Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರಿ ಭೂಮಿ ಅಕ್ರಮ ಪರಭಾರೆ ; ತಪ್ಪಿತಸ್ತರ ವಿರುದ್ಧ ಖಂಡಿತವಾಗಿ ಕ್ರಮ 

 

ಬೆಂಗಳೂರು, ಜು. 05:ಹೊಸಪೇಟೆ ನಗರಸಭೆ, ಹೊಸಪೇಟೆ ತಾಲೂಕು ಮತ್ತು ಹೂವಿನಹಡಗಲಿ ತಾಲೂಕಿನ ದಾಸರಹಳ್ಳಿ ಗ್ರಾಮದ ಸರ್ಕಾರಿ ಭೂಮಿಗಳ ಅಕ್ರಮ ಪರಭಾರೆಯು ಸರ್ಕಾರದ ಗಮನಕ್ಕೆ ಬಂದಿದ್ದು, ತಪ್ಪಿತಸ್ತರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದ್ದಾರೆ.

ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್ ಅವರು ಸದನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು,

ಹೊಸಪೇಟೆ ಗ್ರಾಮದ 3.49 ಎಕರೆ ಮತ್ತು ಹೊಸಪೇಟೆ ನಗರಸಭೆ ವ್ಯಾಪ್ತಿಯ ಸಂಕಲಾಪುರ ಗ್ರಾಮದ 2.17 ಎಕರೆ ಭೂಮಿಯ ನಕಲಿ ದಾಖಲೆಗಳನ್ನು ಸೃಷ್ಟಿಸಿ ನಮೂನೆ -3 ರನ್ನು ಹಂಚಿಕೆ ಮತ್ತು ಹೂವಿನಹಡಗಲಿಯ ದಾಸರಹಳ್ಳಿ ಗ್ರಾಮದ 8.26 ಎಕರೆ ಭೂಮಿಯ ಅಕ್ರಮ ವಿಲೇವಾರಿ ಮಾಡಿರುವ ಪ್ರಕರಣ ಬಯಲಾಗಿದೆ.

ಹೊಸಪೇಟೆ ನಗರಸಭೆಯ ಹಿಂದಿನ ವಿಷಯ ನಿರ್ವಾಹಕ, ದ್ವಿತೀಯ ದರ್ಜೆ ಸಹಾಯಕರಾಗಿದ್ದ ಎಸ್. ಸುರೇಶ್, ಹಿಂದಿನ ಪ್ರಭಾವ ಕರವಸೂಲಿಗಾರ, ಕಂದಾಯ ನಿರೀಕ್ಷಕರಾಗಿದ್ದ ಜಿ. ನೀಲಕಂಠಸ್ವಾಮಿ (ಹಾಲಿ ಹಿರಿಯ ವಾಲ್‌ಮ್ಯಾನ್, ಹೂವಿನಹಡಗಲಿ ಪುರಸಭೆ) ಅವರನ್ನು ಅಮಾನತು ಮಾಡಿ, ಇಲಾಖಾ ತನಿಖೆಗೆ ಒಳಪಡಿಸಲಾಗಿದೆ. ಪ್ರಭಾರಿ ಕರವಸೂಲಿಗಾರರಾಗಿದ್ದ ಕೆ. ರಮೇಶ್ ಅವರನ್ನು ಬೇರೆಡೆಗೆ ವರ್ಗ ಮಾಡಲಾಗಿದೆ ಎಂದು ಅವರು ಸದನಕ್ಕೆ ಉತ್ತರ ನೀಡಿದರು.

ಹೂವಿನಹಡಗಲಿಯ ದಾಸರಹಳ್ಳಿ ಗ್ರಾಮದ ಸರ್ಕಾರಿ ಭೂಮಿಯನ್ನು ಅನಧಿಕೃತವಾಗಿ ದಾಖಲೆಗಳನ್ನು ತಿದ್ದುಪಡಿ ಮಾಡಿ, ಭೂಮಿ ತಂತ್ರಾAಶದಲ್ಲಿ ಅನಧಿಕೃತ ವ್ಯಕ್ತಿಗಳ ಹೆಸರುಗಳನ್ನು ನಮೂದು ಮಾಡಿ ಪರಭಾರೆ ಮಾಡಿದ ಆರೋಪ ಎದುರಿಸುತ್ತಿರುವ ಹೂವಿನಹಡಗಲಿಯ ಗ್ರೇಡ್-2 ತಹಸೀಲ್ದಾರ್ ನಟರಾಜ, ಕೂಡ್ಲಿಗಿ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ (ಹೂವಿನಹಡಗಲಿ ತಾಲೂಕು ಕಚೇರಿಯಲ್ಲಿದ್ದ ಶಿರಸ್ತೇದಾರ) ಮಹಮ್ಮದ್ ಗೌಸ್, ಹರಪನಹಳ್ಳಿ ತಾಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ (ಹೂವಿನಹಡಗಲಿ ತಾಲೂಕಿನ ಪ್ರಥಮ ದರ್ಜೆ ಸಹಾಯಕರಾಗಿದ್ದ) ಪುನೀತ್ ವಿರುದ್ಧ ಇಲಾಖಾ ವಿಚಾರಣೆ ನಡೆದಿದೆ. ಹಿರೇಹಡಗಲಿ ಹಾಗೂ ದಾಸರಹಳ್ಳಿ ಗ್ರಾಮದ ಆಡಳಿತಾಧಿಕಾರಿಯಾಗಿದ್ದ ಸಿ.ಎಂ. ಕೊಟ್ರೇಶ್ ಅವರನ್ನು ಅಮಾನತು ಮಾಡಿ, ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ.

ಸರ್ಕಾರಿ ದಾಖಲೆಗಳ ತಿದ್ದುಪಡಿ ಮತ್ತು ಅಕ್ರಮ ಪರಭಾರೆ ಕುರಿತು ಹೊಸಪೇಟೆ ಮತ್ತು ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಸಂಬAಧಿಸಿದ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗಿದ್ದು, ಸರ್ಕಾರ ಪ್ರಕರಣವನ್ನು ತೀವ್ರವಾಗಿ ಪರಿಗಣಿಸಿದ್ದು ತಪ್ಪಿತಸ್ತರನ್ನು ಶಿಕ್ಷೆಗೊಳಪಡಿಸಲಾಗುತ್ತದೆ ಎಂದು ಸಚಿವ ಕೃಷ್ಣ ಭೈರೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ