Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊರ ರಾಜ್ಯಗಳಿಗೆ ಮೇವು ಸರಬರಾಜು ನಿರ್ಬಂಧಿಸಿ ಡಿಸಿ ಆದೇಶ

ಸುದ್ದಿಮೂಲ ವಾರ್ತೆ

ತುಮಕೂರು, ನ. 13 : ತುಮಕೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿಯನ್ನು ನಿರ್ವಹಿಸಲು ಹಾಗೂ ಮೇವಿನ ಲಭ್ಯತೆಯನ್ನು ಸಮರ್ಪಕವಾಗಿ ಬಳಸಲು ಹೊರ ರಾಜ್ಯಗಳಿಗೆ ಮೇವು ಸರಬರಾಜಾಗುವುದನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಆದೇಶಿಸಿದ್ದಾರೆ.

ಮುಂಗಾರು ಹಂಗಾಮಿಗೆ ತುಮಕೂರು ಜಿಲ್ಲೆಯ ಎಲ್ಲಾ 10 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ರಾಜ್ಯ ಸರ್ಕಾರ ಘೋಷಿಸಿದ್ದು, ಜಿಲ್ಲೆಯ ಬರ ಪರಿಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ತುಮಕೂರು ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಮೇವು ಸರಬರಾಜು ಆಗುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಮೇವಿನ ಲಭ್ಯತೆ ಕಡಿಮೆಯಾಗುವ ಸಂಭವವಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಸರಬರಾಜಾಗುವ ಮೇವನ್ನು ನಿರ್ಬಂಧ ಮಾಡಲು ತೀರ್ಮಾನಿಸಲಾಗಿದೆ.

ಈ ಆದೇಶವನ್ನು ಉಲ್ಲಂಘಿಸಿ ಅಕ್ರಮವಾಗಿ ಜಿಲ್ಲೆಯಿಂದ ಹೊರ ರಾಜ್ಯಗಳಿಗೆ ಮೇವು ಸರಬರಾಜು ಮಾಡುತ್ತಿರುವುದು ಕಂಡುಬಂದಲ್ಲಿ ತಕ್ಷಣ ಅಂತಹ ಮೇವನ್ನು ವಶಪಡಿಸಿಕೊಂಡು

ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮವಹಿಸಲು ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆ ಹಾಗೂ ಪೊಲಿಸ್ ಇಲಾಖೆಗೆ ಸೂಚಿಸಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ