Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಲ್ಲಿ 800 ಕೋಟಿ ಹೂಡಲು ಕ್ರಿಪ್ಟನ್ ಸೊಲ್ಯೂಷನ್ಸ್ ಆಸಕ್ತಿ

ಸುದ್ದಿಮೂಲ ವಾರ್ತೆ

ಟೆಕ್ಸಾಸ್, ಅ.3: ಅಮೆರಿಕದ ಮುಂಚೂಣಿ ಕಂಪನಿಯಾದ ಕ್ರಿಪ್ಟನ್ ಸೊಲ್ಯೂಷನ್ಸ್ ಬೆಂಗಳೂರಿನ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿ ನೂತನ ಪ್ರಿಂಟೆಡ್ ಸರ್ಕ್ಯೂಟ್ ಬೋರ್ಡ್ (ಪಿಸಿಬಿ) ಉತ್ಪಾದನಾ ಘಟಕ ಆರಂಭಿಸಲು 100 ಮಿಲಿಯನ್ ಡಾಲರ್ (800 ಕೋಟಿ ರೂ.) ಬಂಡವಾಳ ಹೂಡಲು ಮುಂದೆ ಬಂದಿದೆ. ಜತೆಗೆ ಈ ಕಂಪನಿಯು ಮೈಸೂರು ಮತ್ತು ಚಾಮರಾಜನಗರದಲ್ಲಿ ಹೂಡಿಕೆಗೆ ಇರುವ ಅವಕಾಶಗಳನ್ನು ಪರಿಶೀಲಿಸಲು ಒಪ್ಪಿಕೊಂಡಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ನೀಡಿರುವ ಅವರು, `ಕಂಪನಿಯ ಅಧ್ಯಕ್ಷ ಮತ್ತು ಸಿಇಒ ಸುರೇಶ್ ಪಟೇಲ್ ಮತ್ತು ಇತರ ಉನ್ನತಾಧಿಕಾರಿಗಳೊಂದಿಗೆ ಈ ಸಂಬಂಧ ಸೋಮವಾರ ಚರ್ಚಿಸಲಾಗಿದೆ. ಅದು ಸ್ಥಳೀಯ ಸಹಭಾಗಿತ್ವಕ್ಕೆ ಆಸಕ್ತಿ ಹೊಂದಿದ್ದು, ಕೌಶಲ್ಯಪೂರ್ಣ ಮಾನವ ಸಂಪನ್ಮೂಲದ ಖಾತ್ರಿಯನ್ನು ನಮ್ಮಿಂದ ಬಯಸಿದೆ’ ಎಂದಿದ್ದಾರೆ.

ಕಂಪನಿಯು ಟೆಕ್ಸಾಸ್ ನಲ್ಲಿ ಹೊಂದಿರುವ 40 ಸಾವಿರ ಚದರ ಮೀಟರ್ ವಿಸ್ತೀರ್ಣದ ಉತ್ಪಾದನಾ ಘಟಕಕ್ಕೂ ಈ ಸಂದರ್ಭದಲ್ಲಿ ಭೇಟಿ ನೀಡಿದ್ದು, ಅಲ್ಲಿರುವ ಸೌಲಭ್ಯಗಳನ್ನು ವೀಕ್ಷಿಸಲಾಗಿದೆ. ರಾಜ್ಯದಲ್ಲಿ ಹೂಡಿಕೆ ಮಾಡಲು ಮುಂದೆಬಂದರೆ, ಅಗತ್ಯ ಸೌಲಭ್ಯಗಳನ್ನು ತ್ವರಿತ ಗತಿಯಲ್ಲಿ ಒದಗಿಸಲಾಗುವುದು. ಈ ಸಂಬಂಧದ ಪ್ರಾಥಮಿಕ ಚರ್ಚೆ ಈಗಾಗಲೇ ಮುಗಿದಿದೆ ಎಂದು ಅವರು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಸೆಮಿಕಂಡಕ್ಟರ್ ಕ್ಷೇತ್ರದ ದೈತ್ಯ ಕಂಪನಿ ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಜತೆಗೂ ಮಾತುಕತೆ ನಡೆಸಲಾಗಿದೆ. ಅದು ಬೆಂಗಳೂರಿನಲ್ಲಿರುವ ತನ್ನ ಆರ್ ಅಂಡ್ ಡಿ ಕೇಂದ್ರದ ಚಟುವಟಿಕೆಗಳನ್ನು ವಿಸ್ತರಿಸುವ ಬದ್ಧತೆಯನ್ನು ತೋರಿದೆ. ಅಮೆರಿಕದ ಆಚೆಗೆ ಕಂಪನಿಯು ಹೊಂದಿರುವ ಅತಿದೊಡ್ಡ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮಾತುಕತೆಯಲ್ಲಿ ಕ್ರಿಪ್ಟನ್ ಕಂಪನಿಯ ಪರವಾಗಿ ಸಿಒಒ ದೀಪಕ್ ಪಟೇಲ್, ಸಿಎಂಒ ಮಹೇಶ್ ಪಟೇಲ್, ಉಪಾಧ್ಯಕ್ಷ ಮುಕೇಶ್ ಪಟೇಲ್, ಆನಂದ್ ಪಟೇಲ್, ಹಿತೇಶ್ ಭಕ್ತಾ, ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪನಿಯ ಪರವಾಗಿ ಜನರಲ್ ಮ್ಯಾನೇಜರ್ ಅಮಿಚಾಯ್ ರೋನ್, ಉಪಾಧ್ಯಕ್ಷ ಸ್ಟೀವ್ ಬೋನರ್, ಇಆರ್ ಪಿಎಲ್ ಪರವಾಗಿ ಕಣ್ಣನ್ ಶ್ರೀನಿವಾಸನ್ ಭಾಗವಹಿಸಿದ್ದರು.

ರಾಜ್ಯ ಸರಕಾರದ ನಿಯೋಗದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್ ಸೆಲ್ವಕುಮಾರ್, ಐಟಿ ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ