Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಭ್ರಷ್ಟ ಅಧಿಕಾರಿಗಳಿಗೆ ಕಾನೂನಿನ ರುಚಿ ತೋರಿಸಲಾಗಿದೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ. 20: ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲಾಗಿದೆ ಮತ್ತು ಭ್ರಷ್ಟ ಅಧಿಕಾರಿಗಳಿಗೂ ಕಾನೂನಿನ ರುಚಿ ತೋರಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆರು ತಿಂಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಇಲಾಖೆಯ ಕೆಲಸದ ಕಾರ್ಯವೈಖರಿಯನ್ನು ಬದಲಿಸಲು ಸಾಕಷ್ಟು ಶ್ರಮಿಸಲಾಗಿದೆ. ಜನರ ನೂರಾರು ಸಮಸ್ಯೆಗಳಿಗೆ ಶೀಘ್ರ ಸ್ಪಂದಿಸಿ ಬಗೆಹರಿಸಲಾಗಿದೆ. ಜನಸ್ನೇಯಾಗಿ ಕಾರ್ಯನಿರ್ವಸುವಂತೆ ಅಧಿಕಾರಿಗಳಿಗೆ ಎಚ್ಚರಿಕೆ ರವಾನಿಸಲಾಗಿದೆ ಎಂದು ಹೇಳಿದ್ದಾರೆ.

ಕಳೆದ ಆರು ತಿಂಗಳಲ್ಲಿ ಬೀದರ್, ದಕ್ಷಿಣ ಕನ್ನಡ, ಶಿವಮೊಗ್ಗ, ತುಮಕೂರು, ಧಾರವಾಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಚಾಮರಾಜನಗರ, ಯಾದಗಿರಿ, ಹಾವೇರಿ, ದಾವಣಗೆರೆ, ಬಾಗಲಕೋಟೆ, ಕೊಪ್ಪಳ, ಗದಗ, ರಾಮನಗರ, ಹಾಸನ ಸೇರಿದಂತೆ 16 ಜಿಲ್ಲೆಗಳಿಗೆ ಪ್ರವಾಸ ಕೈಗೊಂಡು ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿದೆ.

ಅಲ್ಲದೆ, ಬೆಳಗಾವಿ, ಮೈಸೂರು, ಕಲಬುರಗಿ ಹಾಗೂ ಬೆಂಗಳೂರು ವಿಭಾಗಾವಾರು ಪ್ರಗತಿ ಪರಿಶೀಲನೆ ಮಾಡಿ ಅಧಿಕಾರಿಗಳಿಗೆ ಹಲವಾರು ಸಲಹೆ ಸೂಚನೆಗಳನ್ನು ನೀಡಲಾಗಿದೆ. ಇಲಾಖೆಯ ಕೆಲಸಗಳು ಜನರಿಗೆ ಮತ್ತಷ್ಟು ಹತ್ತಿರವಾಗಲು ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳ ಜೊತೆಗೆ ಚರ್ಚಿಸಲಾಗಿದೆ. ಪರಿಣಾಮ ಜನರ ದಶಕಗಳ ಹಲವಾರು ಸಮಸ್ಯೆಗಳಿಗೆ ಪರಿಹಾರ ದೊರೆತಿದೆ ಎಂದು ಹೇಳಿದ್ದಾರೆ.

ಬಗರ್ ಹುಕುಂ ಅರ್ಜಿಗಳ ವಿಲೇವಾರಿಗೆ ಕ್ರಮ, ಕಂದಾಯ ಗ್ರಾಮಗಳ ಶೀಘ್ರ ಘೋಷಣೆ, ರೈತರಿಗೆ ಬರ ಪರಿಹಾರ ಮತ್ತು ಅಗತ್ಯ ಸೇವೆಗಳನ್ನು ನೀಡುವ ಹಾಗೂ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಅಧಿಕಾರಿಗಳಿಗೆ ಶೇಷ ಸೂಚನೆಗಳನ್ನು ನೀಡಲಾಗಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ 5 ವರ್ಷಕ್ಕೂ ಹಳೆಯ ಸಾವಿರಾರು ತಕರಾರು ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡುವ ಮೂಲಕ ಜನರಿಗೆ ನೆಮ್ಮದಿ ನೀಡಲಾಗಿದೆ ಎಂದಿದ್ದಾರೆ.

ಕಳೆದ ಆರು ತಿಂಗಳ ಹಿಂದೆ ಉಪ ಭಾಗಾಧಿಕಾರಿ (ಎಸಿ ಕೋರ್ಟ್) ನ್ಯಾಯಾಲಯದಲ್ಲೇ ರಾಜ್ಯಾದ್ಯಂತ ಸುಮಾರು 62,000 ತಕರಾರು ಅರ್ಜಿಗಳು ವಿಲೇವಾರಿ ಆಗದೆ ಬಾಕಿ ಉಳಿದಿದ್ದವು. ಆದರೆ, ನಾನು ಇಲಾಖೆಯ ಜವಾಬ್ದಾರಿ ವಸುತ್ತಿದ್ದಂತೆ ಈ ಎಲ್ಲಾ ಅರ್ಜಿಗಳನ್ನು ಶೀಘ್ರ ವಿಲೇವಾರಿಗೆ ಸೂಚಿಸಿದ್ದರ ಪರಿಣಾಮ ಇಂದು ಸುಮಾರು 30,000 ಅರ್ಜಿಗಳನ್ನು ಕೇವಲ ಆರು ತಿಂಗಳಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಇನ್ನೂ ತಹಶೀಲ್ದಾರ್ ನ್ಯಾಯಾಲಯದಲ್ಲಿ ರಾಜ್ಯಾದ್ಯಂತ ಬಾಕಿ ಇದ್ದ ಸುಮಾರು ಶೇ.60 ರಷ್ಟು ತಕರಾರು ಅರ್ಜಿಗಳನ್ನು ಲೇವಾರಿ ಮಾಡಲಾಗಿದೆ. ಈ ಮೂಲಕ ರೈತರ ದಶಕಗಳ ಸಮಸ್ಯೆಗೆ ಪರಿಹಾರ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಮಾಸಿಕ ಸಭೆ:

ಕುಡಿಯುವ ನೀರಿನ ಪೂರೈಕೆಗೆ ಜಿಲ್ಲಾಡಳಿತ ತೆಗೆದುಕೊಂಡಿರುವ ಕ್ರಮಗಳೇನು? ಎಂಬ ವಿಚಾರದ ಕುರಿತು ತಿಳಿದುಕೊಳ್ಳುವ ಸಲುವಾಗಿಯೇ ಕಳೆದ ಆರು ತಿಂಗಳಿಂದ ಪ್ರತೀ ತಿಂಗಳು ಜಿಲ್ಲಾಧಿಕಾರಿಗಳ ಸಭೆ ಕರೆದು ಪರಿಶೀಲಿಸಲಾಗಿದೆ. ಇಲಾಖೆಯಲ್ಲಿ ಅಕ್ರಮ ಎಸಗಿ, ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸಿಲುಕಿಬಿದ್ದೂ ಸಹ ಕಳೆದ ಐದು ವರ್ಷಗಳಿಂದ ಶಿಕ್ಷೆಗೆ ಒಳಗಾಗದಿದ್ದ, ಸುಮಾರು 350ಕ್ಕೂ ಅಕ ಭ್ರಷ್ಟ ಅಧಿಕಾರಿಗಳ ಫೈಲ್‍ಗಳನ್ನು ಕಳೆದ ಆರು ತಿಂಗಳಲ್ಲಿ ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈ ಪಟ್ಟಿಯಲ್ಲಿ ಹಲವು ತಹಶೀಲ್ದಾರರು, ಉಪ ವಿಭಾಗಾಧಿಕಾರಿಗಳು, ಉಪ ನೋಂದಣಾಧಿಕಾರಿಗಳು, ಗ್ರಾಮ ಆಡಳಿತ ಅಧಿಕಾರಿಗಳು ಇದ್ದು, ಹಲವರಿಗೆ ಕಡ್ಡಾಯ ನಿವೃತ್ತಿ, ಪಿಂಚಣಿಯಲ್ಲಿ ಕಡಿತ ಸೇರಿದಂತೆ ಹಲವು ಶಿಕ್ಷೆಗಳಿಗೆ ಗುರಿಪಡಿಸಲಾಗಿದೆ. ಅಲ್ಲದೆ, ಇನ್ನುಳಿದ ಪ್ರಕರಣಗಳನ್ನೂ ಸಹ ಶೀಘ್ರದಲ್ಲಿ ವಿಲೇವಾರಿ ಮಾಡಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಸರ್ಕಾರಿ ಆಸ್ತಿ ಖಾಸಗಿಯವರ-ಭೂಗಳ್ಳರ ಪಾಲಾಗಿದೆ. ಹೀಗಾಗಿ ಈ ಭೂಮಿಯನ್ನು ಮರಳಿ ಸರ್ಕಾರದ ವಶಕ್ಕೆ ಪಡೆಯುವ ಸಲುವಾಗಿ ಜಿಲ್ಲಾಕಾರಿಗಳು ಹಾಗೂ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿದೆ. ಈ ತಂಡಕ್ಕೆ ಪ್ರತೀ ವಾರಾಂತ್ಯದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಗೆ ಸೂಚಿಸಲಾಗಿದೆ.

ಈ ತಂಡ ಈಗಾಗಲೇ ಬೆಂಗಳೂರಿನಲ್ಲಿ ನೂರಾರು ಕೋಟಿ ಮೌಲ್ಯದ ಕನಿಷ್ಟ 60 ಎಕರೆಗೂ ಅಧಿಕ ಸರ್ಕಾರಿ ಭೂಮಿಯಲ್ಲಿ ಖಾಸಗಿ ಒತ್ತುವರಿಯನ್ನು ತೆರವುಗೊಳಿಸಿದೆ. ಈ ಕಾರ್ಯಾಚರಣೆ ಮುಂದಿನ ದಿನಗಳಲ್ಲೂ ಮುಂದುವರೆಯಲಿದ್ದು, ಸರ್ಕಾರಿ ಭೂಮಿಗಳನ್ನು ಗುರುತಿಸಿ ರಕ್ಷಿಸುವ ಅಕಾರಿಗಳ ಬೀಟ್ ವ್ಯವಸ್ಥೆಗೂ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಹೇಳಿದ್ದಾರೆ.

 

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ