Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿಲಿಂಡರ್ ಸ್ಫೋಟ : ಏಳು ಜನಕ್ಕೆ ಗಂಭೀರ ಗಾಯ

ಸುದ್ದಿಮೂಲ ವಾರ್ತೆ

ಆನೇಕಲ್,ನ.22: ಸಿಲಿಂಡರ್ ಸೋರಿಕೆಯಿಂದ ಸ್ಪೋಟಗೊಂಡು ಪರಿಣಾಮ ಏಳು ಜನಕ್ಕೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ವೀವರ್ಸ್ ಕಾಲೋನಿಯ ಮಾರುತಿ ಬಡಾವಣೆಯಲ್ಲಿ ನಡೆದಿದೆ.

ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್(32) ನಾಜಿಯಾ(22) ಇರ್ಫಾನ್ (21)ಗುಲಾಬ್(18) ಶಹಜಾದ್(9) ಗಾಯಗೊಂಡವರು.

ಇಲ್ಲಿನ ವೀವರ್ಸ್ ಕಾಲೋನಿಯ ಮಾರುತಿ ಬಡಾವಣೆಯಲ್ಲಿ ಉತ್ತರ ಪ್ರದೇಶದ ಬನಾರಸ್ ಮೂಲದ ಜಮಾಲ್ ನಾಜಿಯಾ‌ ಸೇರಿದಂತೆ ಎರಡು ಕುಟುಂಬಗಳು ಸುಮಾರು ಎಂಟು ತಿಂಗಳ ಹಿಂದೆ ಬಂದು ಇಲ್ಲಿ ನೆಲೆಸಿದ್ರು ಈ ಮನೆಯಲ್ಲಿ ಏಳು ಜನ ವಾಸವಾಗಿದ್ದರು. ಜೀವನಕ್ಕಾಗಿ ಮಗ್ಗದ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು.

ಮನೆ‌ಮಾಲಿಕ ಮಾರ್ಟಿನ್ ಎಂಬುವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಎಂದಿನಂತೆ ಕೆಲಸ ಮುಗಿಸಿ ರಾತ್ರಿ ಮಲಗಿದ್ದರು. ಊಟ ತಯಾರು ಮಾಡಲು ಬೆಳಗಿನ ಜಾವ ಐದು ಮೂವತ್ತರ ಹೊತ್ತಿಗೆ ಲೈಟ್ ಸ್ವಿಚ್ ಆನ್ ಮಾಡಿದಾಗ ಸಿಲಿಂಡರ್ ಸೋರಿಕೆ ಇಂದಾಗಿ ಸ್ಪೋಟಗೊಂಡಿದೆ.

ಸ್ಪೋಟದ ಪರಿಣಾಮ ಮನೆ ಕಿಟಕಿ ಬಾಗಲು ಸೇರಿದಂತೆ ಅನೇಕ ವಸ್ತುಗಳು ಚಿದ್ರ ಚಿದ್ರ ಆಗಿದೆ. ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಇನ್ನು ಗಂಭೀರ ಗಾಯಗಳಾಗಿದ್ದವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಇನ್ನು ಗಾಯಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆಗೆ ಗ್ಯಾಸ್ ಸೋರಿಕೆಯಿಂದಾಗಿ ಈಗ ಘಟನೆ ನಡೆದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನು ಈ ಸಂಬಂಧ ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ