Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ರಾಜಕೀಯ ಸಮಾವೇಶ, ರಾಲಿಗಳಲ್ಲೂ ಪಟಾಕಿ ಬಳಕೆ ನಿಷೇಧ: ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.10:“ಇನ್ನು ಮುಂದೆ ರಾಜ್ಯದಲ್ಲಿ ಹಸಿರು ಪಟಾಕಿಗಳಿಗೆ ಮಾತ್ರ ಅವಕಾಶ. ರಾಜಕೀಯ ಸಮಾವೇಶ, ಮದುವೆ, ಶುಭ ಸಮಾರಂಭಗಳಲ್ಲೂ ಇನ್ನು ಮುಂದೆ ಅಪಾಯಕಾರಿ ಪಟಾಕಿಗಳ ಬದಲು ಹಸಿರು ಪಟಾಕಿ ಬಳಕೆಗೆ ಮಾತ್ರ ಅವಕಾಶ ನೀಡಲಾಗಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.

ಅತ್ತಿಬೆಲೆ ಪಟಾಕಿ ಅವಘಡದ ಹಿನ್ನೆಲೆಯಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಸಭೆ ನಂತರ ಮುಖ್ಯಮಂತ್ರಿಗಳ ಜತೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಇಡೀ ರಾಜ್ಯದಲ್ಲಿ 5 ವರ್ಷಕ್ಕೆ ನೀಡಿರುವ ಪಟಾಕಿ ಮಳಿಗೆ, ದಾಸ್ತಾನು ಪರವಾನಗಿಯನ್ನು ಇನ್ನು ಮುಂದೆ ಒಂದು ವರ್ಷಕ್ಕೆ ಮಾತ್ರ ನೀಡಲಾಗುವುದು. ಈ ಹಿಂದಿನ ಕಾನೂನುಗಳನ್ನು ಮೀರಿ ಅಧಿಕಾರಿಗಳು ಪರವಾನಗಿ ನೀಡಿದ್ದರೆ ಅಂತಹ ಅಧಿಕಾರಿಗಳನ್ನು ಅಮಾನತಿನಲ್ಲಿ ಇಡಲಾಗುವುದು, ಪರಿಶೀಲನೆ ಮಾಡದ ಉನ್ನತ ಅಧಿಕಾರಿಗಳಿಗೆ ನೋಟಿಸ್ ನೀಡಲಾಗುವುದು” ಎಂದರು.

ಸರ್ಕಾರದಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆಯೇ ಎನ್ನುವ ಪ್ರಶ್ನೆಗೆ “ಮುಖ್ಯಮಂತ್ರಿಗಳ ಸಭೆಯೇ ಜಾಗೃತಿ ಮೂಡಿಸುವ ದೊಡ್ಡ ಸಂದೇಶ. ಇತರೇ ಪಟಾಕಿಗಳಿಂದ ಅವಘಡಗಳೆ ಹೆಚ್ಚು, ಅಲ್ಲದೇ ಪರಿಸರಕ್ಕೂ ಹಾನಿ, ಸಾರ್ವಜನಿಕರಿಗೂ ತೊಂದರೆ, ಆದ ಕಾರಣ ಹಸಿರು ಪಟಾಕಿ ಬಳಕೆಗೆ ತೀರ್ಮಾನ ಮಾಡಲಾಗಿದೆ” ಎಂದು ಹೇಳಿದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ