Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ದಕ್ಷಿಣಾಮೂರ್ತಿ ಸ್ತುತಿ" ಧ್ವನಿ ಮುದ್ರಿಕೆ ಪ್ರಪ್ರಥಮ ಬಾರಿಗೆ ಕನ್ನಡ ಭಾಷೆಯಲ್ಲಿ ಲೋಕಾರ್ಪಣೆ

ಬೆಂಗಳೂರು, ಜು, 3; ಗುರುಪೂರ್ಣಿಮೆಂದು ಗುರು "ದಕ್ಷಿಣಾಮೂರ್ತಿ ಸ್ತುತಿ" ಧ್ವನಿ ಸಾಂದ್ರಿಕೆ ಲೋಕಾರ್ಪಣೆ ಮಾಡಲಾಯಿತು. ಶಿವನ ಅವತಾರವಾದ ಗುರು ದಕ್ಷಿಣಾಮೂರ್ತಿಯು ಜ್ಞಾನದ ಮೂಲಕ ಇಡೀ ವಿಶ್ವವಕ್ಕೇ ಮಾರ್ಗದರ್ಶನ ಮಾಡುವ ಆದಿಗುರುವಾಗಿದ್ದು, ಗುರು ಆರಾಧಕರಾದ ಡಾ.ಬಿ.ಎಂ.ಉಮೇಶ್ ಕುಮಾರ್ ಅವರು ಕನ್ನಡದಲ್ಲಿ ಪ್ರಪ್ರಥಮಬಾರಿಗೆ ಶ್ರೀ ಗುರು ದಕ್ಷಿಣಾಮೂರ್ತಿಯುನ್ನು ಸ್ತುತಿಸುವ ಧ್ವನಿಮುದ್ರಿಕೆಯನ್ನು ಹೊರತಂದಿದ್ದಾರೆ.

ಬೆಂಗಳೂರಿನ ಶ್ರೀ ಗವಿಗಂಗಾಧರೇಶ್ವರ ದೇವಸ್ಥಾನದಲ್ಲಿ ಶ್ರೀ ದಕ್ಷಿಣಾಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ಧ್ವನಿಮುದ್ರಿಕೆ ಬಿಡುಗಡೆ ಮಾಡಲಾಗಿದ್ದು, “ದಕ್ಷಿಣಾಮೂರ್ತಿ ಸ್ತುತಿ” ಗೀತೆಗಳು ಇದೀಗ ಯುಟ್ಯೂಬ್ ನಲ್ಲಿ ಲಭ್ಯವಿದೆ.

ಭಕ್ತಿಗೀತೆಗಳು, ಸ್ತೋತ್ರಗಳು, ದಕ್ಷಿಣಾಮೂರ್ತಿ ಮೂಲಮಂತ್ರ, ಅಷ್ಟೋತ್ತರ ನಾಮಾವಳಿಗಳನ್ನು ಇದು ಒಳಗೊಂಡಿದೆ. ಖ್ಯಾತ ಗಾಯಕರಾದ ರಾಜೇಶ್ ಕೃಷ್ಣನ್, ಹೇಮಂತ್, ಅನುರಾಧಾ ಭಟ್, ನವೀನ್ ಸಜ್ಜು, ಬದರಿ ಪ್ರಸಾದ್, ಅನೂಪ್ ಚಂದ್ರ ಹಾಗೂ ಅನುಪಮ ಅವರ ಧ್ವನಿ ಇದ್ದು, ಜೀವಿತ್ ಕೃಪಾಕರ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಶ್ರೀ ಗವಿಗಂಗಾಧರೇಶ್ವರ ದೇವಸ್ಥಾನದ ಅರ್ಚಕರಾದ ಶ್ರೀಕಂಠ ದೀಕ್ಷಿತ್, ಬರಹಗಾರರಾದ ವಿನಯ್ ಭಟ್, ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ