Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡೀಮ್‌ಡ್‌ ಅರಣ್ಯ ಜಂಟಿ ಸಮೀಕ್ಷೆ ಶೇ.70ರಷ್ಟು ಪೂರ್ಣ: ಈಶ್ವರ ಖಂಡ್ರೆೆ

ಸುದ್ದಿಮೂಲ ವಾರ್ತೆ ಚಿಕ್ಕಬಳ್ಳಾಾಪುರ, ಜ.03:
ರಾಜ್ಯದಲ್ಲಿ ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ನಡೆಸುತ್ತಿಿರುವ ಡೀಮ್ಡ್ ಅರಣ್ಯ ಜಂಟಿ ಸಮೀಕ್ಷೆ ಶೇ.70ರಷ್ಟು ಪೂರ್ಣಗೊಂಡಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆೆ ಹೇಳಿದರು.
ಚಿಕ್ಕಬಳ್ಳಾಾಪುರದ ಉಪ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಪ್ರೀೀಂಕೋರ್ಟ್‌ಗೆ 2022ರಲ್ಲಿ ಸಲ್ಲಿಸುವ ಡೀಮ್ಡ್ ಅರಣ್ಯದ ಪ್ರಮಾಣಪತ್ರದಲ್ಲಿಯೂ ಸಾಕಷ್ಟು ಲೋಪದೋಷವಿದ್ದು, ಇದನ್ನು ಪರಿಹರಿಸಲು ನಡೆಸಲಾಗುತ್ತಿಿರುವ ಜಂಟಿ ಸಮೀಕ್ಷೆ ನಡೆಸಲಾಗುತ್ತಿಿದೆ ಎಂದು ಹೇಳಿದರು.
ಸರ್ಕಾರಿ ಕಟ್ಟಡ, ಪಟ್ಟಾಾಭೂಮಿಯೂ ಈ ಪಟ್ಟಿಿಯಲ್ಲಿ ಸೇರಿದ್ದು, ಅರಣ್ಯ ಹಾಗೂ ಕಂದಾಯ ಅಧಿಕಾರಿಗಳು ಜಂಟಿ ಸರ್ವೆಯನ್ನು ಆದಷ್ಟು ಬೇಗ ಪೂರ್ಣಗೊಳಿಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಸುಪ್ರೀೀಂಕೋರ್ಟ್ ಈ ಲೋಪ ದೋಷ ಪರಿಹರಿಸಲು ಅವಕಾಶ ನೀಡಿದ್ದು, ರಾಜ್ಯಮಟ್ಟದಲ್ಲಿ, ಜಿಲ್ಲಾಮಟ್ಟದಲ್ಲಿ ಹಾಗೂ ವಿಭಾಗೀಯ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಿಸಲಾಗುತ್ತಿಿದೆ ಎಂದರು.
ಸೆಕ್ಷನ್ 4 ಶೀಘ್ರ ಇತ್ಯರ್ಥ:
ಸೆಕ್ಷನ್ 4 ಆಗಿರುವ ಭೂಮಿಯಲ್ಲಿನ ಸಮಸ್ಯೆೆಯನ್ನೂ ಬೇಗ ಬಗೆಹರಿಸಿ, ಸೆಕ್ಷನ್ 17 ಮಾಡಲು ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ. ಅದೇ ರೀತಿ 2015ರ ನಂತರ ಆಗಿರುವ ಅರಣ್ಯ ಒತ್ತುವರಿ ಮತ್ತು 2015ರ ಪೂರ್ವದಲ್ಲಿ ಪಟ್ಟಾಾ ಜಮೀನು ಸೇರಿ 3 ಎಕರೆಗಿಂತ ಹೆಚ್ಚಿಿನ ಅರಣ್ಯ ಭೂಮಿ ಒತ್ತುವರಿ ಆಗಿದ್ದಲ್ಲಿ ಅದ್ಯತೆಯ ಮೇಲೆ ತೆರವು ಮಾಡಲು ಸೂಚಿಸಲಾಗಿದೆ ಎಂದರು.
ಚಿಕ್ಕಬಳ್ಳಾಾಪುರದ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹದ್ದಾರಿ, ಜಿಲ್ಲಾ ಮುಖ್ಯರಸ್ತೆೆ, ಗ್ರಾಾಮೀಣ ರಸ್ತೆೆ ಸೇರಿ ಅಂದಾಜು 4 ಸಾವಿರ ಕಿ.ಲೋ ಮೀರ್ಟ ರಸ್ತೆೆ ಇದ್ದು ರಸ್ತೆೆಯ ಎರಡೂ ಬದಿ ಎತ್ತರದ ಸಸಿಗಳನ್ನು ನೆಟ್ಟು ಪೋಷಿಸಿ ಹಸಿರುಹೊದಿಕೆ ಹೆಚ್ಚಿಿಸಲು ಸೂಚಿಸಲಾಗಿದೆ ಎಂದರು.
ಅರಣ್ಯ ಭೂಮಿಯಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ನಡೆಯುತ್ತಿಿದ್ದರೆ ಪರಿಶೀಲನೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.
ಸ್ಕಂದಗಿರಿ ಅಕ್ರಮದ ವಿರುದ್ಧ ಕ್ರಮ:
ಸ್ಕಂದಗಿರಿ ಚಾರಣಕ್ಕೆೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆ ಆಗದಂತೆ ಕ್ರಮವಹಿಸಲು ಮತ್ತು ಇಲ್ಲಿ ಯಾವುದೇ ಅಕ್ರಮಕ್ಕೆೆ ಅವಕಾಶ ನೀಡದಂತೆ ನಿಯಮ ಪಾಲಿಸಲು ಕಟ್ಟೆೆಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದರು.
ಸಂಸ್ಕರಣೆ ಮಾಡದ ತ್ಯಾಾಜ್ಯ ಜಲವನ್ನು ನದಿ, ಕೆರೆ ಸೇರಿದಂತೆ ಜಲ ಮೂಲಗಳಿಗೆ ಹರಿಸುತ್ತಿಿದ್ದರೆ, ಸ್ಥಳೀಯ ಸಂಸ್ಥೆೆಗಳಿಗೆ ನೋಟಿಸ್ ನೀಡಿ ಕ್ರಮವಹಿಸದಿದ್ದರೆ ಕ್ರಿಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯಲ್ಲಿ ವಾಯು ಮಾಲಿನ್ಯ, ಜಲ ಮಾಲಿನ್ಯ ಆಗದಂತೆ ನಿಯಮಿತವಾಗಿ ಪರೀಕ್ಷೆ ನಡೆಸಿ ಕ್ರಮ ಜರುಗಿಸುವಂತೆ ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಈಶ್ವರ ಖಂಡ್ರೆೆ ತಿಳಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್ ಮತ್ತಿಿತರರು ಪಾಲ್ಗೊೊಂಡಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ