Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಚಿಕ್ಕಬಳ್ಳಾಪುರದಲ್ಲಿ ಚುನಾವಣೆಗೆ ಸಕಲ ಸಿದ್ಧತೆ: ಡಿಸಿ ನಾಗರಾಜ್

ಸುದ್ದಿಮೂಲ ವಾರ್ತೆ
ಚಿಕ್ಕಬಳ್ಳಾಪುರ, ಏ.28: ಜಿಲ್ಲೆಯಲ್ಲಿ ಮಹಿಳಾ ಮತದಾರರೇ ಹೆಚ್ಚಿದ್ದು, ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಏಕೈಕ ಮಹಿಳಾ ಅಭ್ಯರ್ಥಿ ಕಣದಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾಹಿತಿ ನೀಡಿದರು.

ಅವರು ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಪೂರ್ವ ಸಿದ್ದತೆಗಳ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಾ ಜಿಲ್ಲೆಯಲ್ಲಿ 5 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 70 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 10,50,142 ಮತದಾರರ ಪೈಕಿ 5,19,785 ಪುರುಷರು, 5,30,251 ಮಹಿಳಾ ಮತದಾರರಿದ್ದಾರೆ. ಈ ಪೈಕಿ 30,820 ಯುವ ಮತದಾರರಿದ್ದಾರೆ ಎಂದರು.

ಮತದಾರರನ್ನು ಸೆಳೆಯಲು ಮಾದರಿ ಮತಗಟ್ಟೆಗಳನ್ನು ತೆರೆಯುತ್ತಿದ್ದು, 10 ಮಹಿಳಾ ಮತಗಟ್ಟೆಗಳು, 5 ವಿಕಲಚೇತನ ಮತಗಟ್ಟೆಗಳು, 5 ಯುವ ನೌಕರರ ಮತಗಟ್ಟೆಗಳು, 5 ಸಾಂಪ್ರದಾಯಿಕ ಮತಗಟ್ಟೆಗಳು ಹಾಗೂ 5 ಜಿಲ್ಲೆಯ ವಿಶೇಷತೆಯನ್ನು ಸಾರುವ ಮತಗಟ್ಟೆಗಳನ್ನು ತೆರೆಯುವ ಮೂಲಕ ಮತದಾರರನ್ನು ಸೆಳೆಯುವ ಕೆಲಸ ಮಾಡಲಾಗುತ್ತಿದೆ. ವಿಶೇಷ ಮತಗಟ್ಟೆಗಳನ್ನು ರೇಷ್ಮೆ ಉತ್ಮನ್ನಗಳು, ವಿವಿಧ ಬಗೆಯ ಹೂವಿನಿಂದ ಅಲಂಕಾರ ಮಾಡಲಾಗುವುದು. ಈ ಮಾದರಿ ಮತಗಟ್ಟೆಗಳಲ್ಲಿ ಆಕರ್ಷಣೀಯವಾದ ಚಿತ್ರ ಬರಹಗಳಿರಲಿವೆ ಎಂದರು.

ಮತಗಟ್ಟೆಯ ಸಿಬ್ಬಂದಿಗೆ 1ನೇ ಹಂತದಲ್ಲಿ ತರಬೇತಿಯನ್ನು ನೀಡಲಾಗಿದ್ದು, 2ನೇ ಹಂತದ ತರಬೇತಿಯನ್ನು ಮೇ 4 ರಂದು ನೀಡಲಾಗುವುದು. ಈವರೆಗೆ 15,398 ಪಿ.ಆರ್.ಓ, 1,539 ಎ.ಪಿ.ಆರ್.ಓ, 3,078 ಪಿ.ಓ ಹಾಗೂ 321 ಮೈಕ್ರೋ ವೀಕ್ಷಕರಿಗೆ ತರಬೇತಿ ನೀಡಲಾಗಿದೆ ಎಂದರು.

ಹೊಸದಾಗಿ ನೊಂದಣೆಯಾಗಿರುವ ಯುವ ಮತದಾರರಿಗೆ ಮತ್ತು ನಮೂನೆ-8ರಲ್ಲಿ ಅರ್ಜಿ ಸಲ್ಲಿಸಿರುವ ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ಶೀಘ್ರ ಅಂಚೆ ಮೂಲಕ ಕಳುಹಿಸಲು ಕ್ರಮವಹಿಸಲಾಗಿದೆ. ಈಗಾಗಲೇ ಮುಖ್ಯ ಚುನಾವಣಾಧಿಕಾರಿಗಳ ಕಛೇರಿಯಿಂದ ಮತಗಟ್ಟೆಯ ವಿವರ, ಮತದಾನದ ದಿನಾಂಕ, ಸಮಯ ಹಾಗೂ ಮತದಾರರ ವಿವರವುಳ್ಳ ಮತದಾರರ ಮಾಹಿತಿ ಚೀಟಿಯನ್ನು ಸರಬರಾಜು ಮಾಡಲಾಗಿದ್ದು, ವಿಧಾನಸಭಾ ಕ್ಷೇತ್ರವಾರು ಮರುಹಂಚಿಕೆ ಮಾಡಲಾಗಿರುತ್ತದೆ. ಈ ಮತದಾರರ ಮಾಹಿತಿ ಚೀಟಿಯನ್ನು ಮತದಾನದ ದಿನಕ್ಕಿಂತ 5 ದಿನ ಮುಂಚಿತವಾಗಿ ಎಲ್ಲಾ ಮತದಾರರಿಗೆ ಬಿ.ಎಲ್‌.ಓ.ಗಳ ಮುಖಾಂತರ ವಿತರಿಸಲಾಗುವುದು

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ