬ್ಬ ಮುಖ್ಯಶಿಕ್ಷಕ ಸೇರಿ 16 ಶಿಕ್ಷಕರನ್ನು ಅಮಾನತುಗೊಳಿಸಿ

ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಹಾಗೂ ಶಿಸ್ತು ಪ್ರಾಧಿಕಾರಿ ಆನಂದ ಪ್ರಕಾಶ ಮೀನಾ ಅವರು ಆದೇಶ ಹೊರಡಿಸಿದ್ದಾರೆ.


ಮುಖ್ಯಶಿಕ್ಷಕ ಗೊಲ್ಲಾಳಪ್ಪ ಗುರಪ್ಪ, ಶಿಕ್ಷಕರಾದ ಭೀಮಾಶಂಕರ ಮಡಿವಾಳ, ರವೀಂದ್ರ, ದೇವೀಂದ್ರಪ್ಪ ಯರಗಲ್, ಸವಿತಾಬಾಯಿ ಜಮಾದಾರ್, ಅನಿತಾ, ನಾಗಮ್ಮ, ರೇವಣಸಿದ್ದಪ್ಪ, ಪರವೀನ ಸುಲ್ತಾನ್, ಬಾಬು ಪವಾರ, ಕವಿತಾ ಡಿ., ಜಯಶ್ರೀ ಶೇರಿ, ವಿದ್ಯಾವತಿ, ಗಾಯತ್ರಿ ರಾಜೇಂದ್ರ ಬಿರಾದಾರ, ಮೀನಾಕ್ಷಿ ದುದನಿಕರ ಮತ್ತು ಅರುಣಕುಮಾರ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.


ಪರೀಕ್ಷಾ ಕೇಂದ್ರಗಳ ಭದ್ರತೆಯ ಪರಿಶೀಲನೆಗಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಅವರು ಸೋಮವಾರ ಗೊಬ್ಬರು(ಬಿ) ಪ್ರೌಢ ಶಾಲೆಗೆ ಭೇಟಿ ನೀಡಿದ್ದರು. ಕೇಂದ್ರದ ಆವರಣದಲ್ಲಿ ಸಾಮೂಹಿಕ ನಕಲಿಗೆ ಬಳಸಿದ್ದ ಮೈಕ್ರೊ ಝಿರಾಕ್ಸ್ ಪುಸ್ತಕ, ಚೀಟಿಗಳು ಬಿದ್ದಿದ್ದವು. ನಿಷೇಧಿತ ಪ್ರದೇಶದಲ್ಲಿ ಓಡಾಡಿದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದರು.


ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ, ಕಸ್ಟೋಡಿಯನ್, ಸ್ಥಾನಿಕ ಜಾಗೃತ ದಳ ಹಾಗೂ ಕೋಣೆಯ ಮೇಲ್ವಿಚಾರಕರು ಪರೀಕ್ಷೆಯ ಪಾವಿತ್ರೆ ಕಾಪಾಡುವಲ್ಲಿ ವಿಫಲವಾಗಿದ್ದಾಗಿ ಎಸ್‌ಪಿ ಅವರು ಶಾಲಾ ಇಲಾಖೆಯ ಆಯುಕ್ತರಿಗೆ ವರದಿ ಸಲ್ಲಿಸಿದ್ದರು. ಈ ವರದಿ ಆಧರಿಸಿ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಅಮಾನತು ಆದೇಶ ಹೊರಡಿಸಿದ್ದಾರೆ.







Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ