Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡ ರಾಜ್ಯೋತ್ಸವ ಆಚರಣೆ : ಸಿದ್ಧತೆಗೆ ಡಿಸಿ ಪಿ.ಎನ್.ರವೀಂದ್ರ ಸೂಚನೆ

ಸುದ್ದಿಮೂಲ ವಾರ್ತೆ

ಚಿಕ್ಕಬಳ್ಳಾಪುರ,ಅ.10: ಈ ಬಾರಿಯ ನವೆಂಬರ್ 1 ರಂದು ನಡೆಯುವ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನಗರದ ಸರ್.ಎಮ್.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಭ್ರಮ ಸಡಗರದೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಬಾರಿ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ವೇದಿಕೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ, ನಾಡಗೀತೆ, ಸಮೂಹ ಗೀತ ಗಾಯನ ಮತ್ತು ನೃತ್ಯ , ಗೌರವ ವಂದನೆ, ಸಾಧಕರಿಗೆ ಸನ್ಮಾನ, ಪೊಲೀಸ್ ಕವಾಯತು ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲಾಗುವುದು. ಅಲ್ಲದೆ ನಗರದ ಉಪವಿಭಾಗಾಧಿಕಾರಿ ಕಚೇರಿಯಿಂದ ಬಿ.ಬಿ.ರಸ್ತೆಯ ಮೂಲಕ ಕ್ರೀಡಾಂಗಣದವರೆಗೆ ವಿವಿಧ ಕಲಾ ತಂಡಗಳೊಂದಿಗೆ ಅದ್ಧೂರಿ ಮೆರವಣಿಗೆ ನಡೆಸಲಾಗುವುದು. ಸ್ಥಳೀಯ ಸಾಹಿತಿಗಳನ್ನು ಒಳಗೊಂಡಂತೆ ಪ್ರಮುಖ ಕನ್ನಡ ಸಾಹಿತಿಗಳ ಛಾಯಾಚಿತ್ರಗಳನ್ನು ಹಾಗೂ ಅವರ ಸಂದೇಶಗಳ ಫಲಕಗಳನ್ನು ನಗರದ ಪ್ರಮುಖ ವೃತ್ತಗಳಲ್ಲಿ ಅಳವಡಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.

ರಾಜ್ಯೋತ್ಸವದ ಅಂಗವಾಗಿ ಕನ್ನಡ ಸಾಹಿತ್ಯ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಜಿಲ್ಲೆಯ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಆದ್ದರಿಂದ ಕನ್ನಡ ಸಾಹಿತ್ಯ ಕಲೆ, ಸಂಸ್ಕೃತಿ ಕ್ಷೇತ್ರಗಳಲ್ಲಿ ಸಾಧನೆ ಗೈದಿರುವ ಸಾಧಕರು ಉಪವಿಭಾಗಾಧಿಕಾರಿ ಕಚೇರಿಗೆ ಅರ್ಜಿಯನ್ನು ಸಹ ಸಲ್ಲಿಸಬಹುದು. ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ನಿರ್ಧರಿಸುವ ಸಾಧಕರಿಗೆ ಸನ್ಮಾನ ಮಾಡಲಾಗುವುದು ಎಂದು ಹೇಳಿದರು.

ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ವಿವಿಧ ಕನ್ನಡಪರ ಸಂಘಟನೆಗಳ ಮುಖ್ಯಸ್ಥರು ಹಾಗೂ ಪದಾಧಿಕಾರಿಗಳು ಕನ್ನಡ ರಾಜ್ಯೋತ್ಸವ ಆಚರಣೆಯ ಕುರಿತು ಸಲಹೆಗಳನ್ನು ಸಭೆಗೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಪ್ರಕಾಶ್ ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಕೋಡಿರಂಗಪ್ಪ, ಸಾಹಿತಿ ಗೋಪಾಲಗೌಡ ಕಲ್ವಮಂಜಲಿ, ಚಿಕ್ಕಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಯಳುವಳ್ಳಿ ಸೊಣ್ಣೇಗೌಡ, ಮಾನವ ಹಕ್ಕುಗಳ ಸಂಘದ ಕೃಷ್ಣಪ್ಪ, ಕ. ಸಾ. ಪ ಕಾರ್ಯಕಾರಿಣಿ ಸಮಿತಿ ಸದಸ್ಯ ಮಂಚನಬಲೆ ಶ್ರೀನಿವಾಸ್, ಕಸಾಪ ಸದಸ್ಯರು, ವಿವಿಧ ಕನ್ನಡಪರ ಸಂಘಟನೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ