Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜಕೀಯ ಉದ್ದೇಶವಿಲ್ಲದೆ ಐಟಿ ದಾಳಿ ನಡೆಯುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಸುದ್ದಿಮೂಲ ವಾರ್ತೆ

ಬೆಂಗಳೂರು,ಅ.13:ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಐಟಿ ದಾಳಿ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಉತ್ತರಿಸಿದರು.

ಬೆಂಗಳೂರಿನಲ್ಲಿ ಐಟಿ ದಾಳಿ ಹಿಂದೆ ರಾಜಕೀಯ ಇದೆಯೇ ಎಂದು ಕೇಳಿದಾಗ, "ರಾಜಕೀಯ ಇಲ್ಲದೆ ಯಾವ ಐಟಿ ದಾಳಿ ನಡೆಯುವುದಿಲ್ಲ. ಕೇವಲ ನಮ್ಮಲ್ಲಿ ಮಾತ್ರ ಅಲ್ಲ ಬೇರೆ ರಾಜ್ಯಗಳಲ್ಲೂ ರಾಜಕೀಯ ಪ್ರೇರಿತ ಐಟಿ ದಾಳಿ ಆಗುತ್ತಿವೆ" ಎಂದು ತಿಳಿಸಿದರು.

ಪಂಚರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಕಳಿಸಲಾಗುತ್ತಿದೆ ಎಂಬ ಮಾಜಿ ಸಚಿವ ಅಶ್ವಥ್ ನಾರಾಯಣ ಅವರ ಆರೋಪದ ಬಗ್ಗೆ ಕೇಳಿದಾಗ, "ಹಾದಿ ಬೀದಿಯಲ್ಲಿ ಹೋಗುವವರ ಮಾತಿಗೆ ನಾನು ಉತ್ತರಿಸುವುದಿಲ್ಲ" ಎಂದು ತಿಳಿಸಿದರು.

ಬಿಬಿಎಂಪಿಯಿಂದ ಬಿಡುಗಡೆ ಆದ 650 ಕೋಟಿ ಅನುದಾನದಲ್ಲಿ ಪಡೆದ ಕಮಿಷನ್ ಹಣವನ್ನು ಅಂಬಿಕಾಪತಿ ಮೂಲಕ ಕಳಿಸುತ್ತಿದ್ದರು ಎಂಬ ಆರೋಪದ ಬಗ್ಗೆ ಕೇಳಿದಾಗ, ಈ ವಿಚಾರವಾಗಿ ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಕೆಂಪಣ್ಣ ಆಂತಕ ಪಡಬೇಕಿಲ್ಲ

ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು 'ನಮ್ಮ ಪರಿಸ್ಥಿತಿ ರೈತರಿಗಿಂತ ಶೋಚನೀಯವಾಗಿದೆ. ತನಿಖೆ ಪಕ್ಕಕ್ಕಿಟ್ಟು ಬಿಲ್ ಪಾವತಿ ಮಾಡಲಿ' ಎಂದು ಸರ್ಕಾರಕ್ಕೆ ಮನವಿ ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ

ಬಿಲ್ ಪಾವತಿ ವಿಚಾರದಲ್ಲಿ ಕೆಂಪಣ್ಣ ಅವರು ಆತಂಕ ಪಡುವ ಅಗತ್ಯವಿಲ್ಲ. ಏನಾದರೂ ಇದ್ದರೆ ಬಂದು ನಮ್ಮ ಬಳಿ ಮಾತನಾಡಲಿ. ನಾವು ನ್ಯಾಯ ಒದಗಿಸುತ್ತೇವೆ. ಕೆಂಪಣ್ಣ ಅವರ ಮನವಿ ಮೇರೆಗೆ ನಾವು ತನಿಖೆ ಪಕ್ಕಕ್ಕಿಟ್ಟು, ಆದ್ಯತೆ ಮೇರೆಗೆ ಕಾಮಗಾರಿಗಳ 60-70% ಹಣ ಬಿಡುಗಡೆ ಮಾಡಿದ್ದೇವೆ. ಬಿಲ್ ಪಾವತಿ ಸಮಯದಲ್ಲಿ ಜಿಎಸ್ ಟಿ ಕೂಡ ಪಾವತಿ ಮಾಡಬೇಕು ಹೀಗಾಗಿ ತನಿಖೆ ವರದಿ ಬರುವ ಮುನ್ನವೇ ನಾವು ಸುಮಾರು ಮುಕ್ಕಾಲು ಭಾಗ ಹಣ ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.

ಕೆಂಪಣ್ಣ ಸಚಿವರ ವಿರುದ್ಧ ಆರೋಪ ಮಾಡುತ್ತಿಲ್ಲ ಕೇವಲ ಅಧಿಕಾರಿಗಳ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕೇಳಿದಾಗ, "ಈ ಬಗ್ಗೆ ನಮಗೆ ಮಾಹಿತಿ ಇಲ್ಲ. ಸರಿಯಾದ ತನಿಖೆ ನಡೆಯುವವರೆಗೂ ಪ್ರತಿಕ್ರಿಯೆ ನೀಡುವುದಿಲ್ಲ" ಎಂದು ತಿಳಿಸಿದರು.

ಲೋಡ್ ಶೆಡ್ಡಿಂಗ್ ವಿಚಾರವಾಗಿ ಕೇಳಿದಾಗ, ಈ ವಿಚಾರವಾಗಿ ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ನಾವು ಅಧಿಕಾದಲ್ಲಿ ಇದ್ದಾಗ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಳ ಮಾಡಿದ್ದೆವು, ಬಿಜೆಪಿ ಅವರ ಅವಧಿಯಲ್ಲಿ ಎಷ್ಟು ವಿದ್ಯುತ್ ಉತ್ಪಾದನೆ ಹೆಚ್ಚಳ ಆಗಿದೆ ಎಂಬ ಮಾಹಿತಿ ನನ್ನ ಬಳಿ ಇದೆ. ಮುಖ್ಯಮಂತ್ರಿಗಳ ಸಭೆ ಬಳಿಕ ನಾನು ಮಾತನಾಡುತ್ತೇನೆ ಎಂದು ತಿಳಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ