Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾವಗಡ ಸೋಲಾರ್ ಪಾರ್ಕ್ ಗೆ  ಡಿಸಿಎಂ ಡಿ.ಕೆ ಶಿವಕುಮಾರ್, ಇಂದನ ಸಚಿವ ಜಾರ್ಜ್ ಭೇಟಿ


ಸುದ್ದಿಮೂಲ ವಾರ್ತೆ




ತುಮಕೂರು, ಜೂ.14: ಜಿಲ್ಲೆಯ ಪಾವಗಡ ತಾಲ್ಲೂಕು ತಿರುಮಣಿಯಲ್ಲಿರುವ ಏಷ್ಯಾದ ಅತಿದೊಡ್ಡ ಸೋಲಾರ್ ಪಾರ್ಕ್ ಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.



ತಿರುಮಣಿಯಲ್ಲಿರುವ ಕರ್ನಾಟಕ ಸೌರಶಕ್ತಿ ಅಭಿವೃದ್ಧಿ ನಿಗಮದ ಕಚೇರಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಚಿವರುಗಳು, ಇಲಾಖೆ ವತಿಯಿಂದ ನೀಡಿದ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೋಲಾರ್ ಪಾರ್ಕ್ ನಲ್ಲಿ ವಿದ್ಯುತ್ ಉತ್ಪಾದನೆ, ರೈತರ ಜಮೀನಿನ


ಬಾಡಿಗೆ ಪಾವತಿ ಸೇರಿದಂತೆ ಎಲ್ಲ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿದರು.


ಬಳಿಕ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ತಾವು ಇಂಧನ ಸಚಿವರಾಗಿದ್ದಾಗ ಈ ಭಾಗದ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಮೀನು ಖರೀದಿ ಮಾಡದೆ, ಬಾಡಿಗೆ ರೂಪದಲ್ಲಿ ಜಮೀನನ್ನು ಪಡೆದು ಏಷ್ಯಾದಲ್ಲೇ ಅತಿ ದೊಡ್ಡ ಸೋಲಾರ್ ಪಾರ್ಕ್ ನಿರ್ಮಾಣ ಮಾಡಲಾಯಿತು.  ಸೌರಶಕ್ತಿ ವಿದ್ಯುತ್ ಕೇಂದ್ರದಲ್ಲಿ 2400 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಮೂಲಕ ದೇಶದಲ್ಲಿ ಪ್ರಥಮ ಸ್ಥಾನ ಪಡೆದಿದೆ ಎಂದು ಹರ್ಷ ವ್ಯಕ್ತಪಡಿಸಿದರು.


ಪ್ರತಿ ತಿಂಗಳು ಜಮೀನಿನ ಮಾಲೀಕರಾಗಿರುವ ರೈತರ ಖಾತೆಗೆ ಬಾಡಿಗೆ ಹಣ ಜಮೆಯಾಗುತ್ತಿದೆ. ಎಲ್ಲ ಪಾರ್ಕ್‌ ಗಳನ್ನು ಚೆನ್ನಾಗಿ ನಿರ್ವಹಣೆ ಮಾಡಲಾಗುತ್ತಿದೆ. ಸುಮಾರು ನಾಲ್ಕೈದು ಸಾವಿರ ಜನ ಉದ್ಯೋಗ ಮಾಡುತ್ತಿದ್ದಾರೆ.  ರೈತರ ಜಮೀನಿನಲ್ಲಿ ಸೌರಶಕ್ತಿ ಅಳವಡಿಸಿದ್ದರೂ ಕೂಡಾ ರೈತರ ಜಮೀನು ಅವರ ಪಹಣಿ, ಖಾತೆ ಅವರ ಹೆಸರಲ್ಲೇ ಇರುತ್ತದೆ. ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಸಹ ಪಡೆಯಬಹುದು ಎಂದರು.


ಸೋಲಾರ್ ಪಾರ್ಕ್ ಅನ್ನು ಸರಿಯಾಗಿ ನಿರ್ವಹಣೆ ಮಾಡಲಾಗುತ್ತಿದ್ದು,  ರೈತರಿಗೆ ಸರಿಯಾದ ರೀತಿಯಲ್ಲಿ ಭೂ ದಾಖಲೆಗಳನ್ನು ಕಂದಾಯ ಅಧಿಕಾರಿಗಳು ಮಾಡಿಕೊಟ್ಟಿದ್ದಾರೆ. ಇಲ್ಲಿರುವ ವಾಸ್ತವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.


ಉಳಿಮೆಗೆ ಯೋಗ್ಯವಲ್ಲದ ಇನ್ನೂ 10 ಸಾವಿರ ಎಕರೆ ಜಮೀನನ್ನು ರೈತರು ಸೋಲಾರ್ ಪ್ಲಾಂಟ್‌ಗೆ ನೀಡಿದರೆ ಮತ್ತಷ್ಟು ಸೌರ ವಿದ್ಯುತ್ ಉತ್ಪಾದನೆ ಮಾಡಲು ಸಾಧ್ಯವಾಗುತ್ತದೆ. ಪಾವಗಡ ತಾಲ್ಲೂಕಿಗೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯು ಶೇಕಡಾ 90ರಷ್ಟು ಮುಗಿದಿದೆ ಎಂದರು.


ಸೋಲಾರ್ ಪಾರ್ಕ್ ಗೆ ಜಮೀನು ನೀಡಿರುವ ರೈತರಿಗೆ ಎಕರೆಗೆ ವಾರ್ಷಿಕ 25 ಸಾವಿರ ರೂ. ಬಾಡಿಗೆ ನೀಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಇದನ್ನು ಜಾಸ್ತಿ ಮಾಡಬಹುದಾಗಿದೆ. ಈ ಬಾಡಿಗೆ ಆಧಾರದ


ಮೇಲೆ ಸಾಲ ಸಹ ಪಡೆಯಬಹುದಾಗಿದೆ ಎಂದು ಅವರು ಹೇಳಿದರು.


ಇಂಧನ ಸಚಿವ ಕೆ.ಜೆ. ಜಾರ್ಜ್ ಮಾತನಾಡಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರೈತರ ಮಗನಾಗಿರುವುದಕ್ಕೆ ಈ ಭಾಗದ ರೈತರ ಜಮೀನನ್ನು ಸ್ವಾಧೀನಪಡಿಸಿಕೊಳ್ಳದೆ ಬಾಡಿಗೆ ರೂಪದಲ್ಲಿ ಶಾಶ್ವತವಾಗಿ ಆದಾಯ ಬರುವಂತೆ ಮಾಡಿದ್ದಾರೆ. ನಿಜಕ್ಕೂ ಅವರ ಈ ದೂರದೃಷ್ಟಿಯುಳ್ಳ ಆಲೋಚನೆ ಎಲ್ಲರಿಗೂ ಮಾದರಿ ಎಂದರು.


ಮುಂಬರುವ ದಿನಗಳಲ್ಲಿ ಸೋಲಾರ್ ಪಾರ್ಕ್‌ ಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು. ರಾಜ್ಯದ ಹಲವು ಕಡೆ ಸೋಲಾರ್ ಪಾರ್ಕ್ ಸ್ಥಾಪಿಸುವ ಚಿಂತನೆಯನ್ನು ಹೊಂದಲಾಗಿದೆ ಎಂದು ಹೇಳಿದರು.


ಮತ್ತೆ ಈ ಭಾಗದಲ್ಲೂ ರೈತರು ಜಮೀನನ್ನು ನೀಡಲು ಮುಂದೆ ಬಂದರೆ ಮತ್ತಷ್ಟು ಸೋಲಾರ್ ಪಾರ್ಕ್‌ ಗಳನ್ನು ನಿರ್ಮಾಣ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.


ಈ ಸೋಲಾರ್ ಪಾರ್ಕ್ ನಲ್ಲಿ 2 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಸರ್ಕಾರ ಮತ್ತು ನವೀಕರಿಸಬಹುದಾದ ಇಂಧನ ಉದ್ಯಮದ ನಡುವಿನ ಬಾಂಧವ್ಯ ಉತ್ತಮ ಪಡಿಸುವ ಜತೆಗೆ ಹೂಡಿಕೆ ಸಹಯೋಗವನ್ನು ಉತ್ತೇಜಿಸಲು ಹೆಚ್ಚಿನ ಒತ್ತು ನೀಡಲಾಗುತ್ತದೆ. ಮುಖ್ಯವಾಗಿ ಉದ್ಯೋಗ ಸೃಷ್ಟಿಗೆ ಹೊಸ ಮಾರ್ಗಗಳನ್ನು ಅನ್ವೇಷಿಸುವುದು ನಮ್ಮ ಗುರಿ ಎಂದು ವಿವರಿಸಿದರು.


ಈ ಸಂದರ್ಭದಲ್ಲಿ ಶಾಸಕ ಹೆಚ್.ವಿ. ವೆಂಕಟೇಶ್, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್‌ಕುಮಾರ್ ಪಾಂಡೆ, ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ ಗುಪ್ತ, ಪ್ರಭಾರ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಮತ್ತಿತರರು ಭಾಗವಹಿಸಿದ್ದರು.







Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ