Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಮಾ ನದಿ ಪ್ರದೇಶಕ್ಕೆೆ 5 ಟಿಎಂಸಿ ನೀರು ಹೆಚ್ಚುವರಿ ನೀಡಲು ಡಿಸಿಎಂ ಡಿ.ಕೆ .ಶಿವಕುಮಾರ್ ಮನವಿ: ಕೇಂದ್ರ ಸಚಿವರ ಭೇಟಿಮಾಡಿ ರಾಜ್ಯದ ಪರ ಮನವಿ ಸಲ್ಲಿಕೆ ನದಿ ಜೋಡಣೆ ಯೋಜನೆಯಲ್ಲಿ ರಾಜ್ಯಕ್ಕೆೆ 40-45 ಟಿಎಂಸಿ ನೀರು ನಿಗದಿ ಮಾಡಿ

ಸುದ್ದಿಮೂಲ ವಾರ್ತೆ ನವದೆಹಲಿ, ಡಿ.24
ನದಿ ಜೋಡಣೆ ಯೋಜನೆಯಲ್ಲಿ ಕರ್ನಾಟಕಕ್ಕೆೆ ರಾಜ್ಯಕ್ಕೆೆ ಕನಿಷ್ಠ 40-45 ಟಿಎಂಸಿ ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆೆ ನೀಡಬೇಕು ಎಂದು ಜಲಸಂಪನ್ಮೂಲ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಸರ್ಕಾರಕ್ಕೆೆ ಮನವಿ ಮಾಡಿದ್ದಾರೆ.
ನವದೆಹಲಿ ಪ್ರವಾಸದಲ್ಲಿರುವ ಅವರು ಮಂಗಳವಾರ ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿದ ಬಳಿಕ ಇಂದು ಬುಧವಾರ ಕರ್ನಾಟಕ ಭವನದಲ್ಲಿ ಪತ್ರಿಿಕಾಗೋಷ್ಠಿಿಯಲ್ಲಿ ಮಾತನಾಡಿದರು.
ನದಿ ಜೋಡಣೆ ವಿಚಾರವಾಗಿ ಕೇಂದ್ರ ಜಲ ಶಕ್ತಿಿ ಸಚಿವರ ನೇತೃತ್ವದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿಿ ಸಂಸ್ಥೆೆಯನ್ನು ರಚಿಸಲಾಗಿದ್ದು, ಎಲ್ಲಾ ರಾಜ್ಯಗಳು ಅದರ ಸದಸ್ಯರಾಗಿರುತ್ತವೆ. ಮಂಗಳವಾರ ಇದರ 24ನೇ ಸಭೆ ನಡೆದಿದ್ದು, ನಮ್ಮ ರಾಜ್ಯಕ್ಕೆೆ ಸಂಬಂಧಿಸಿದಂತೆ ಗೋದಾವರಿ ಹಾಗೂ ಕಾವೇರಿ, ಬೇಡ್ತಿಿ ಹಾಗೂ ವರದಾ ನದಿ ಜೋಡಣೆ ಬಗ್ಗೆೆ ಚರ್ಚೆ ನಡೆದಿದೆ ಎಂದರು.
ಗೋದಾವರಿ ಹಾಗೂ ಕಾವೇರಿ ನದಿ ಜೋಡಣೆ ಯೋಜನೆಯ ಮೊದಲ ಹಂತದಲ್ಲಿ 148 ಟಿಎಂಸಿ ನೀರನ್ನು ತಿರುಗಿಸಲಾಗುತ್ತಿಿದ್ದು, ಇದರಲ್ಲಿ ಕರ್ನಾಟಕಕ್ಕೆೆ ನಿಗದಿ ಮಾಡಿರುವುದು ಕೇವಲ 15.90 ಟಿಎಂಸಿ ನೀರು ಮಾತ್ರ. ನೀರನ್ನು ಯಾವ ಕಡೆ ನೀಡುತ್ತೀರಿ ಹಾಗೂ ಅದನ್ನು ಹೇಗೆ ಉಪಯೋಗಿಸಬೇಕು ಎಂಬ ಬೇಡಿಕೆ ಸಭೆಯ ಮುಂದಿಟ್ಟಿಿದ್ದೇವೆ.
ಗೋದಾವರಿ ನದಿ ನಮ್ಮ ರಾಜ್ಯಕ್ಕೆೆ ಹತ್ತಿಿರವಿಲ್ಲ. ದೂರವಿದೆ. ಅವರು ನಿಗದಿ ಮಾಡಲಿ, ಅದನ್ನು ಹೇಗೆ ಬಳಸಿಕೊಳ್ಳಬೇಕು ಎಂದು ಆಮೇಲೆ ತೀರ್ಮಾನ ಮಾಡೋಣ ಎಂದರು.
ಬೇಡ್ತಿಿ ಹಾಗೂ ವರದಾ ನದಿ ಜೋಡಣೆ ನಮ್ಮ ರಾಜ್ಯದೊಳಗೆ ಮಾಡಲಿದ್ದು, 18.50 ಟಿಎಂಸಿ ನೀರನ್ನು ಬಳಸಿಕೊಳ್ಳಲು ಅವಕಾಶ ಇದೆ. ಈ ಎರಡೂ ಯೋಜನೆಗಳಿಂದ ಕರ್ನಾಟಕಕ್ಕೆೆ ಒಟ್ಟು 34.40 ಟಿಎಂಸಿ ನೀರನ್ನು ನಿಗದಿ ಮಾಡಲಾಗಿದೆ. ಬೇಡ್ತಿಿ ಹಾಗೂ ವರದಾ ನದಿ ಜೋಡಣೆಗೆ ಡಿಪಿಆರ್‌ತಯಾರಿಸಲು ನಾವು ಅನುಮತಿಯನ್ನು ನೀಡಿದ್ದೇವೆ. ಇದಕ್ಕೆೆ 10 ಸಾವಿರ ಕೋಟಿ ವೆಚ್ಚವಾಗಲಿದ್ದು, ಇದರಲ್ಲಿ ಶೇ.90 ಕೇಂದ್ರ ಸರ್ಕಾರ ಹಾಗೂ ಶೇ.10 ರಾಜ್ಯ ಸರ್ಕಾರ ಭರಿಸಲಿದೆ ಎಂದು ಮಾಹಿತಿ ನೀಡಿದರು.
ಬೇಡ್ತಿಿ-ವರದಾ ನದಿ ಜೋಡಣೆ ಯೋಜನೆಗೆ ವಿರೋಧ ವ್ಯಕ್ತವಾಗುತ್ತಿಿರುವ ಬಗ್ಗೆೆ ಪ್ರತಿಕ್ರಿಿಯಿಸಿದ ಡಿಸಿಎಂ, ರಾಜ್ಯದ ಜನರಿಗೆ ಉಪಯೋಗವಾಗಲು ಕೇಂದ್ರ ಸರ್ಕಾರ 10 ಸಾವಿರ ಕೋಟಿ ಹಾಕಿ ನಮಗೆ 1 ಸಾವಿರ ಕೋಟಿ ಕೇಳುತ್ತಿಿರುವಾಗ ನಾವು ಈ ಯೋಜನೆ ಬೇಡ ಎನ್ನಲು ಆಗುತ್ತದೆಯೇ? ಸಮುದ್ರಕ್ಕೆೆ ಹೋಗುವ ನೀರನ್ನು ಜನರ ಅನುಕೂಲಕ್ಕೆೆ ಬಳಸಲು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದರು.
ಮೇಕೆದಾಟು, ಭದ್ರಾಾ ಮೇಲ್ದಂಡೆ:
ಸುಪ್ರೀಂ ಕೋರ್ಟ್ ಹಿನ್ನೆೆಲೆಯಲ್ಲಿ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಎಲ್ಲಾ ದಾಖಲೆಗಳನ್ನು ಎರಡು ತಿಂಗಳಲ್ಲಿ ಸಲ್ಲಿಕೆ ಮಾಡುತ್ತೇವೆ ಎಂದು ಕೇಂದ್ರ ಸಚಿವರ ಬಳಿ ತಿಳಿಸಿದ್ದೇನೆ. ಭದ್ರಾಾ ಮೇಲ್ದಂಡೆ ಯೋಜನೆಗೆ ಘೋಷಿಸಲಾಗಿರುವ ಹಣವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಾಯಿಸಿದ್ದೇನೆ. ಇನ್ನು ಕೃಷ್ಣಾಾ ಮೇಲ್ದಂಡೆ ಯೋಜನೆ ಬಗ್ಗೆೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಇದರ ಸಂಬಂಧ ಈಗಾಗಲೇ ಎರಡು ಬಾರಿ ಸಭೆ ಮುಂದೂಡಲ್ಪಟ್ಟಿಿದೆ. ಮಹದಾಯಿ ವಿಚಾರವಾಗಿ ಅಧಿಕಾರಿಗಳು ಸಭೆ ಮಾಡಿದ್ದಾರೆ. ಈ ಯೋಜನೆ ವಿಚಾರದಲ್ಲಿ ಅರಣ್ಯ ಇಲಾಖೆ ಮೇಲೆ ಒತ್ತಡ ಹಾಕುವಂತೆ ಕೇಳಿದ್ದೇವೆ ಎಂದರು.
ಕೇಂದ್ರ ಸಚಿವರು ನನಗೆ ಮತ್ತೊೊಂದು ದಿನ ಭೇಟಿಗೆ ಸಮಯಾವಕಾಶ ನೀಡುತ್ತೇನೆ. ಜಲ ಜೀವನ್ ಮಿಷನ್ ಯೋಜನೆಯಿಂದ ಹಿಡಿದು ಕರ್ನಾಟಕಕ್ಕೆೆ ಸಂಬಂಧಿಸಿದ ಎಲ್ಲಾ ವಿಚಾರವಾಗಿ ಚರ್ಚೆ ಮಾಡಲು ತಿಳಿಸಿದ್ದಾರೆ ಎಂದರು.
ಮೆಟ್ರೋೋ ಪರಿಷ್ಕೃತ ದರಕ್ಕೆೆ ಕೋರಿಕೆ:
ಇನ್ನು ಮಂಗಳವಾರ ಕೇಂದ್ರ ನಗರಾಭಿವೃದ್ಧಿಿ ಸಚಿವರಾದ ಮನೋಹರ್ ಲಾಲ್ ಖಟ್ಟರ್ ಅವರನ್ನು ಭೇಟಿ ಮಾಡಿ ಕೆಲವು ಯೋಜನೆಗಳಿಗೆ ಬಾಕಿ ಇರುವ ಅನುಮೋದನೆಗೆ ಮನವಿ ಮಾಡಿದ್ದೇನೆ. ಮೆಟ್ರೋೋ 2ನೇ ಹಂತದ ಯೋಜನೆಗೆ 15 ವರ್ಷಗಳ ಹಿಂದೆ ಅಂದರೆ 2010ರ ಜುಲೈನಲ್ಲಿ ಡಿಪಿಆರ್ ಸಿದ್ಧಪಡಿಸಲಾಗಿತ್ತು. ಆಗ 26 ಸಾವಿರ ಕೋಟಿ ಇದ್ದ ಯೋಜನೆ ವೆಚ್ಚ ಈಗ 40 ಸಾವಿರ ಕೋಟಿಗೆ ಏರಿಕೆಯಾಗಿದೆ. ಭೂಸ್ವಾಾಧೀನ ಪ್ರಕ್ರಿಿಯೆಗೆ 2500 ಕೋಟಿ ಹೆಚ್ಚು ವೆಚ್ಚವಾಗಿದೆ. 2026ರ ಡಿಸೆಂಬರ್ ವೇಳೆಗೆ ಈ ಯೋಜನೆ ಪೂರ್ಣಗೊಳಿಸಲಾಗುವುದು. ಹೀಗಾಗಿ ಈ ಪರಿಷ್ಕೃತ ದರಕ್ಕೆೆ ಒಪ್ಪಿಿಗೆ ನೀಡಬೇಕು ಎಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದ್ದೇವೆ ಎಂದು ತಿಳಿಸಿದರು.
ಮೆಟ್ರೋೋ 3ಎ ಯೋಜನೆಗೆ ಸರ್ಜಾಪುರದಿಂದ ಹೆಬ್ಬಾಾಳದವರೆಗೆ 36.59 ಕಿ.ಮೀ ಉದ್ದದ ಮಾರ್ಗದಲ್ಲಿ 28 ನಿಲ್ದಾಾಣಗಳನ್ನು ಒಳಗೊಂಡಿದೆ. ಇದರಲ್ಲಿ 22.14 ಕಿ.ಮೀ ಮೇಲ್ಸೇತುವೆ ಹಾಗೂ 14.45 ಕಿ.ಮೀ ಸುರಂಗ ಪಥದಲ್ಲಿ ಸಾಗಲಿದ್ದು, ಈ ಯೋಜನೆಗೆ ಒಟ್ಟು 28,405 ಕೋಟಿ ರೂ. ಅಂದಾಜು ಮಾಡಲಾಗಿದೆ. ಈ ಯೋಜನೆಗೆ 15.01.2025ರಂದು ಕೇಂದ್ರ ಸಚಿವಾಲಯದ ಒಪ್ಪಿಿಗೆಗೆ ಪ್ರಸ್ತಾಾವನೆ ಸಲ್ಲಿಸಲಾಗಿದೆ. ಇದಕ್ಕೆೆ ಅನುಮತಿ ನೀಡಿದರೆ ನಾವು ಕೆಲಸ ಆರಂಭಿಸುತ್ತೇವೆ ಎಂದು ಸಚಿವರಿಗೆ ತಿಳಿಸಿದ್ದೇವೆ. ಇದರ ಪರಿಶೀಲನೆಗೆ ಸಿಸ ಎಂಬ ಸಂಸ್ಥೆೆಗೆ ವಹಿಸಲಾಗಿದೆ. ಅದರ ಶಿಾರಸ್ಸಿಿಗೆ ನಾವು ಬದ್ಧವಾಗಿದ್ದೇವೆ ಎಂದು ಡಿಸಿಎಂ ತಿಳಿಸಿದರು.
ಬೆಂಗಳೂರಿನಲ್ಲಿ ಪ್ರಾಾದೇಶಿಕ ಕ್ಷಿಪ್ರ ಸಂಚಾರ ವ್ಯವಸ್ಥೆೆಗೆ (ಆರ್‌ಆರ್‌ಟಿಸಿಎಸ್)ಮನವಿ ಮಾಡಲಾಗಿದೆ. ಬಿಡದಿ- ಮೈಸೂರು, ಹಾರೋಹಳ್ಳಿಿ- ಕನಕಪುರ, ನೆಲಮಂಗಲ- ತುಮಕೂರು, ವಿಮಾನ ನಿಲ್ದಾಾಣ- ಚಿಕ್ಕಬಳ್ಳಾಾಪುರ, ಹೊಸಕೋಟೆ- ಕೋಲಾರ ಮಧ್ಯೆೆ ಈ ಸಂಚಾರ ವ್ಯವಸ್ಥೆೆ ನಿರ್ಮಿಸಲು ಡಿಪಿಆರ್ ತಯಾರಿಸಲು ಮನವಿ ಮಾಡಿದ್ದೇವೆ. ಬೆಂಗಳೂರಿ ದಟ್ಟಣೆ ಹಾಗೂ ಒತ್ತಡ ಕಡಿಮೆ ಮಾಡಲು ಈ ಭಾಗದಲ್ಲಿ ಸ್ಯಾಾಟಲೈಟ್ ಟೌನ್ ನಿರ್ಮಿಸಬೇಕು ಎಂದು ಈ ಯೋಜನೆಗೆ ಮನವಿ ಮಾಡಿದ್ದು, ಇದನ್ನು ಪರಿಗಣಿಸುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಬೆಂಗಳೂರಿಗೆ ಶಕ್ತಿಿ ತುಂಬದಿದ್ದರೆ ದೇಶಕ್ಕೆೆ ಅಪಮಾನ ಮಾಡಿದಂತಾಗುತ್ತದೆ. ಬೆಂಗಳೂರು ಜಾಗತಿಕ ನಗರವಾಗಿ ಬೆಳೆಯುತ್ತಿಿದೆ ಎಂದು ಮನದಟ್ಟು ಮಾಡಿದ್ದೇನೆ ಎಂದರು.
ಟನಲ್ ರಸ್ತೆೆ ರಾಜ್ಯ ಸರ್ಕಾರದ ಯೋಜನೆ:
ಟನಲ್ ಯೋಜನೆಗೂ ಕೇಂದ್ರ ಸರ್ಕಾರಕ್ಕೂ ಸಂಬಂಧವಿಲ್ಲ. ಇದು ಸಂಪೂರ್ಣವಾಗಿ ರಾಜ್ಯ ಸರ್ಕಾರದ ಯೋಜನೆಯಾಗಿದೆ. ಈ ಯೋಜನೆಗೆ ಎರಡು ಮೂರು ಸಂಸ್ಥೆೆಗಳು ಬಿಡ್ ಮಾಡಿವೆ. ಪತ್ರಿಿಕೆಗಳ ವರದಿಗಳ ಮೂಲಕ ಯಾರು ಹಾಕಿದ್ದಾರೆ ಎಂದು ನೋಡಿದ್ದೇನೆ. ಟನಲ್ ರಸ್ತೆೆ ಯೋಜನೆಯನ್ನು ಬಿಲ್ಡ್ ಆಪರೇಟ್ ಟ್ರಾಾನ್ಸ್ ಪೋರ್ಟ್ ಮಾದರಿಯಲ್ಲಿ ಮಾಡಬೇಕಾಗಿದೆ. ಇದು ರಿಸ್ಕ್ ಇರುವ ಯೋಜನೆ ಎಂದು ಗೊತ್ತಿಿದೆ. ಅವರೇ ಬಂಡವಾಳ ಹಾಕಿ ಈ ಯೋಜನೆ ಮಾಡಬೇಕಿದೆ. ಬ್ಯಾಾಂಕರ್‌ಗಳು ಬಂದು ನಮ್ಮನ್ನು ಮನವಿ ಮಾಡಿದರು. ಅದಕ್ಕೆೆ ನಾವು ನೀವು ಯಾರಿಗಾದರೂ ೈನಾನ್ಸ್ ಮಾಡಿ ಎಂದು ಹೇಳಿದ್ದೇವೆ. ಕೆಲವರಿಗೆ ಗಾಬರಿ ಇದೆ. ಮತ್ತೊೊಂದು ಕಡೆ ಒಂದೂವರೆ ಕಿಲೋ ಮೀಟರ್ ಟನಲ್ ರಸ್ತೆೆಗೆ ಮುಂದಾಗಿದ್ದು, ಇದರಿಂದ ಸುಮಾರು 25% ಸಂಚಾರ ದಟ್ಟಣೆ ನಿವಾರಣೆಯಾಗಲಿದೆ ಎಂದುಡಿಸಿಎಂ ಪ್ರಶ್ನೆೆಯೊಂದಕ್ಕೆೆ ಉತ್ತರಿಸಿದರು.
ಪತ್ರಿಿಕಾಗೋಷ್ಠಿಿಯಲ್ಲಿ ಡಿಸಿಎಂ ಕಾಯದರ್ಶಿ ರಾಜೇಂದ್ರ ಚೋಳನ್, ವಿಶೇಷ ಕರ್ತವ್ಯ ಅಧಿಕಾರಿ ವಿಶ್ವನಾಥರೆಡ್ಡಿಿ ಜತೆಗಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ