Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಣ್ಣಿನ ಗಣಪನ ಬಗ್ಗೆ ಶಾಲೆ,ಕಾಲೇಜುಗಳಲ್ಲಿ ಜಾಗೃತಿ ಮೂಡಿಸಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.15: ಪರಿಸರದಿಂದ ಹುಟ್ಟಿದ ಗಣಪನಿಗೆ ಶ್ರದ್ಧಾ, ಭಕ್ತಿ ಸಮರ್ಪಿಸಲು, ಪರಿಸರ ಸ್ನೇಹಿಯಾದ ಗಣಪತಿ ಮೂರ್ತಿಗಳ ಪೂಜೆಯೇ ಸೂಕ್ತ ಪದ್ಧತಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ವಿಧಾನಸೌಧದ ಸಮಿತಿ ಸಭಾಂಗಣದಲ್ಲಿಂದು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅವರ ಜೊತೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವರ್ಚುವಲ್ ಸಭೆ ನಡೆಸಿದ ಸಚಿವರು, ನಮ್ಮ ಗಣೇಶ ಚತುರ್ಥಿಯ ವ್ರತಕಥೆಯಲ್ಲಿ ಮಣ್ಣಿನ ಗಣೇಶನನ್ನು ಪೂಜಿಸಬೇಕು ನಂತರ ನೀರಿನಲ್ಲಿ ವಿಸರ್ಜಿಸಬೇಕು ಎಂಬ ಉಲ್ಲೇಖವಿದೆ. ಆದರೆ ಇಂದು ಪಿಓಪಿ ಗಣೇಶ ಮೂರ್ತಿಗಳನ್ನು ಪೂಜಿಸಿ, ನೀರಿನಲ್ಲಿ ವಿಸರ್ಜನೆ ಮಾಡಿದರೆ, ಅದು ನೀರಲ್ಲಿ ಕರಗದೆ ವಿರೂಪವಾಗುತ್ತದೆ ಜೊತೆಗೆ ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತದೆ, ಇದು ಭಗವಂತನಿಗೆ ನಾವು ಮಾಡಿದ ಅಪಚಾರವೂ ಆಗುತ್ತದೆ ಎಂದು ಹೇಳಿದರು.

ಪರಿಸರ, ಪ್ರಕೃತಿ ಉಳಿಸುವುದು ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದ್ದು, ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸಬೇಕು. ತಮ್ಮ ಮನೆಗಳಲ್ಲಿ ಪರಿಸರ ಸ್ನೇಹಿ ಗಣಪನನ್ನು ಪೂಜಿಸುವಂತೆ ಪಾಲಕರನ್ನು ಒತ್ತಾಯಿಸುವಂತೆ ಮಕ್ಕಳನ್ನು ಪ್ರೇರೇಪಿಸಬೇಕು ಈ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಕ್ರಮ ವಹಿಸಿ ಎಂದು ಸಲಹೆ ಮಾಡಿದರು.

ಕರಾವಳಿ ಜನತೆಗೆ ಅಭಿನಂದನೆ:

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶೇ.90ಕ್ಕೂ ಹೆಚ್ಚು ಜನರು ಪರಿಸರ ಸ್ನೇಹಿಯಾದ ಮಣ್ಣಿನ ಗಣೇಶ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ, ಪೂಜಿಸುತ್ತಿದ್ದು, ಆ ಜಿಲ್ಲೆಗಳ ಜನತೆಗೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಇತರ ಜಿಲ್ಲೆಗಳ ಜನರೂ ಇದೇ ಪದ್ಧತಿ ಅನುಸರಿಸುವಂತೆ ಮನವಿ ಮಾಡುತ್ತೇನೆ ಎಂದರು.

ಸಮಿತಿ ರಚಿಸಲು ಸಲಹೆ:

ಪರಿಸರ ಪ್ರಕೃತಿ ಉಳಿಸಲು, ಪರಿಸರಕ್ಕೆ ಮಾರಕವಾದ ಪ್ಲಾಸ್ಟಿಕ್, ಪಿಓಪಿ ಬಳಕೆ ನಿಯಂತ್ರಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಸರ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಪರಸ್ಪರ ಸಹಕಾರದಿಂದ ಕಾರ್ಯೋನ್ಮುಖವಾಗುವಂತೆ ಮತ್ತು ತ್ರೈಮಾಸಿಕ ಕೆ.ಡಿ.ಪಿ. ಸಭೆಯಲ್ಲಿ ಇದರ ಬಗ್ಗೆ ಕಾಲಕಾಲಕ್ಕೆ ಪ್ರಗತಿ ಪರಿಶೀಲನೆ ಮಾಡುವಂತೆಯೂ ಸಲಹೆ ಮಾಡಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ