Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರಿನಲ್ಲಿ ಹಗಲು ದರೋಡೆ, ಬ್ಯಾಾಂಕುಗಳಲ್ಲಿ ಸುರಕ್ಷತೆ ಇಲ್ಲ ಕಾನೂನು ಸುವ್ಯವಸ್ಥೆೆ ಸತ್ತು ಹೋಗಿದೆ: ಅಶೋಕ್

ಸುದ್ದಿಮೂಲ ವಾರ್ತೆ ಬೆಂಗಳೂರು, ನ.20:
ಪೊಲೀಸರ ಬಗ್ಗೆೆ ದರೋಡೆಕೋರರಿಗೆ, ಕಳ್ಳರಿಗೆ ಭಯವಿಲ್ಲವಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆೆ ಸತ್ತುಹೋಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದರು.
ವಿಧಾನಸೌಧದ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹಗಲಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ಕೇವಲ 7 ನಿಮಿಷದಲ್ಲಿ 7 ಕೋಟಿ ರೂ. ದರೋಡೆಯಾಗಿದ್ದು, ಜನರು ಬ್ಯಾಾಂಕ್‌ಗೆ ಹೋಗಲು ಭಯಪಡುತ್ತಿಿದ್ದಾರೆ ಎಂದು ಹೇಳಿದರು.
ಬೆಂಗಳೂರಿನ ಬ್ಯಾಾಂಕುಗಳು ಎಷ್ಟು ಸುರಕ್ಷಿತ ಎಂಬ ಆತಂಕ ಜನರಲ್ಲಿ ಮನೆ ಮಾಡಿದೆ. ಹಾಡುಹಗಲೇ ದುಷ್ಕರ್ಮಿಗಳು ರಾಬರಿ ನಡೆಸಿ ಪರಾರಿ ಆಗುತ್ತಾಾರೆ ಎಂದರೆ ಪರಿಸ್ಥಿಿತಿ ಯಾವ ಸ್ಥಿಿತಿ ತಲುಪಿದೆ ಎಂಬುದು ಇದರಿಂದ ಗೊತ್ತಾಾಗುತ್ತದೆ ಎಂದರು.
ಆರ್‌ಸಿಬಿ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ, ಧರ್ಮಸ್ಥಳ ಘಟನೆ ಹೀಗೆ ಅನೇಕ ಪ್ರಕರಣಗಳಲ್ಲಿ ಪೊಲೀಸ್ ಇಲಾಖೆ ವಿಲವಾಗಿದೆ. ಅಧಿಕಾರಕ್ಕಾಾಗಿ ಕಿತ್ತಾಾಡುತ್ತಿಿರುವ ಕಾಂಗ್ರೆೆಸ್ ನಾಯಕರು ದೆಹಲಿಗೆ ಹೋಗಿರುವುದರಿಂದ ಪೊಲೀಸ್ ಇಲಾಖೆಯ ಮೇಲೆ ಯಾರಿಗೂ ನಿಯಂತ್ರಣವಿಲ್ಲದಂತಾಗಿದೆ. ಪ್ರತಿಯೊಂದು ಇಲಾಖೆಯಲ್ಲಿ ಕಮಿಶನ್ ವ್ಯವಸ್ಥೆೆ ಇರುವುದರಿಂದ ಎಲ್ಲೂ ಸಾರ್ವಜನಿಕರ ಕೆಲಸಗಳು ನಡೆಯುತ್ತಿಿಲ್ಲ ಎಂದು ಆರೋಪಿಸಿದರು.
ಕಾಂಗ್ರೆೆಸ್ ನಾಯಕರು ವಚನಭ್ರಷ್ಟರಾಗಿದ್ದಾರೆ. ಸಿದ್ದರಾಮಯ್ಯ ಓಸಿ ಮುಖ್ಯಮಂತ್ರಿಿ ಎಂದು ಡಿ.ಕೆ.ಶಿವಕುಮಾರ್ ಪರೋಕ್ಷವಾಗಿ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾಾನಕ್ಕೆೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ. ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಡಲ್ಲ ಎಂದು ದಿಟ್ಟತನದಿಂದ ಹೇಳಿದ್ದಾರೆ. ಅಗತ್ಯ ಇಲ್ಲದೆಯೇ ನಾನೇ ಸಿಎಂ ಎಂದು ಪದೇ ಪದೇ ಹೇಳುತ್ತಿಿದ್ದಾರೆ. ಇನ್ನು ಒಂದು ತಿಂಗಳೊಳಗೆ ಈ ಪ್ರಹಸನದ ಸ್ಪಷ್ಟ ಚಿತ್ರಣ ಗೊತ್ತಾಾಗಲಿದೆ ಎಂದರು.
ಆರ್‌ಸಿಬಿ ಕಾಲ್ತುಳಿತ ಘಟನೆ ವರದಿಯಲ್ಲಿ ಯಾವುದೇ ಹುರುಳಿಲ್ಲ. 11 ಮಂದಿ ಅಮಾಯಕರ ಸಾವಿಗೆ ಸರ್ಕಾರ ಕಾರಣ. ಘಟನೆಯಿಂದಾಗಿ ಯಾವುದೇ ಕ್ರಿಿಕೆಟ್ ಪಂದ್ಯಗಳು ಇಲ್ಲಿ ನಡೆಯುತ್ತಿಿಲ್ಲ. ಆರ್‌ಸಿಬಿ ಹಾಗೂ ಕೆಎಸ್‌ಸಿಎ ಮೇಲೆ ಗೂಬೆ ಕೂರಿಸಲು ತನಿಖಾ ವರದಿ ಸಿದ್ಧಪಡಿಸಲಾಗಿದೆ ಎಂದರು.
ತನಿಖೆ ಸರಿಯಾಗಿ ನಡೆದಿಲ್ಲ
ಧರ್ಮಸ್ಥಳ ಪ್ರಕರಣ ನಗರ ನಕ್ಸಲರು ಮಾಡಿರುವ ದೊಡ್ಡ ನಾಟಕ. ತಿಮರೋಡಿ ಗ್ಯಾಾಂಗ್ ವಿರುದ್ಧ ಸರ್ಕಾರ ಕ್ರಮವಹಿಸಿಲ್ಲ. ಸರ್ಕಾರದ ಪರ ವಕೀಲರು ಸರಿಯಾಗಿ ವಾದ ಮಂಡಿಸಿಲ್ಲ. ಇದರ ತನಿಖೆ ಕೂಡ ಸರಿಯಾಗಿ ನಡೆದಿಲ್ಲ. ಕ್ಷೇತ್ರದ ಹೆಸರು ಕೆಡಿಸಿದವರ ವಿರುದ್ಧ ಯಾವುದೇ ಕ್ರಮವಾಗಿಲ್ಲ ಎಂದು ಆಕ್ರೋೋಶ ವ್ಯಕ್ತಪಡಿಸಿದರು.
ಶಾಲೆಗಳಲ್ಲಿ ಅಭಿವೃದ್ಧಿಿ ಚಟುವಟಿಕೆಗಳು ನಡೆಯುತ್ತಿಿಲ್ಲ. ಮೂಲ ಸೌಲಭ್ಯಗಳ ಕೊರತೆ ಇದೆ, ಕೊಠಡಿಗಳಿಲ್ಲ, ಶಿಕ್ಷಕರ ನೇಮಕವಾಗಿಲ್ಲ. ಇಂತಹ ಸ್ಥಿಿತಿಯಲ್ಲಿ ಶಾಲೆಗಳನ್ನು ಅಭಿವೃದ್ಧಿಿಯತ್ತ ಕೊಂಡೊಯ್ಯುವ ಬದಲು ಉತ್ತೀರ್ಣದ ಗರಿಷ್ಠ ಅಂಕವನ್ನು ಇಳಿಸಲಾಗಿದೆ. ಈ ಮೂಲಕ ಹೆಚ್ಚು ವಿದ್ಯಾಾರ್ಥಿಗಳು ಉತ್ತೀರ್ಣರೆಂದು ತೋರಿಸಲಾಗುತ್ತದೆ. ಇದರಿಂದಾಗಿ ವಿದ್ಯಾಾರ್ಥಿಗಳಿಗೆ ಒಳಿತಾಗುವುದಿಲ್ಲ. ಈ ಕ್ರಮದಿಂದ ಶಿಕ್ಷಣ ಕ್ಷೇತ್ರ ಮುಂದುವರಿಯುವುದಿಲ್ಲ. ಈ ಬಗ್ಗೆೆ ಅಧಿವೇಶನದಲ್ಲಿ ಚರ್ಚೆಯಾಗಬೇಕೆಂದು ಸ್ಪೀಕರ್ ಬಳಿ ಮನವಿ ಮಾಡುತ್ತೇನೆ ಎಂದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ