Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉದ್ಯೋಗ ಮೇಳದ ಸದೋಪಯೋಗಕ್ಕೆ ಡಿಸಿ ಶ್ರೀನಿವಾಸ .ಕೆ ಕರೆ

ಸುದ್ದಿಮೂಲ ವಾರ್ತೆ

ತುಮಕೂರು, ಜು.31 : ಜಿಲ್ಲೆಯಲ್ಲಿ ಆಗಸ್ಟ್ ಮಾಹೆಯಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀನಿವಾಸ ಕೆ. ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವೀಡಿಯೋ ಕಾನ್ಪೆರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಉದ್ಯೋಗ ಮೇಳದಲ್ಲಿ ಅರ್ಹ ಯುವಕ-ಯುವತಿಯರಿಗೆ ಸ್ಥಳದಲ್ಲೇ ಉದ್ಯೋಗಾವಕಾಶ ನೀಡಲಾಗುವುದು. ಎಸ್ಸೆಸ್ಸೆಲ್ಸಿ ಉತ್ತೀರ್ಣ ಆಥವಾ ಅನುತ್ತೀರ್ಣರಾದವರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಪ್ರತಿಯೊಬ್ಬರು ಸದೋಪಯೋಗ ಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿರುವ ಬೃಹತ್, ಮಧ್ಯಮ, ಸಣ್ಣ ಪ್ರಮಾಣದ ಕ್ಯೆಗಾರಿಕೆಗಳ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಸೆಪ್ಟಂಬರ್ ನಲ್ಲಿ ಜಿಲ್ಲೆಯ ಕ್ಯೆಗಾರಿಕೋದ್ಯಮಿಗಳ ಸಮಾವೇಶ ನಡೆಸಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಬಾಪೂಜಿ ಕೇಂದ್ರಗಳು ಸೇರಿದಂತೆ ಜಿಲ್ಲೆಯ ಜಿಲ್ಲೆಯ ಎಲ್ಲಾ ಸೇವಾ ಕೇಂದ್ರಗಳು ಸಾರ್ವಜನಿಕರಿಗೆ ಅನುಕೂಲವಾಗುವಂತೆ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಬೇಕು. ಸೇವಾ ಕೇಂದ್ರಗಳ ಅವಶ್ಯಕತೆ ಇದ್ದಲ್ಲಿ

ಸ್ಥಳೀಯ ಹಾಗೂ ನಗರ ಸಂಸ್ಥೆಗಳ ವರದಿ ಸಲ್ಲಿಸಬೇಕು. ಗೃಹಲಕ್ಷ್ಮಿ ನೋಂದಣಿಯಲ್ಲಿ ಶೇ.70ರಷ್ಟು ಪ್ರಗತಿ ಸಾಧಿಸಲಾಗಿದ್ದು, ಮುಂದಿನ ವಾರದೊಳಗೆ ಗೃಹಲಕ್ಷ್ಮಿ ನೋಂದಣಿಯಲ್ಲಿ ಜಿಲ್ಲೆಯು ರಾಜ್ಯಮಟ್ಟದಲ್ಲಿ ಮೊದಲನೇ ಸ್ಥಾನಕ್ಕೇರಲು ಶ್ರಮಿಸುವಂತೆ ಸೂಚಿಸಿದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಜಿಲ್ಲಾ ಕಾರ್ಮಿಕಾಧಿಕಾರಿ ರಮೇಶ್, ಎಡಿಎಲ್‌ಆರ್ ಶಿವಶಂಕರ್, ಶಿರಸ್ತೆದಾರ ಎನ್.ನರಸಿಂಹರಾಜು ಸೇರಿದಂತೆ ಜಿಲ್ಲೆಯ ಎಲ್ಲಾ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್‌ಗಳು, ಕಾರ್ಯನಿರ್ವಹಣಾಧಿಕಾರಿಗಳು, ಭೂಸ್ವಾಧೀನಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ