Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮ್ಯಾಾನ್ಯುಯಲ್ ಸ್ಕ್ಯಾಾವೆಂಜರ್/ ಸಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನಾ ಸಭೆ ಸಾಯಿ ಕರ್ಮಚಾರಿಗಳಿಗೆ ಅಗತ್ಯ ಸೌಲಭ್ಯಕ್ಕೆೆ ಡಿಸಿ ಸಲಹೆ

ಸುದ್ದಿಮೂಲ ವಾರ್ತೆ ರಾಯಚೂರು, ಅ.04:
ಜಿಲ್ಲೆೆಯಲ್ಲಿನ ಸಾಯಿ ಕರ್ಮಚಾರಿಗಳಿಗೆ ವಸತಿ ಮತ್ತು ಪುನರ್ವಸತಿ ಹಾಗೂ ಪೌರ ಕಾರ್ಮಿಕರಿಗೆ ವಿವಿಧ ಸವಲತ್ತು ಒದಗಿಸಲು ಕ್ರಮವಹಿಸಬೇಕು ಎಂದು ಜಿಲ್ಲಾಾಧಿಕಾರಿ ನಿತೀಶ್ ಕೆ. ಅವರು ಸೂಚನೆ ನೀಡಿದರು.
ಇಂದು ನಗರದ ನೂತನ ಜಿಲ್ಲಾಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಸಾಯಿ ಕರ್ಮಚಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಯಿ ಕರ್ಮಚಾರಿಗಳಿಗೆ ನಿಗದಿತ ಸಮಯಕ್ಕೆೆ ನಿಗದಿಪಡಿಸಿದ ವೇತನ ಪಾವತಿಸುವುದು ಹಾಗೂ ವಿವಿಧ ಸೌಲಭ್ಯ ದೊರಕಿಸಿಕೊಡುವುದು ಅಧಿಕಾರಿಗಳ ಜವಾಬ್ದಾಾರಿಯಾಗಿದೆ. ಗುತ್ತಿಿಗೆ ಸಾಯಿ ಕರ್ಮಚಾರಿಗಳಿಗೆ ಗುತ್ತಿಿಗೆ ಏಜೆನ್ಸಿಿದಾರರು ಸಮಯಕ್ಕೆೆ ಸರಿಯಾಗಿ ನಿಗದಿಪಡಿಸಿದ ವೇತನ ಸೌಲಭ್ಯ ವಿತರಿಸುವ ಬಗ್ಗೆೆ ಖಚಿತಪಡಿಸಿಕೊಳ್ಳಬೇಕು. ಹಾಗೂ ವೇತನದೊಂದಿಗೆ ಇಎಸ್‌ಐ, ಪಿಎ್ ಪಾವತಿಸುವ ಬಗ್ಗೆೆ ಪರಿಶೀಲಿಸಿ ನಿಯಮಾನುಸಾರ ಇದ್ದಲ್ಲಿ ಮಾತ್ರವೇ ಗುತ್ತಿಿಗೆದಾರರಿಗೆ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದರು.
ಸಾಯಿ ಕರ್ಮಚಾರಿಗಳ ಪ್ರಮುಖ ಬೇಡಿಕೆಯಾದ ನಗರದ ಸಿಯಾತಲಾಬ್‌ನಲ್ಲಿ ನಿರ್ಮಾಣವಾಗುತ್ತಿಿರುವ ಸಮುದಾಯ ಭವನ ಆದಷ್ಟು ಬೇಗನೆ ಮುಗಿಸಬೇಕು ಎಂದು ಸಾಯಿ ಕರ್ಮಚಾರಿಗಳು ಮನವಿ ಮಾಡಿದರು. ಭವನ ನಿರ್ಮಾಕ್ಕಾಾಗಿ ಕೆಕೆಆರ್‌ಡಿಬಿಯ ಅನುದಾನದಲ್ಲಿ ಕಾಮಗಾರಿ ಪ್ರಗತಿ ಹಂತದಲ್ಲಿದೆ ಎಂದು ಜಿಲ್ಲಾಾಧಿಕಾರಿಗಳು ತಿಳಿಸಿದರು.
ಶೈಕ್ಷಣಿಕ ಸೌಲಭ್ಯ: ವಾರ್ಷಿಕ ಆದಾಯ ಪ್ರಮಾಣವು 2.50 ಲಕ್ಷ ರೂ.ಗಿಂತ ಕಡಿಮೆ ಇರುವ ಎಸ್.ಸಿ.ಎಸ್.ಪಿ ಮ್ಯಾಾನ್ಯುವೆಲ್ ಸ್ಕ್ಯಾಾವೆಂಜರ್ಸ್ ಕುಟುಂಬಗಳ ಮಕ್ಕಳ ವಿಧ್ಯಾಾಭ್ಯಾಾಸದ ಪ್ರವೇಶ ಶುಲ್ಕ ಭರಿಸಲು ನಗರಸಭೆಯಲ್ಲಿ ಅನುದಾನ ಮೀಸಲಿಡಲು ಕ್ರಮ ವಹಿಸುವುದಾಗಿ ಪಾಲಿಕೆಯ ಆಯುಕ್ತ ಜುಬಿನ್ ಮೊಹಪಾತ್ರ ಅವರು ತಿಳಿಸಿದರು.
ಜಿಲ್ಲಾಾ ಪೊಲೀಸ್ ವರಿಷ್ಠಾಾಧಿಕಾರಿ ಪುಟ್ಟಮಾದಯ್ಯ ,ಎಂ., ಐಎಎಸ್ ಪ್ರೊೊಬೆಷನರಿ ಅಧಿಕಾರಿ ಪುರುರಾಜ್ ಸಿಂಗ್, ಜಿಲ್ಲಾಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ, ಜಿಲ್ಲಾಾ ಪಂಚಾಯತ್ ಮುಖ್ಯ ಲೆಕ್ಕಾಾಧಿಕಾರಿ ವಿಜಯಶಂಕರ್, ಸಮಾಜ ಕಲ್ಯಾಾಣ ಇಲಾಖೆಯ ಉಪ ನಿರ್ದೇಶಕರಾದ ಸಿಂಧು, ಸಮಿತಿ ಸದಸ್ಯರಾದ ಮಂಜುನಾಥ, ನೀಲಕಂಠ, ಶಾಂತಪ್ಪ, ಅನಿತಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ